ದೊಡ್ಡಬಳ್ಳಾಪುರ: ಭಾರತ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದುದು. ಮತದಾನ ಜನರ ಪ್ರಮುಖ ಹಕ್ಕು. ಪ್ರಜೆಗಳಿಂದ ಆಯ್ಕೆಯಾದ ಸರಕಾರ ಜನರ ಆಶೋತ್ತರಗಳಂತೆಯೇ ನಡೆಯಬೇಕೆಂಬುದು ಸಂವಿಧಾನದ ನಿಯಮ.
ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ಆಯ್ಕೆ ಮಾಡಲು ಮತದಾನ ಪ್ರಕ್ರಿಯೆ ನಡೆಯುತ್ತದೆ. ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿಯೇ ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ.
ಆದರೆ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಇಂತಹ ಮಹತ್ವದ ಕಾರ್ಯಕ್ರಮದ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿಲ್ಲವೆಂಬ ದೂರು ಕೇಳಿಬಂದಿದೆ
ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ತಾಲೂಕು ಆಡಳಿತ ಸದ್ದಿಲ್ಲದೆ ಕಾರ್ಯಕ್ರಮ ಆಯೋಜಿಸಿದ್ದು, ಕರೊನಾಂತಕದ ನಡುವೆ ಕೆಲ ಶಾಲ ಮಕ್ಕಳನ್ನು ಕರೆತಂದು ನೆಪ ಮತ್ರಕ್ಕೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂಬುದು ಸಾರ್ವಜನಿಕರ ದೂರು.
ಗ್ರಾಮೀಣ ಪ್ರದೇಶಗಳಿಂತ ನಗರ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗುತ್ತಿದೆ. ವಿದ್ಯಾವಂತರು ಹೆಚ್ಚಿರುವ ನಗರ ಪ್ರದೇಶದಲ್ಲಿ ಮತದಾನ ಆಗುತ್ತಿಲ್ಲ. ಮತದಾನ ಜವಾಬ್ದಾರಿಯ ಅರಿವಿದ್ದೂ ದೂರ ಉಳಿಯುವ ವಿದ್ಯಾವಂತರಿಗೆ ಹಾಗೂ ಅರಿವಿಲ್ಲದೆ ದೂರ ಉಳಿಯುವ ಅವಿದ್ಯಾವಂತರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವುದು ಈ ದಿನದ ಉದ್ದೇಶ. ಆದರೆ ಈ ಕುರಿತು ಪ್ರಚಾರ ನೀಡಬೇಕಾದ ತಾಲೂಕು ಆಡಳಿತ ಬೇಜವಬ್ದಾರಿಯುತವಾಗಿ ವರ್ತಿಸಿದೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….