ದೊಡ್ದಬಳ್ಳಾಪುರ: ನಗರದ ಪ್ರತಿಷ್ಠಿತ ಶಾಲೆಯಾದ ಎಂ.ಎಸ್.ವಿ. ಪಬ್ಲಿಕ್ ಶಾಲೆಯಲ್ಲಿ ಇಂದು 73ನೇ ಗಣರಾಜ್ಯೋತ್ಸವವನ್ನು ಸರಳ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ಅಧ್ಯಕ್ಷ ಸುಬ್ರಮಣ್ಯ.ಎ. ಧ್ವಜಾರೋಹಣವನ್ನು ನೆರವೇರಿಸಿ, ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಪ್ರಾಂಶುಪಾಲರಾದದ ನಾಗರತ್ನ.ಎನ್.ಪಾಲನ್ ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸರಳವಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಶ್ರೀವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 73 ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದರ್ಶ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ವಿ ವಹಿಸಿದ್ದರು.
ಮುಖ್ಯ ಅತಿಥಿ ಗಳಾಗಿ ಆದರ್ಶ ಎಜುಕೇಷನಲ್ ಟ್ರಸ್ಟ್ನ ಗೌರವಾಧ್ಯಕ್ಷ ನಾರಾಯಣಪ್ಪ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಪ್ರಾಂಶುಪಾಲರಾದ ಬಿ. ಆರ್. ವೇಣುಗೋಪಾಲ್, ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ದತೆ ಬಗ್ಗೆ ಸಲಹೆ ನೀಡುವುದರ ಜೊತೆಗೆ ಗಣರಾಜ್ಯೋತ್ಸವ ಆಚರಣೆಯ ಹಿನ್ನೆಲೆಯನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಭಾಷಣ, ಸಾಂಸ್ಕೃತಿಕ ಕಾರ್ಯಕ್ರಮಗಳ ಹಾಗೂ ಯೋಗ ಚಟುವಟಕೆಗಳನ್ನು ನಡೆಸಿಕೊಟ್ಟರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….