ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೃಷಿ ಇಲಾಖೆ ವತಿಯಿಂದ ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡದ ಉದ್ಘಾಟನೆ ಜನವರಿ 27 ರಂದು ಸಂಜೆ 4.00 ಗಂಟೆಗೆ ತಾಲ್ಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ಏರ್ಪಡಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಉಪಸ್ಥಿತಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡವನ್ನು ಉದ್ಘಾಟಿಸಬೇಕಿತ್ತಾದರು. ಕೃಷಿ ಸಚಿವರು ಕಾರ್ಯಕ್ಕೆ ಗೈರಾಗುವ ಸಾಧ್ಯತೆ ನಿಶ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪೌರಾಡಳಿತ, ಸಣ್ಣ ಕೈಗಾರಿಕೆಗಳು, ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೋವಿಡ್ ಉಸ್ತುವಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ), ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ನ ಆಡಳಿತಾಧಿಕಾರಿ ಪಿ.ಹೇಮಲತಾ, ದೊಡ್ಡಬಳ್ಳಾಪುರ ಎ.ಪಿ.ಎಂ.ಸಿ.ಯ ಅಧ್ಯಕ್ಷ ಎನ್.ವಿಶ್ವನಾಥರೆಡ್ಡಿ, ಕೆ.ಎಂ.ಎಫ್.ನ ನಿರ್ದೇಶಕ ಬಿ.ಸಿ.ಆನಂದ್, ಕನಸವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಜಯ್ ಕುಮಾರ್, ಉಪಾಧ್ಯಕ್ಷ ಶೋಭಾ.ವಿ.ಎಂ, ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಅಧ್ಯಕ್ಷರಾದ ಅಂಜನೇಗೌಡ, ವಿಶೇಷ ಆಹ್ವಾನಿತರಾಗಿ ಕೃಷಿ ಇಲಾಖೆ ಆಯುಕ್ತರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೋನ ವಂಶಿಕೃಷ್ಣ ಅನೇಕರು ಭಾಗವಹಿಸುವ ನಿರೀಕ್ಷೆಯಿದೆ.
ಪ್ರತಿಭಟನೆ ಸಾಧ್ಯತೆ: ರಾಗಿ ಖರೀದಿ ದಿನಾಂಕ ವಿಸ್ತರಣೆ, ತಾಲೂಕಿಗೆ ವಿವಿಧ ಅನುದಾನಗಳ ನೀಡದ ರಾಜ್ಯ ಸರ್ಕಾರದ ನಿಲುವನ್ನು ಖಂಡಿನೆ ಮುಂತಾದ ವಿಚಾರದ ಕುರಿತು ಕಾರ್ಯಕ್ರಮದ ವೇಳೆ ಪ್ರತಿಭಟನೆ ನಡೆಯುವ ಸಾಧ್ಯತೆ ಕಂಡುಬಂದಿದೆ.
ಇತ್ತೀಚೆಗೆ ನಡೆದ ಕಾರ್ಯಕ್ರಮ, ಸಭೆಗಳ ವೇಳೆ ನಾಗರೀಕರ ಅಹವಾಲುಗಳ ಕೇಳುವ ಸಂದರ್ಭದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಉತ್ತರಿಸುತ್ತ, ಸರ್ಕಾರದ ಬೇಜವಬ್ದಾರಿ ಮಿತಿ ಮೀರಿದೆ ಜ.27ರಂದು ರೈತ ಸಂಪರ್ಕ ಕೇಂದ್ರ ಸಚಿವರು ಬರುತ್ತಾರೆ ಬಂದು ಪ್ರತಿಭಟನೆ ಮಾಡಿ ನಾನು ನಿಮ್ಮೊಂದಿಗೆ ಕೂರುವೆ ಎಂದು ಬಹಿರಂಗವಾಗಿಯೇ ಕರೆ ನಡಿರುವುದು ಪ್ರತಿಭಟನೆ ಕಾವು ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳಿದೆ.
ಮತ್ತೊಂದೆಡೆ ಸ್ಥಳೀಯ ಮುಖಂಡರಾದ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಚುಂಚೇಗೌಡ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಯಾವ ಹೈಡ್ರಾಮ ನಡೆಯುವುದೋ ಕಾದು ನೋಡಬೇಕಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….