ಇಂದು (ಜ.27) ರಂದು ಕನಸವಾಡಿಯ ರೈತ ಸಂಪರ್ಕ ಕೇಂದ್ರ ಉದ್ಘಾಟನೆ: ಸಚಿವರಿಗೆ ಪ್ರತಿಭಟನೆ ಬಿಸಿ ತಟ್ಟುವ ಸಾಧ್ಯತೆ..!

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೃಷಿ ಇಲಾಖೆ ವತಿಯಿಂದ ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡದ ಉದ್ಘಾಟನೆ ಜನವರಿ 27 ರಂದು ಸಂಜೆ 4.00 ಗಂಟೆಗೆ ತಾಲ್ಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ಏರ್ಪಡಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಉಪಸ್ಥಿತಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡವನ್ನು ಉದ್ಘಾಟಿಸಬೇಕಿತ್ತಾದರು. ಕೃಷಿ ಸಚಿವರು ಕಾರ್ಯಕ್ಕೆ ಗೈರಾಗುವ ಸಾಧ್ಯತೆ ನಿಶ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪೌರಾಡಳಿತ, ಸಣ್ಣ ಕೈಗಾರಿಕೆಗಳು, ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೋವಿಡ್ ಉಸ್ತುವಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ), ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ನ ಆಡಳಿತಾಧಿಕಾರಿ ಪಿ.ಹೇಮಲತಾ, ದೊಡ್ಡಬಳ್ಳಾಪುರ ಎ.ಪಿ.ಎಂ.ಸಿ.ಯ ಅಧ್ಯಕ್ಷ ಎನ್.ವಿಶ್ವನಾಥರೆಡ್ಡಿ, ಕೆ.ಎಂ.ಎಫ್.ನ ನಿರ್ದೇಶಕ ಬಿ.ಸಿ.ಆನಂದ್, ಕನಸವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಜಯ್‌ ಕುಮಾರ್, ಉಪಾಧ್ಯಕ್ಷ ಶೋಭಾ.ವಿ.ಎಂ, ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಅಧ್ಯಕ್ಷರಾದ ಅಂಜನೇಗೌಡ,  ವಿಶೇಷ ಆಹ್ವಾನಿತರಾಗಿ ಕೃಷಿ ಇಲಾಖೆ ಆಯುಕ್ತರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೋನ ವಂಶಿಕೃಷ್ಣ ಅನೇಕರು ಭಾಗವಹಿಸುವ ನಿರೀಕ್ಷೆಯಿದೆ.

ಪ್ರತಿಭಟನೆ ಸಾಧ್ಯತೆ: ರಾಗಿ ಖರೀದಿ ದಿನಾಂಕ ವಿಸ್ತರಣೆ, ತಾಲೂಕಿಗೆ ವಿವಿಧ  ಅನುದಾನಗಳ ನೀಡದ ರಾಜ್ಯ ಸರ್ಕಾರದ ನಿಲುವನ್ನು ಖಂಡಿನೆ ಮುಂತಾದ ವಿಚಾರದ ಕುರಿತು ಕಾರ್ಯಕ್ರಮದ ವೇಳೆ ಪ್ರತಿಭಟನೆ ನಡೆಯುವ ಸಾಧ್ಯತೆ ಕಂಡುಬಂದಿದೆ.

ಇತ್ತೀಚೆಗೆ ನಡೆದ ಕಾರ್ಯಕ್ರಮ, ಸಭೆಗಳ ವೇಳೆ ನಾಗರೀಕರ ಅಹವಾಲುಗಳ ಕೇಳುವ ಸಂದರ್ಭದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಉತ್ತರಿಸುತ್ತ, ಸರ್ಕಾರದ ಬೇಜವಬ್ದಾರಿ ಮಿತಿ ಮೀರಿದೆ ಜ.27ರಂದು ರೈತ ಸಂಪರ್ಕ ಕೇಂದ್ರ ಸಚಿವರು ಬರುತ್ತಾರೆ ಬಂದು ಪ್ರತಿಭಟನೆ ಮಾಡಿ ನಾನು ನಿಮ್ಮೊಂದಿಗೆ ಕೂರುವೆ ಎಂದು ಬಹಿರಂಗವಾಗಿಯೇ ಕರೆ ನಡಿರುವುದು ಪ್ರತಿಭಟನೆ ಕಾವು ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳಿದೆ.

ಮತ್ತೊಂದೆಡೆ ಸ್ಥಳೀಯ ಮುಖಂಡರಾದ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಚುಂಚೇಗೌಡ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಯಾವ ಹೈಡ್ರಾಮ ನಡೆಯುವುದೋ ಕಾದು ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!