ದೊಡ್ಡಬಳ್ಳಾಪುರ: ತಾಲೂಕಿನ ವಿವಿಧೆಡೆ ಗಣರಾಜ್ಯೋತ್ಸವ

ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು: ದೊಡ್ಡಬಳ್ಳಾಪುರ ತಾಲೂಕು  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು ಅವರು ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದಲ್ಲಿ ಕಸಾಪ ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಜಿಲ್ಲಾ ಕಸಾಪ ಕೋಶಾಧ್ಯಕ್ಷ ನ.ಮಹಾದೇವ್, ದೊಡ್ಡಬಳ್ಳಾಪುರ ಕಸಾಪ ಗೌರವ ಕಾರ್ಯದರ್ಶಿ ಎ.ಜಯರಾಮ, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿಗಳಾದ ಆರ್.ಗೋವಿಂದರಾಜು, ಉಪನ್ಯಾಸಕ  ಮಾಳವ ನಾರಾಯಣ ಸ್ವಾಮಿ, ಯುವಕವಿ ಅಂಜನ್ ಕಾಡನೂರು ಪಾಳ್ಯ ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.

ಎಸ್.ಜೆ.ಸಿ.ಆರ್.ಶಾಲೆ: ತಾಲೂಕಿನ ಮೆಳೇಕೋಟೆಕ್ರಾಸಿನ ಎಸ್.ಜೆ.ಸಿ.ಆರ್ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ತೆಂಗಿನ ನಾರಿನ ಸಹಕಾರ ಮಹಾಮಂಡಳಿಯ ಅಧ್ಯಕ್ಷ ವೆಂಕಟೇಶ್‍ಬಾಬು ಸರ್ವಶ್ರೇಷ್ಠವಾದ ಸಂವಿಧಾನ ನೀಡುವ ನಿಟ್ಟಿನಲ್ಲಿ ರಾಷ್ಟದ ಅಗ್ರಗಣ್ಯ ಚಿಂತಕರ ಹಾಗೂ ತಜ್ಞರ ಚಿಂತನೆಯ ಫಲವಾಗಿ ಭಾರತ ಸಂವಿಧಾನ ರೂಪುಗೊಂಡಿದೆ. ದೇಶದ ಎಲ್ಲಾ  ಪ್ರಜೆಗಳು ಸಂವಿಧಾನದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್. ಅಪ್ಪಯ್ಯಣ್ಣ, ಮುಖಂಡರಾದ ಕೃಷ್ಣಪ್ಪ, ರಾಜಶೇಖರ್, ಗೌರೀಶ್,  ಶಾಲೆಯ ಮುಖ್ಯೋಪಾಧ್ಯಾಯ ಹೆಚ್. ಎಲ್. ವಿಜಯಕುಮಾರ್, ಸಹ ಮುಖ್ಯೋಪಾಧ್ಯಾಯ ಚಂದುಕುಮಾರ್ ಉಪಸ್ಥಿತರಿದ್ದರು.

ಹಣ್ಣು ಹಂಪಲು ವಿತರಣೆ: ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ 6ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಇತರೆ ದಿನೋಪಯೋಗಿ  ವಸ್ತುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ  ಸಮಿತಿಯ ಸಂಸ್ಥಾಪಕ ರವಿಮಾವಿನಕುಂಟೆ, ಆಸ್ಪತ್ರೆಯ ವೈದ್ಯಾಕಾರಿ ಡಾ. ರಮೇಶ್ ಸಮಿತಿಯ ಜಿಲ್ಕಾಧ್ಯಕ್ಷ ಸುಬ್ರಮಣಿ, ಜಿಲ್ಲಾ ಯುವಘಟಕದ ಅಧ್ಯಕ್ಷ ಮಂಜುನಾಯ್ಕ್, ನವೀನ್ ಹಮಾಮ್ , ಅನಿಲ್ ರೆಡ್ಡಿ , ರುದ್ರೆಶ್ ತಪಸೀಹಳ್ಳಿ, ನಾಗಭೂಷಣ್ , ಹಾಗೂ ಪದಾಕಾರಿಗಳು ಭಾಗವಹಿಸಿದ್ದರು.

ಎಬಿವಿಪಿ: ತಾಲೂಕಿನ ತುರುವನಹಳ್ಳಿ ಗ್ರಾಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರು ಗ್ರಾಮಾಂತರ ವಿಭಾಗದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಕೋವಿಡ್ ನಿಯಮಗಳನ್ನು ಪಾಲಿಸಿ,ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಹ ಸಂಚಾಲಕ ಸುಬ್ರಮಣಿ, ಸಂಘಟನಾ ಕಾರ್ಯದರ್ಶಿ ಶಿವಾನಂದ ಕಾಂಬಳೆ ಹಾಗೂ ಶಾಲೆ ಮುಖ್ಯಸ್ಥರು,ಶಾಲಾ ಮಕ್ಕಳು, ಊರಿನ ಹಿರಿಯರು ಉಪಸ್ಥಿತರಿದ್ದರು.

ಡಿ.ಕೊಂಗಾಡಿಯಪ್ಪ ವಿದ್ಯಾಸಂಸ್ಥೆ: ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಸ್ಮಾರಕ ವಿದ್ಯಾಸಂಸ್ಥೆಯ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ನಡೆಯಿತು. ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಉಪಾಧ್ಯಕ್ಷ ಪಿ.ವಿ.ಶ್ರೀನಿವಾಸಮೂರ್ತಿ ಧ್ವಜಾರೋಹಣ ಮಾಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಕಾರಿಗಳು, ನಿರ್ದೇಶಕರುಗಳು, ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರರು, ಎನ್.ಸಿ.ಸಿ ಕೆಡೆಟ್‍ಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!