ದೇವರಾಜ ಅರಸು ಎಜುಕೇಶನಲ್ ಟ್ರಸ್ಟ್ ಸಾರ್ವಜನಿಕರ ಆಸ್ತಿ ಕುಟುಂಬದ ಟ್ರಸ್ಟ್ ಅಲ್ಲ; ಜಾಲಪ್ಪನವರ ಕನಸಿನ ಸಂಸ್ಥೆಯ ಆಶಯಗಳಿಗೆ ಧಕ್ಕೆಯಾಗಬಾರದು – ಜಿ.ಹೆಚ್.ನಾಗರಾಜ್ ಸ್ಪಷ್ಟನೆ

ಕೋಲಾರ: ದೇವರಾಜ ಅರಸು ಟ್ರಸ್ಟ್‌ ದಿ.ಆರ್‌.ಎಲ್‌.ಜಾಲಪ್ಪ ಅವರ ಆಶಯ ಹಾಗೂ ಆಶೋತ್ತರಗಳಂತೆ ನಡೆಯುತ್ತಿದ್ದು, ಜಾಲಪ್ಪನವರ ಕುಟುಂಬಸ್ಥರಿಗೆ ಇದರಲ್ಲಿ ಹಕ್ಕಿಲ್ಲ. ಟ್ರಸ್ಟ್‌ ಬೈಲಾದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಆಡಳಿತಾಧಿಕಾರಿ ಜಿ.ಎಚ್‌.ನಾಗರಾಜ್‌ ಅವರು ಸ್ಪಷ್ಟಪಡಿಸಿದ್ದಾರೆ.

ಸಂಸ್ಥೆಯ ಮೇಲೆ ಹಕ್ಕು ಸಾಧಿಸಲು ಕುಟುಂಬಸ್ಥರು ಸೋಮವಾರ ನಡೆಸಿದ ಗದ್ದಲ ಸಂಬಂಧ ಟ್ರಸ್ಟಿಗಳೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ಇದು ಕುಟುಂಬದ ಟ್ರಸ್ಟ್ ಅಲ್ಲ. ಸಾರ್ವಜನಿಕರ ಟ್ರಸ್ಟ್ ಆಗಿದ್ದು. ಜಾಲಪ್ಪನವರು ನಿಧನ ಹೊಂದುವ ಮೊದಲು ತಮ್ಮ ಕುಟುಂಬದವರು ಯಾರಿರಬೇಕು ಎಂಬುದನ್ನು ನಿರ್ಧರಿಸಿದ್ದರು ಎಂದರು.

ಟ್ರಸ್ಟ್‌ ವಿಚಾರಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ಸೀಲಿಂಗ್ ಲೆಟರ್ನಲ್ಲಿ ಜಾಲಪ್ಪನವರು ತಮ್ಮ ಪುತ್ರ ರಾಜೇಂದ್ರ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಈ ಹಿಂದಿನ ಸಭೆಯಲ್ಲಿ ಜಾಲಪ್ಪನವರ ಮೊಮ್ಮಗ ಅರವಿಂದ್ ಅವರೇ ಅಧ್ಯಕ್ಷರ ಹೆಸರನ್ನು ಅನುಮೋದಿಸಿದ್ದರು. ಸದ್ಯ ಜಾಲಪ್ಪನವರ ಪುತ್ರ ರಾಜೇಂದ್ರ ಅವರೇ ಟ್ರಸ್ಟ್ ನ ಉಪಾಧ್ಯಕ್ಷರಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈಗಿನ ಟ್ರಸ್ಟ್ ಯಾವುದೇ ಕಾನೂನು ಬಾಹಿರ ಕೆಲಸ ಮಾಡುತ್ತಿಲ್ಲ. ಇದರ ಹಿಂದೆ ರಾಜಕೀಯ ಪಿತೂರಿ ಇರಬಹುದು. ಉತ್ತಮ ಬಾಂದವ್ಯ ಇದ್ದ ಕುಟುಂಬವನ್ನು ಒಡೆದಿದ್ದರ ಹಿಂದೆ ಷಡ್ಯಂತ್ರ ನಡೆಯುತ್ತಿದೆ. ಬಹಿರಂಗವಾಗಿ ಹೇಳಿದರೆ ಕೆಲವರಿಗೆ ನೋವಾಗಬಹುದು. ಆಡಳಿತ ಪಕ್ಷದ ಬಹುತೇಕರು ಇದರ ಹಿಂದೆ ಇದ್ದಾರೆ ಅನ್ನುವುದನ್ನು ಹೇಳಿದ್ದೇನೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಟ್ರಸ್ಟಿಯಾಗಿದ್ದವರು. ಅವರು ನಮ್ಮ ಜೊತೆ ಮಾತಾಡಿದ್ದಾರೆ. ಹೊಸ ಸಮಿತಿಯಲ್ಲಿ ರಾಜೇಂದ್ರ ಅವರ ಹೆಸರಿದೆ. ಈಗ ನಮ್ಮ ಮೇಲೆ ಮಾಡಲಾಗುತ್ತಿರುವ ಯಾವುದೇ ಆರೋಪಕ್ಕೆ ಹುರುಳಿಲ್ಲ. ಜಾಲಪ್ಪನವರದ್ದು ನನ್ನದು 50 ವರ್ಷದ ಬಾಂದವ್ಯ. ನನ್ನ ಮನೆ ಮೇಲೆ ಮೂರು ಬಾರಿ ರೈಡ್ ಹಾಗೂ ಸಂಸ್ಥೆಯ ಮೇಲೂ ಎರಡು ಬಾರಿ ರೈಡ್ ಮಾಡಲಾಗಿದೆ. ಈ ವಿಚಾರದಲ್ಲಿ ನಮಗೆ ಕ್ಲೀನ್ ಚಿಟ್ ಸಿಕ್ಕಿದೆ. ಸಂಸ್ಥೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಸಾರ್ವಜನಿಕ ಟ್ರಸ್ಟ್ ಆಗಿರುವ ಕಾರಣ ಕುಟುಂಬದ ಹಸ್ತಕ್ಷೇಪದ ವಿಚಾರವೇ ಬರುವುದಿಲ್ಲ. ಬೈಲಾ ಪ್ರಕಾರ ಏನು ಇದೆಯೋ ಅದನ್ನೇ ಕಾರ್ಯಗತ ಗೊಳಿಸಲಾಗಿದೆ ಎಂದರು. 

