ದೊಡ್ಡಬಳ್ಳಾಪುರ; ಸಂವಿಧಾನದ ಆಶಯಗಳನ್ನು ಈಡೇರಿಸಬೇಕಿದೆ: ಉಪವಿಭಾಗಾಧಿಕಾರಿ ಅರುಳ್ ಕುಮಾರ್ / ಎಂ.ಸಿ.ಜಿ.ಪಿ ಘಟಕದ ಕಸದ ಸಮಸ್ಯೆ; ಗಣರಾಜ್ಯೋತ್ಸವದ ವೇಳೆ ಸರ್ಕಾರಕ್ಕೆ ದಿಕ್ಕಾರ ಕೂಗಿದ ಕರವೇ ಮುಖಂಡ…!

ದೊಡ್ಡಬಳ್ಳಾಪುರ: ಸಮಪಾಲು, ಸಮಬಾಳು ಆಶಯದೊಂದಿಗೆ ಜಾತ್ಯಾತೀತ ಪರಿಕಲ್ಪನೆ, ಸಮಾನತೆ ಹಾಗೂ ಮೂಲ ಭೂತ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಗೌರವಿಸುವ ಮೂಲಕ ಅದರ ಆಶಯಗಳಿಗೆ ದಕ್ಕೆ ಬಾರದಂತೆ ನಡೆದುಕೊಳ್ಳುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಪ್ರಜೆಗಳಿಗೂ ಇದೆ ಎಂದು ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಹೇಳಿದರು.

ನಗರದ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 

ಸಂವಿಧಾನ ರೂಪುಗೊಂಡ ಬಗೆ, ಮತ್ತು ಭಾರತೀಯ ಸಂವಿಧಾನದ ರೂಪುರೇಷೆ, ವೈಶಿಷ್ಟ್ಯಗಳ ಕುರಿತು ಮಾಹಿತಿ ನೀಡಿದ ಅವರು, ಜಗತ್ತಿನಲ್ಲಿಯೇ ಶ್ರೇಷ್ಟವಾದ ಲಿಖಿತ ಸಂವಿಧಾನ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವವರ ನಾಯಕತ್ವದಲ್ಲಿ ಅತ್ಯುತ್ತಮ ಸಂವಿಧಾನವನ್ನು ರಚಿಸಲಾಯಿತು. ಜನವರಿ 26 ಪ್ರತಿಯೊಬ್ಬ ಭಾರತೀಯನ ಹೆಮ್ಮೆಯ ದಿನ. ಅಂತೆಯೇ ಮತದಾನದ ಜಾಗೃತಿ ಮೂಡಿಸಲು ಜ.25ರಂದು ಆಚರಿಸುವ ರಾಷ್ಟ್ರೀಯ ಮತದಾರರ ದಿನಾಚರಣೆ ಸಹ ಪ್ರಜಾಪ್ರಭುತ್ವದಲ್ಲಿ ಪ್ರಮುಖವಾಗಿದೆ ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ನಮ್ಮ ಭಾರತೀಯ ಸಂವಿಧಾನಕ್ಕೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ನೀಡಿ ಜಗತ್ತೇ ಭಾರತದ ಸಂವಿಧಾನದತ್ತ ಹಿಂತಿರುಗಿ ನೋಡುವಂತೆ ಮಾಡಿದವರು ಡಾ.ಬಿ.ಆರ್.ಅಂಬೇಡ್ಕರ್. ದೇಶ ನಮಗೇನು ಮಾಡಿದೆ ಎನ್ನುವುದಕ್ಕಿಂತ, ದೇಶಕ್ಕೆ ನಾವು ಏನು ಮಾಡಿದ್ದೇವೆ ಎನ್ನುವುದನ್ನು ಅರಿಯಬೇಕಿದೆ. ಕೋವಿಡ್19 ಹರಡುತ್ತಿರುವ ಇಂದಿನ ಸಂದರ್ಭದಲ್ಲಿ ಆರೋಗ್ಯ, ಶಿಕ್ಷಣ, ಸಾಮಾಜಿಕ ಮೊದಲಾದ ಕ್ಷೇತ್ರಗಳಲ್ಲಿ ದೇಶವನ್ನು ಮುನ್ನಡೆಸಬೇಕಿದೆ ಎಂದರು.

ಸನ್ಮಾನ: ಗಣರಾಜ್ಯೋತ್ಸವದಲ್ಲಿ ಕೊವಿಡ್-19 ಸಂದರ್ಭದಲ್ಲಿ ಸೇವೆ ಸಲ್ಲಿಸಿದ ವೈದ್ಯರು ಪೊಲೀಸ್ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು, ಅಂಗನವಾಡಿ, ಗ್ರಾಮ ಪಂಚಾಯಿತಿ ನೌಕರರು ಮೊದಲಾಗಿ ಕೋವಿಡ್ ವಾರಿಯರ್ಸ್‍ಗಳನ್ನು  ಅಭಿನಂದಿಸಲಾಯಿತು. ಕೊವಿಡ್ ಸಂದರ್ಭದಲ್ಲಿ ಕೊವಿಡ್‍ನಿಂದ ಮೃತಪಟ್ಟವರ ಅಂತ್ಯಕ್ರಿಯೆ ವೇಳೆ ನೆರವು ನೀಡಿದ ದೇವಾಂಗ ಮಂಡಲಿಯನ್ನು ಸಂಘ ಸಂಸ್ಥೆಗಳ ವಿಭಾಗದಲ್ಲಿ ಅಭಿನಂದಿಸಲಾಯಿತು.

