ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೃಷಿ ಇಲಾಖೆ ವತಿಯಿಂದ “ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡದ ಉದ್ಘಾಟನಾ ಸಮಾರಂಭ”ವನ್ನು ಜನವರಿ 27 ರಂದು ಸಂಜೆ 4.00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ಏರ್ಪಡಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ಅವರ ಘನ ಉಪಸ್ಥಿತಿಯಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪೌರಾಡಳಿತ, ಸಣ್ಣ ಕೈಗಾರಿಕೆಗಳು, ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೋವಿಡ್ ಉಸ್ತುವಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ), ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ನ ಆಡಳಿತಾಧಿಕಾರಿ ಪಿ.ಹೇಮಲತಾ, ದೊಡ್ಡಬಳ್ಳಾಪುರ ಎ.ಪಿ.ಎಂ.ಸಿ.ಯ ಅಧ್ಯಕ್ಷರಾದ ಎನ್.ವಿಶ್ವನಾಥರೆಡ್ಡಿ, ಕೆ.ಎಂ.ಎಫ್.ನ ನಿರ್ದೇಶಕರಾದ ಬಿ.ಸಿ.ಆನಂದ್, ಕನಸವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಜಯ್ ಕುಮಾರ್, ಉಪಾಧ್ಯಕ್ಷರಾದ ಶೋಭಾ.ವಿ.ಎಂ, ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಅಧ್ಯಕ್ಷರಾದ ಅಂಜನೇಗೌಡ, ಉಪಾಧ್ಯಕ್ಷರಾದ ಜಯರಾಮಯ್ಯ ಹಾಗೂ ವಿಶೇಷ ಆಹ್ವಾನಿತರಾಗಿ ಕೃಷಿ ಇಲಾಖೆ ಆಯುಕ್ತರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೋನ ವಂಶಿಕೃಷ್ಣ ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಕೃಷಿಕ ಸಮಾಜದ ನಿರ್ದೇಶಕರು ಮತ್ತು ರೈತ ಬಾಂಧವರು ಭಾಗವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….