ಗ್ರಾಮ ಒನ್ ಇಂದಿನಿಂದ 3026 ಗ್ರಾಮ ಪಂಚಾಯಿತಿಗಳಲ್ಲಿ ಆರಂಭ: ಮಾರ್ಚ್ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಣೆ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಯೋಜನೆ ಇಂದಿನಿಂದ ರಾಜ್ಯದ 3026 ಗ್ರಾಮ ಪಂಚಾಯಿತಿಗಳಲ್ಲಿ ಆರಂಭವಾಗಿದೆ. ಮಾರ್ಚ್ ಅಂತ್ಯದೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಬುಧವಾರ ವರ್ಚುಯಲ್ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ  ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನರ ಸಮಯ ಹಾಗೂ ಹಣ ಉಳಿಸುವ ಗ್ರಾಮ ಒನ್: ಸರ್ಕಾರದ ಸೌಲಭ್ಯ ಪಡೆಯಲು ಜನರು  ಸಮಯ ಹಾಗೂ ಹಣ ವ್ಯಯಿಸುವುದನ್ನು ತಪ್ಪಿಸಿ, ಗ್ರಾಮೀಣ ಜನರ ಬಳಿಯೇ ಸೇವೆಗಳನ್ನು ತಲುಪಿಸುವ ಧ್ಯೇಯದೊಂದಿಗೆ ಗ್ರಾಮ ಒನ್ ಕಾರ್ಯಕ್ರಮವನ್ನು ರೂಪಿಸಲಾಗಿದೆ.

ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಹಲವಾರು ಸೇವೆಗಳು ಗ್ರಾಮ ಮಟ್ಟದಲ್ಲಿ ಲಭ್ಯವಾಗಿಸುವ  ಚಿಂತನೆಯಿಂದ ಗ್ರಾಮ ಒನ್ ಪ್ರಾರಂಭಿಸಲಾಗಿದೆ. ತಾಲ್ಲೂಕು ಕಚೇರಿಯಲ್ಲಿ  ಸೇವೆಗಳಿಗಾಗಿ ಜನಸಂದಣಿ ತಪ್ಪಿಸಲು ಹಾಗೂ ಸೇವೆಗಳ ಪೂರೈಕೆಯಲ್ಲಿ ವಿಕೇಂದ್ರೀಕರಣದ ಉದ್ದೇಶದಿಂದ, ಗ್ರಾಮಮಟ್ಟದಲ್ಲಿಯೂ ಈ ಎಲ್ಲ ಸೇವೆಗಳನ್ನು ಒದಗಿಸಲಾಗುವುದು.  ಗ್ರಾಮಸ್ಥರು ನೇರವಾಗಿ ಗ್ರಾಮ ಪಂಚಾಯತಿಗಳಿಗೆ ತೆರಳಿ ಗ್ರಾಮ ಒನ್ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.

ಜನರ ವಿಶ್ವಾಸವನ್ನು ಪುನರ್ ಸ್ಥಾಪಿಸುವ ಚಿಂತನೆ: ಉತ್ತಮ ಸಲಕರಣೆ ,ಸಮರ್ಥ ಹಾಗೂ ಸದೃಢ ತಂತ್ರಜ್ಞಾನದಿಂದ ಯಾವುದೇ ಅಡಚಣೆಗಳಿಲ್ಲದೆ ಗ್ರಾಮೀಣ ಜನರಿಗೆ ಸೇವೆ ಒದಗಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. 12 ಜಿಲ್ಲೆಗಳ 3026 ಗ್ರಾಮ ಪಂಚಾಯತಿಗಳಲ್ಲಿ ಈ ಸೇವೆಯನ್ನು ಪ್ರಾರಂಭಿಸಲಾಗಿದ್ದು, ಈ ಹಿಂದೆ 4 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿ, ಅನುಷ್ಠಾನದಲ್ಲಿನ ಎಲ್ಲ ತೊಡಕುಗಳನ್ನು ನಿವಾರಿಸಲಾಗಿದೆ. ಜನರಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವ ಕ್ರಾಂತಿಕಾರಿ ಬದಲಾವಣೆ ಇದಾಗಿದೆ. ತಳಮಟ್ಟದಲ್ಲಿ ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ ಸುಲಭವಾಗಿ ತಲುಪಿಸಲಾಗುವುದು. ಈ ವ್ಯವಸ್ಥೆಯ ಮೂಲಕ ಸರ್ಕಾರದ ಕಾರ್ಯನಿರ್ವಹಣೆಯ ಮೇಲಿನ ಜನರ ವಿಶ್ವಾಸವನ್ನು ಪುನರ್ ಸ್ಥಾಪಿಸುವ ಚಿಂತನೆ ಇದೆ ಎಂದು ತಿಳಿಸಿದರು. 