ಎನ್.ಸಿ.ಸಿ, ಸೇವಾದಳ, ಪೊಲೀಸ್ ಸಿಬ್ಬಂದಿ, ಶಾಲಾ ಮಕ್ಕಳ ಕಿರು ಬ್ಯಾಂಡ್ ಸೆಟ್‍ನ್ನೊಳಗೊಂಡ ಪಥಸಂಚಲನ ಸರಳವಾಗಿ ನಡೆಯಿತು.

ಸಮಾರಂಭದಲ್ಲಿ ತಹಶೀಲ್ದಾರ್ ಮೋಹನ ಕುಮಾರಿ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನಾ ತಾಜ್, ಟಿಎಪಿಎಂಸಿಎಸ್ ನಿಕಟಪೂರ್ವ ಅಧ್ಯಕ್ಷ ಸಿದ್ದರಾಮಯ್ಯ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರೆಡ್ಡಿ, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು ಸೇರಿದಂತೆ ನಗರಸಭೆ ಸದಸ್ಯರು ಹಾಜರಿದ್ದರು.

ಸರ್ಕಾರಕ್ಕೆ ದಿಕ್ಕಾರ ಕೂಗಿದ ಕರವೇ ಮುಖಂಡ: ಸಮಾರಂಭದಲ್ಲಿ ಉಪವಿಭಾಗಾಧಿಕಾರಿಗಳ ಭಾಷಣದ ನಂತರ ವೇದಿಕೆ ಮುಂದೆ ಮಧ್ಯಪ್ರವೇಶಿಸಿದ ಕರವೇ ಕನ್ನಡಿಗರ ಬಣದ ರಾಜ್ಯ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ತಾಲೂಕಿನ ಚಿಗರೇನಹಳ್ಳಿ ಗ್ರಾಮದಲ್ಲಿ ಎಂ.ಸಿ.ಜಿ.ಪಿ ಘಟಕದ ಕಸದಿಂದ ಉಂಟಾಗಿರುವ ಸಮಸ್ಯೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಿ, ಘಟಕವನ್ನು ಮುಚ್ಚಿ ಎಂದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುವ ಭರವಸೆ ನೀಡಿ, ಇದುವರೆಗೂ ಸಭೆಯನ್ನು ಮಾತ್ರ ನಡೆಸಿಲ್ಲ.

ಜನರ ಆರೋಗ್ಯ ಹದಗೆಡಲು ಕಾರಣವಾದ ಈ ಘಟಕವನ್ನು ಮುಚ್ಚಲು ನಿರ್ಲಕ್ಷ್ಯ ಮಾಡುತ್ತಿರುವ ಸರ್ಕಾರಕ್ಕೆ ಹಾಗೂ ಸರ್ಕಾರದ ಈ ಕಾರ್ಯಕ್ರಮಕ್ಕೆ ದಿಕ್ಕಾರ ಎಂದು ಕೂಗಿದರು.

ಪ್ರತಿಭಟನೆಗೆ ನಿರ್ಬಂಧವಿರುವುದರಿಂದ ಒಬ್ಬನೇ ಪ್ರತಿರೋಧ ವ್ಯಕ್ತಪಡಿಸುತ್ತಿರುವುದಾಗಿ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಉದ್ಯೋಗ ನೀಡದ ಮೋದಿ ಸರ್ಕಾರ.. ಯುವಕರನ್ನು ರೀಲ್ಸ್ ಮಾಡಿ ಎನ್ನುತ್ತಿದೆ: ರಾಹುಲ್ ಗಾಂಧಿ ವಾಗ್ದಾಳಿ

ಉದ್ಯೋಗ ನೀಡದ ಮೋದಿ ಸರ್ಕಾರ.. ಯುವಕರನ್ನು ರೀಲ್ಸ್ ಮಾಡಿ ಎನ್ನುತ್ತಿದೆ: ರಾಹುಲ್ ಗಾಂಧಿ

ಪಕೋಡಾ ಮಾರುವುದು ಎಂದು ಉದ್ಯೋಗವೇ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಈಗ ನಮ್ಮ ಸರ್ಕಾರದ ಕಡಿಮೆ ದರದಲ್ಲಿ ಸಿಗುವ ಇಂಟರ್ನೆಟ್ ಬಳಸಿ ಇನ್ಸ್ಟಾಗ್ರಾಮ್ (Instagram) ಮೂಲಕ ರೀಲ್ಸ್ (Reels) ಮಾಡಿ

[ccc_my_favorite_select_button post_id="115475"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!