ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾನ ಅವಶ್ಯಕ: ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್

ದೊಡ್ಡಬಳ್ಳಾಪುರ: ಸದೃಢ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಮತದಾನದ ಪಾತ್ರ ಅವಶ್ಯವಾಗಿದೆ ಎಂದು  ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ತಿಳಿಸಿದರು.

ಭಾರತ ಚುನಾವಣಾ ಆಯೋಗ, ತಾಲೂಕು ಆಡಳಿತ, ಸಹಯೋಗದಲ್ಲಿ  ನಗರದ ಡಾ.ರಾಜ್‍ಕುಮಾರ್ ಕಲಾಮಂದಿರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾತಿ, ಧರ್ಮ ಬೇಧಗಳನ್ನು ಲೆಕ್ಕಿಸದೇ ನಿರ್ಬಯವಾಗಿ ತಮ್ಮ ಹಕ್ಕನ್ನು ಚಲಾಯಿಸಲು ಯುವಕರು ಮುಂದಾಗಬೇಕು ಎಂದರು.

ಉತ್ತಮವಾದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಪ್ರಜಾಪ್ರಭುತ್ವದಲ್ಲಿ ಮತದಾನದ ಮೂಲಕ ಅವಕಾಶ ಕಲ್ಪಿಸಿದ್ದು, ಮತ ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಹಕ್ಕು ಹಾಗೂ ಕರ್ತವ್ಯವಾಗಿದೆ. ದೇಶಕ್ಕೆ ಒಳ್ಳೆಯ ಆಡಳಿತವನ್ನು ತರಲು ಚುನಾವಣೆಯ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಯುವ ಜನತೆ ಮತದಾನದ ಮಹತ್ವವನ್ನು ಅರಿತು ಮತದಾನ ಮಾಡಬೇಕೆಂದು ತಿಳಿಸಿದರು.

ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬಲ್ಲ ಆರಂಭಿಕ ಹಂತವೇ ಚುನಾವಣಾ ಪ್ರಕ್ರಿಯೆಯಾಗಿದ್ದು, ಯುವ ಮತದಾರರು  ಪ್ರತಿ ಚುನಾವಣೆಯ ಮತದಾನದಲ್ಲಿ ತಪ್ಪದೇ ತೊಡಗಿಸಿಕೊಂಡಾಗ ಮಾತ್ರ ಪ್ರಜಾಪ್ರಭುತ್ವದ ಆಶಯಗಳು ಅರ್ಥಪೂರ್ಣವಾಗಲಿದೆ.

ಮತದಾನದ ಮಹತ್ವ ಹಾಗೂ ಭಾರತ ಚುನಾವಣಾ ಆಯೋಗ ಸ್ಥಾಪಿಸಿದ ನೆನಪಿಗಾಗಿ 2011 ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಮಾಡಲಾಗುತ್ತಿದೆ. ಸಾರ್ವತ್ರಿಕ ಚುನಾವಣೆಗಳಲ್ಲಿ ಶೇ.100 ಮತದಾನವಾದಾಗ ಮಾತ್ರ ಪ್ರಜಾಫ್ರಭುತ್ವ ವ್ಯವಸ್ಥೆ ಬಲಗೊಳ್ಳಲಿದೆ. ಆದರೆ ಚುನಾವಣೆಗಳಲ್ಲಿ ಶೇ.65 ಮತದಾನಗಳಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಹಲವಾರು ದೇಶಗಳಲ್ಲಿ ಮತದಾನವನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ನಮ್ಮ ದೇಶದಲ್ಲಿ ಮತದಾನ ಇನ್ನೂ ಕಡ್ಡಾಯವಾಗಿಲ್ಲ. ಮತದಾನ ಮಾಡಲು ಯಾವುದೇ ತಾರತಮ್ಯವಿಲ್ಲ. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನಕ್ಕೆ ಅರ್ಹರಾಗಿದ್ದು,  ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಾಯಿಸಿಕೊಳ್ಳುವುದಷ್ಟೇ ಅಲ್ಲದೇ ಮತದಾನ ಪ್ರಾಮುಖ್ಯವನ್ನು ಅರಿಯಬೇಕಿದೆ ಎಂದ ಅವರು ಮತದಾರರ ಹೆಸರಗಳನ್ನು ನೋಂದಣಿ ಹಾಗೂ ಪರಿಷ್ಕರಣೆಯಲ್ಲಿ ಮತಗಟ್ಟೆ ಅಕಾರಿಗಳ ಪಾತ್ರ ಮಹತ್ವದ್ದಾಗಿದೆ. ಯಾವುದೇ ಲೋಪಗಳಾಗದಂತೆ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ  ಮತದಾರರ ಜಾಗೃತಿಗಾಗಿ ಪ್ರತಿಜ್ಞಾವಿ ಬೋಧಿಸಲಾಯಿತು. 

ಉತ್ತಮವಾಗಿ ಕಾರ್ಯ ನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ನೀಡಲಾಯಿತು. 

ಚುನಾವಣಾ ಶಾಖೆಯ ಸಿಬ್ಬಂದಿ ವಿ.ರವಿಕುಮಾರ್ ಅವರನ್ನು ವಿಶೇಷವಾಗಿ ಅಭಿನಂದಿಸಲಾಯಿತು.

ನೂತನವಾಗಿ ನೋಂದಾಯಿಸಿದ  ಮತದಾರರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಮತದಾನದ ಕುರಿತಾಗಿ ನಡೆದ ವಿವಿಧ  ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಚುನಾವಣಾ ಶಿರಸ್ತೇದಾರ್ ಕೆ.ಕಿರಣ್ ಕುಮಾರ್, ಕೊಂಗಾಡಿಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಿ.ಎನ್.ಬಾಬು, ಪ್ರಾಂಶುಪಾಲರಾದ ಆನಂದ ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಸೋಮಶೇಖರ್, ಸಿಡಿಪಿಓ ಅನಿತಾಲಕ್ಷ್ಮೀ, ನಗರಸಭೆ ಚುನಾವಣಾ ಶಾಖೆಯ ಸುಲ್ತಾನ್, ನಗರ ಠಾಣೆ ಸಬ್ ಇನ್ಸ್‌ಪಕ್ಟರ್ ಗೋವಿಂದ್, ಪ್ರಾಧ್ಯಾಪಕ ಸದಾಶಿವ,  ರಾಮಚಂದ್ರಗೌಡ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!