ದೊಡ್ಡಬಳ್ಳಾಪುರ: ಸಚಿವರ ಭೇಟಿ ಸಂದರ್ಭದಲ್ಲಿ ಪ್ರತಿಭಟನೆ ನಡೆಯದಂತೆ ಜಾಣ್ಮೆತೋರಿದ ಅಧಿಕಾರಿಗಳು / ತಾಲೂಕು ಕಚೇರಿಯಲ್ಲಿ ದಿಢೀರ್ ಸಭೆ / ಸಚಿವರಿಗೆ ಮನವಿ ಸಲ್ಲಿಸಲು ಅವಕಾಶ

ದೊಡ್ಡಬಳ್ಳಾಪುರ: ಸ್ಥಗಿತಗೊಳಿಸಿರುವ ರಾಗಿ ಖರೀದಿ ನೋಂದಣಿಯನ್ನು ಜ.31 ರಿಂದ ಆರಂಭಿಸಬೇಕು. ರಾಗಿ ಖರೀದಿ ಮಿತಿಯನ್ನು ಸಡಿಲಗೊಳಿಸಬೇಕು. ಈ ಬೇಡಿಕೆಗಳು ಈಡೇರದಿದ್ದರೆ ಜ.31 ರಿಂದ ದೇಶದಾದ್ಯಂತ ರೈತ ವಿಶ್ವಾಸ ದ್ರೋಹ ದಿನವನ್ನಾಗಿ ಆಚರಿಸುತ್ತಿರುವ ಸಂದರ್ಭದಲ್ಲಿಯೇ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಗುರುವಾರ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ರೈತ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.

ಕನಸವಾಡಿಗೆ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ವೇಳೆ ಉಂಟಾಗಲಿದ್ದ ಪ್ರತಿಭಟನೆಯನ್ನು ತಡೆಯುವಲ್ಲಿ ಜಿಲ್ಲೆ ಮತ್ತು ತಾಲೂಕು ಅಧಿಕಾರಿಗಳು ಯಶಸ್ವಿಯಾಗಿದ್ದು, ಸಚಿವರು ಬರುವ ಮುಂಚೆಯೇ ರೈತ ಸಂಘಟನೆಗಳ ಮುಖಂಡರನ್ನು ಕರೆಸಿ ಸಭೆ ನಡೆಸಿದಲ್ಲದೆ, ಪ್ರತಿಭಟನೆ ಹೊರತು ಪಡೆಸಿ ಸಚಿವರಿಗೆ ಮನವಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಕಾರ್ಯಕ್ರಮದ ವೇಳೆ ನಡೆಯಲಿದ್ದ ಪ್ರತಿಭಟನೆಯನ್ನು ತಡೆದಿದ್ದಾರೆ.

ಈ ಕುರಿತಂತೆ ಇಂದು ನಗರದ ತಾಲೂಕು ಕಚೇರಿಯಲ್ಲಿ ನಡೆದ ಸಭೆ ನಡೆಸಿ ರೈತ ಮುಖಂಡರ ಅಹವಾಲುಗಳನ್ನು ಅಧಿಕಾರಿಗಳು ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ, 2021ರಲ್ಲಿ ಪಂಜಾಬ್ ರಾಜ್ಯದಲ್ಲಿ ರೂ36 ಸಾವಿರ ಕೋಟಿ ವೆಚ್ಚದಲ್ಲಿ ಗೋಧಿ ಸೇರಿದಂತೆ ಇತರೆ ಆಹಾರ ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸರ್ಕಾರ ಖರೀದಿ ಮಾಡುವ ಮೂಲಕ ರೈತರ ನೆರವಿಗೆ ನಿಂತಿದೆ. ಆದರೆ ನಮ್ಮ ರಾಜ್ಯದಲ್ಲಿ ಕೇವಲ ರೂ400 ಕೋಟಿ ವೆಚ್ಚದಲ್ಲಿ ಮಾತ್ರ ಬೆಂಬಲ ಬೆಲೆ ಯೋಜನೆಯಲ್ಲಿ ಆಹಾರ ಧಾನ್ಯ ಖರೀದಿ ಮಾಡಲಾಗಿದೆ. ಈ ಸರ್ಕಾರಕ್ಕೆ ರೈತರ ಬಗ್ಗೆ ಗೌರವ ಇಲ್ಲದೇ ಇರುವುದಕ್ಕೆ ಇದು ಸಾಕ್ಷಿಯಾಗಿದೆ. ಮೂರನೇ ದರ್ಜೆ ಆಡಳಿತದಿಂದಾಗಿ ರೈತರು ಇಂದು ಬೀದಿಗೆ ಬರುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು.        