ಗ್ರಾಮ ಸ್ವರಾಜ್ಯದಿಂದ ಗ್ರಾಮ ಸುರಾಜ್ಯದೆಡೆಗೆ: ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯ ಹಾಗೂ ಅಟಲ್ ಬಿಹಾರಿ ವಾಜಪೇಯಿಯವರ ಗ್ರಾಮ ಸುರಾಜ್ಯ , ಸ್ವರಾಜ್ಯದಿಂದ ಸುರಾಜ್ಯದೆಡೆಗೆ ಗ್ರಾಮಗಳನ್ನು ಒಯ್ಯಲು ಆಧುನಿಕ ತಂತ್ರಜ್ಞಾನ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದರು.

ಗ್ರಾಮ ಒನ್ – ದಕ್ಷ ವ್ಯವಸ್ಥೆಯಾಗಿಸಲು ಸೂಚನೆ: ಮನೆ ಹೊಲ ಹಕ್ಕು ಪತ್ರಗಳು, ಸಂಧ್ಯಾ ಸುರಕ್ಷಾ, ಅಂಗವಿಕಲರ ಮಾಸಾಶನ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹೀಗೆ ಜನರ ಹತ್ತಾರು ಸೇವೆಗಳ ಅವಶ್ಯಕತೆಗಳನ್ನು ಪೂರೈಸುವ  ಪ್ರಯತ್ನವಾಗಿದೆ.  ಪ್ರಮುಖ ಸೇವೆಗಳಿಗೆ ಸೀಮಿತಗೊಳಿಸಿ ಅತ್ಯಂತ ದಕ್ಷ  ವ್ಯವಸ್ಥೆಯನ್ನಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ.  ಈ ವ್ಯವಸ್ಥೆಯನ್ನು ನಿರಂತರವಾಗಿ ಸುಧಾರಿಸುವ ಮೂಲಕ ಜನರಿಗೆ ಸಮರ್ಪಕವಾಗಿ ಸೇವೆಗಳನ್ನು ಒದಗಿಸಲಾಗುವುದು ಎಂದರು.

ಗ್ರಾಮ ಒನ್ ಬಗ್ಗೆ ಜನರಲ್ಲಿ ಅರಿವು: ಶಾಸಕರು, ಸಚಿವರು ಹಾಗೂ ಜನಪ್ರತಿನಿಧಿಗಳು ಗ್ರಾಮ ಒನ್ ವ್ಯವಸ್ಥೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮ ಒನ್ ಕಾರ್ಯನಿರ್ವಹಣೆಯ ಬಗ್ಗೆ ಪರಿಶೀಲಿಸಬೇಕೆಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಗ್ರಾಮ ಒನ್ ಯಶಸ್ಸಿಗೆ ಜಿಲ್ಲಾಧಿಕಾರಿಗಳ ನಾಯಕತ್ವ: ಗ್ರಾಮ ಒನ್ ನ ಪ್ರಾಯೋಗಿಕ ಹಂತದಲ್ಲಿಯೇ 6 ಲಕ್ಷಕ್ಕಿಂತ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ ಸೇವೆಗಳನ್ನು ಪೂರೈಸಲಾಗಿದೆ. ತಹಶೀಲ್ದಾರರು, ಸಹಾಯಕ ಕಮೀಷನರ್ ರ ಸಹಕಾರ ಬಹಳ ಮುಖ್ಯ.  ಅನ್ ಲೈನ್ ನಲ್ಲಿ ಸ್ವೀಕೃತವಾಗುವ ಅರ್ಜಿಗಳಿಗೆ ಶೀಘ್ರವಾಗಿ ಮಂಜೂರಾತಿ ನೀಡದಾಗ ಮಾತ್ರ ಸಂಬಂಧಪಟ್ಟ ಪ್ರಮಾಣ ಪತ್ರಗಳನ್ನು ಜನರಿಗೆ ದೊರಕಿಸಿಕೊಡಲು ಸಾದ್ಯವಾಗುತ್ತದೆ.  ಜನರಿಗೆ ಸೇವೆಗಳನ್ನು ಒದಗಿಸುವ ಎಲ್ಲ ಹಂತದ ವ್ಯವಸ್ಥೆಯನ್ನು ತಾಲ್ಲೂಕು ಕಚೇರಿಯಲ್ಲಿ ಕಲ್ಪಿಸಿ ಆನ್ಲೈನ್ ನಲ್ಲಿಯೇ ಎಲ್ಲ ಪರಿಹಾರವನ್ನು ಒದಗಿಸುವ ವ್ಯವಸ್ಥೆ ಆಗಬೇಕು. ಇದಕ್ಕಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಈ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಜವಾಬ್ದಾರಿ  ಹಾಗೂ ನಾಯಕತ್ವ ವಹಿಸಬೇಕು. ಸರ್ಕಾರದ ಪ್ರಥಮ ಆದ್ಯತೆಯ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವ ಗ್ರಾಮ ಒನ್: ಗ್ರಾಮೀಣ ಜನರ ಬದುಕಿನಲ್ಲಿ ಬದಲಾವಣೆ ತಂದು ಜೀವನದ ಗುಣಮಟ್ಟವನ್ನು ಉನ್ನತೀಕರಿಸಲು ಸರ್ಕಾರದ ಸೇವೆಗಳನ್ನು ಸುಲಭವಾಗಿ ದೊರಕಿಸಿಕೊಟ್ಟು ಗ್ರಾಮ ಒನ್ ವ್ಯವಸ್ಥೆಯ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಹಾಗೂ ಜನಮನದಲ್ಲಿ ಉಳಿಯುವಂತಹ ಕಾರ್ಯಕ್ರಮ ವಾಗಬೇಕು. ಜನರ ಬದುಕನ್ನು ನಂ.1 ಮಟ್ಟಕ್ಕೆ ಏರಿಸಲು ಗ್ರಾಮ ಒನ್ ಸಹಕರಿಸುವಂತಾಗಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹಾವೇರಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೋಜನೆ ಉದ್ಘಾಟನಾ ಸಮಾರಂಭ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅರ್ಜಿ ಸ್ವೀಕರಿಸಿ ಆಯುಷ್ಮಾನ್ ಭಾರತ, ಆರ್ ಟಿ ಸಿ, ಸಂಧ್ಯಾ ಸುರಕ್ಷಾ ಕಾರ್ಡ್, ರಹವಾಸಿ ಪ್ರಮಾಣಪತ್ರ ಮುಂತಾದ ಪ್ರಮಾಣಪತ್ರಗಳನ್ನು ವಿತರಣೆ ಮಾಡಲಾಯಿತು. ತಕ್ಷಣವೇ ಪ್ರಮಾಣಪತ್ರ ವಿತರಿಸಲು ವ್ಯವಸ್ಥೆ ಮಾಡಿಕೊಂಡಿದ್ದ ಇ ಆಡಳಿತ ಇಲಾಖೆ ಅಧಿಕಾರಿಗಳ ಕಾರ್ಯವನ್ನು ಸಿಎಂ ಬೊಮ್ಮಾಯಿ ಶ್ಲಾಘಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

