ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಜ.26ರ ಬುಲೆಟಿನ್ ಅನ್ವಯ ಇಂದು ಜಿಲ್ಲೆಯಲ್ಲಿ ಹೊಸದಾಗಿ 828 ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ 1287 ಜನ ಗುಣಮುಖರಾಗಿದ್ದಾರೆ.
ವರದಿಯನ್ವಯ ಹೊಸಕೋಟೆ ತಾಲೂಕಿನ 163 ಪುರುಷರು,80 ಮಹಿಳೆಯರು ಸೇರಿ 243.
ದೇವನಹಳ್ಳಿ ತಾಲೂಕಿನ 107 ಪುರುಷರು, 73 ಮಹಿಳೆಯರು ಸೇರಿ 180.
ದೊಡ್ಡಬಳ್ಳಾಪುರ ತಾಲೂಕಿನ 54 ಪುರುಷರು, 45 ಮಹಿಳೆಯರು ಸೇರಿ 99.
ನೆಲಮಂಗಲ ತಾಲೂಕಿನ 169 ಪುರುಷರು, 127 ಮಹಿಳೆಯರು ಸೇರಿ 296 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಉಳಿದಂತೆ ಬೆಂಗಳೂರು ಉತ್ತರ ಹಾಗೂ ಅನ್ಯ ಜಿಲ್ಲೆಯ 10 ಪುರುಷರು, 04 ಮಹಿಳೆಯರು ಸೇರಿ 10 ಮಂದಿಗೆ ಸೋಂಕು ತಗುಲಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7128ಕ್ಕೆ ಇಳಿಕೆಯಾಗಿದೆ. ಅಲ್ಲದೆ 158889 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಅನ್ವಯ1312 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಮೃತರ ವರದಿ: ದೇವನಹಳ್ಳಿಯ 76 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
(ಆತಂಕ ಬೇಡಾ, ಮುಂಜಾಗ್ರತೆ ಇರಲಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….