ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೃಷಿ ಇಲಾಖೆ ವತಿಯಿಂದ ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡವನ್ನು ಕನಸವಾಡಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟಿಸಿದರು.
ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ಪೌರಾಡಳಿತ, ಸಣ್ಣ ಕೈಗಾರಿಕೆಗಳು, ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೋವಿಡ್ ಉಸ್ತುವಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ), ದೊಡ್ಡಬಳ್ಳಾಪುರ ಎ.ಪಿ.ಎಂ.ಸಿ.ಯ ಅಧ್ಯಕ್ಷ ಎನ್.ವಿಶ್ವನಾಥರೆಡ್ಡಿ, ಕನಸವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯ್ ಕುಮಾರ್, ಉಪಾಧ್ಯಕ್ಷ ಶೋಭಾ.ವಿ.ಎಂ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ ಮತ್ತಿತರರು ಭಾಗವಹಿಸಿದ್ದಾರೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….