BJP ಯತ್ನಾಳ್ಗೆ ಎಚ್ಚರಿಕೆ ನೀಡಲು ವಿಜಯೇಂದ್ರ ಹಿಂದೇಟು..!

BJP ಯತ್ನಾಳ್ಗೆ ಎಚ್ಚರಿಕೆ ನೀಡಲು ವಿಜಯೇಂದ್ರ ಹಿಂದೇಟು..!

ರಮೇಶ್ ಜಾರಕಿಹೊಳಿ ವಿಷಯದಲ್ಲಿ ಮಾತಾಡಿದ ಹಾಗೆ ತನ್ನ ಬಗ್ಗೆ ಮಾತಾಡಿದರೆ ಪರಿಣಾಮ ನೆಟ್ಟಗಿರೋದಿಲ್ಲ ಎಂದು ಯತ್ನಾಳ್ BJP

[ccc_my_favorite_select_button post_id="101125"]
ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr K Sudhakar

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr

ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶುಗಳ ಲಾಲನೆ, ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಿ. Dr K Sudhakar

[ccc_my_favorite_select_button post_id="101146"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

ಚಾಲಕನೊಂದಿಗೆ ಓಂಶಕ್ತಿ ಮಾಲಾಧಾರಿ ಮಹಿಳೆಯಿದ್ದು, ಆಕೆಯನ್ನು ಆಲಹಳ್ಳಿ ಬಿಟ್ಟು ನಂತರ ಯಶೋಧಮ್ಮ ಅವರನ್ನು ಮನೆಗೆ ಬಿಡುವುದಾಗಿ ಚಾಲಕ ಕರೆದೊಯ್ದಿದ್ದಾನೆ. Doddaballapura

[ccc_my_favorite_select_button post_id="101115"]

ATM: ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾದ

[ccc_my_favorite_select_button post_id="101113"]

Crime news: 23 ಕೋಟಿ ರೂ. ಮೌಲ್ಯದ

[ccc_my_favorite_select_button post_id="101107"]

Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!|

[ccc_my_favorite_select_button post_id="101094"]

News update: ಸೈಫ್ ಅಲಿ ಖಾನ್‌ಗೆ ಚಾಕು

[ccc_my_favorite_select_button post_id="101085"]
ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ ಸಮೇತ ಸೋದರ ಮಾವನ ದಾರುಣ ಸಾವು…!| Accident

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ

ಎರಡು ಬಸ್ ಗಳ ನಡುವೆ ಸಿಲುಕಿದ ಬೈಕ್ ಸವಾರ ಅಪಘಾತಕ್ಕೀಡಾಗಿ ತನ್ನ ತಂಗಿಯ ಮಗಳ ಜೊತೆಗೆ ತಾನು ದಾರುಣವಾಗಿ ಸಾವನ್ನಪ್ಪಿದ್ದಾನೆ. Accident

[ccc_my_favorite_select_button post_id="101076"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!