ಆರ್. ಎಲ್‌. ಜಾಲಪ್ಪನವರು ಯಾವುದೇ ಮಕ್ಕಳನ್ನೂ ಹತ್ತಿರ ಸೇರಿಸುತ್ತಿರಲಿಲ್ಲ. ರಾಜಕೀಯವಾಗಿಯೂ ಹಾಗೂ , ಕಾನೂನುಬದ್ಧವಾಗಿಯೂ ವಿಚಾರ ಎದುರಿಸಲು ಸಿದ್ಧ. ಟ್ರಸ್ಟ್ ಗೆ ಬೈಲಾ ನಿಯಮವೇ ಅಂತಿಮ ಎಂದಿದ್ದಾರೆ.

2004ರಿಂದ ಟ್ರಸ್ಟ್ ನಲ್ಲಿ ಸಕ್ರಿಯನಾಗಿದ್ದೇನೆ. ಅಲ್ಲದೆ ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷನಾಗಿದ್ದೆ. ನಂತರ ರಾಜಕಾರಣ ಬಿಟ್ಟು ಪೂರ್ಣ ಪ್ರಮಾಣದಲ್ಲಿ ಟ್ರಸ್ಟ್ ಕೆಲಸದಲ್ಲಿ ಗುರುತಿಸಿಕೊಂಡಿದ್ಡೆದೇನೆ ಎಂದು ಜಾಲಪ್ಪನವರ ಮೂರನೇ ಮಗ ರಾಜೇಂದ್ರ ಸ್ಪಷ್ಟಪಡಿಸಿದ್ದಾರೆ.

ನಮ್ಮ ತಂದೆ ಸತ್ತು ತಿಂಗಳು ಕಳೆಯುತ್ತಿದ್ದ ಹಾಗೆ ಈ ರೀತಿ ಮಾಡಿದ್ದು ಸರಿಯಲ್ಲ. ನಾನು ಜಾಲಪ್ಪನವರ ಸಂಸ್ಥೆಯ ಪರವಾಗಿ ನಿಂತಿದ್ದೇನೆ. ಕುಟುಂಬಕ್ಕಿಂತ ಜಾಲಪ್ಪನವರ ಆಶಯಗಳು ಮುಖ್ಯ. ಕುಟುಂಬದವರ ಮನಸನ್ನು ಕೆಡಿಸಿದ ಕ್ಷುದ್ರ ಜನರಿದ್ದಾರೆ . ಮಾಜಿ ಸಿಎಂ ಸಿದ್ದರಾಮಯ್ಯನವರ ಬಳಿ ಟ್ರಸ್ಟ್ ವಿಚಾರ ಈಗಾಗಲೇ‌ ಮಾತಾಡಿದ್ದೇವೆ . ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳಬೇಕಾದ ವಿಚಾರವಿದು. ಅವರಿನ್ನೂ ಕುಟುಂಬದ ಟ್ರಸ್ಟ್ ಅನ್ನುವ ತಪ್ಪು ಭಾವನೆಯಲ್ಲಿದ್ದಾರೆ. ಹೀಗಾಗಿಯೇ ಅವರಲ್ಲಿ ಗೊಂದಲಗಳಿವೆ. ಅಕ್ರಮಗಳು ನಡೆದಿದ್ದರೇ ಅವರ ಬೇಡಿಕೆಯಂತೆ ತನಿಖೆಯಾಗಲಿ ಎಂದು ಸವಾಲು ಹಾಕಿದರು. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ:

ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="111370"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!