ರಾಜ್ಯದಲ್ಲಿನ  ಬಹುತೇಕ ಹಿರಿಯ ಅಧಿಕಾರಿಗಳಿಗೆ ರಾಗಿ ಅಂದರೆ ಯಾವ ರೀತಿಯ ಆಹಾರ ಎನ್ನುವುದೇ ತಿಳಿಯದೇ ಇರುವುದೇ ರಾಗಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಉತ್ತರ ಭಾರತದ ರಾಜ್ಯಗಳ ಜನರ ಪ್ರಮುಖ ಆಹಾರವಾಗಿರುವ ಗೋಧಿಯನ್ನು ಎಲ್ಲಾ ರಾಜ್ಯದ ಜನರು ಬಳಸುವಂತೆ ಮಾಡಲಾಗಿದೆ. ಉತ್ತಮ ಆರೋಗ್ಯಕ್ಕೆ ರಾಗಿಯನ್ನು ಪ್ರಮುಖ ಆಹಾರವನ್ನಾಗಿ ಬಳಸುವುದು ಮುಖ್ಯವಾಗಿದೆಯಂದು ಹಲವಾರು ತಜ್ಞ ವೈದ್ಯರು ಹೇಳುತ್ತಲೇ ಇದ್ದರು ದೇಶದ ಇತರೆ ರಾಜ್ಯಗಳಲ್ಲೂ ರಾಗಿ ಬಳಸುವಂತೆ ಮಾಡುವಲ್ಲಿಯೇ ಆಡಳಿತಗಾರರು ಸೋತಿದ್ದಾರೆ. ರಾಗಿಯನ್ನು ಪಡಿತರ ವ್ಯವಸ್ಥೆಯಲ್ಲಿ ವಿತರಣೆ ಮಾಡಲು ದೇಶದ ಇತರೆ ರಾಜ್ಯಗಳಿಗು ವಿಸ್ತರಣೆಯಾಗಬೇಕು ಎಂದು ಆಗ್ರಹಿಸಿದರು. 

ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ರೈತ ಸಂಘದ ಮುಖಂಡರು ಮಾತನಾಡಿ, ರಾಗಿ ಖರೀದಿ ಮಿತಿಯನ್ನು ಸಡಿಲಮಾಡುವಂತೆ ಆಗ್ರಹಿಸಿ ನಗರದ ರಾಗಿ ಖರೀದಿ ಕೇಂದ್ರದ ಮುಂದೆ ಒಂದು ವಾರಗಳ ಕಾಲ ರಾತ್ರಿ ಹಗಲು ಧರಣಿ ನಡೆಸಿದ್ದರು ಸೌಜನ್ಯಕ್ಕಾದರು ಜಿಲ್ಲಾಧಿಕಾರಿಗಳು ರೈತರನ್ನು ಭೇಟಿ ಮಾಡಿ ಕಷ್ಟಗಳನ್ನು ವಿಚಾರ ಮಾಡಿ ಸರ್ಕಾರದ ಗಮನಕ್ಕೆ ತಂದಿಲ್ಲ. ರೈತರ ಬಗ್ಗೆ ಗೌರವ ಇಲ್ಲದ ಜಿಲ್ಲಾಧಿಕಾರಿಗಳನ್ನು ಇಲ್ಲಿಂದ ತಕ್ಷಣ ವರ್ಗಾವಣೆ ಮಾಡಬೇಕು. ಇಂದಿನ ಸಭೆಗೂ ಸಹ ಜಿಲ್ಲಾಧಿಕಾರಿಗಳು ಹಾಜರಾಗದೆ ರೈತ ಸಂಘಟನೆಗೆ ಅವಮಾನ ಮಾಡಿದ್ದಾರೆ. ರಾಗಿ ಖರೀದಿ ಮಿತಿ ಸಡಿಲ, ನೋಂದಣಿ ಆರಂಭವಾಗದ ಹೊರತು ಈಗಾಗಲೇ ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಪಡೆಯಬಾರದು. ರೈತರನ್ನು ಹೊಡೆದು ಹಾಳುವ ನೀತಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರೈತರ ಪ್ರಶ್ನೆಗಳಿಗೆ ಉತ್ತರಿಸಿದ ಉಪವಿಭಾಗಾಧಿಕಾರು ಅರುಳ್ ಕುಮಾರ್, ರಾಗಿ ಖರೀದಿಯಲ್ಲಿನ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಈಗಾಗಲೇ ಚರ್ಚಿಸಲಾಗಿದೆ. ಸರ್ಕಾರದ ಆದೇಶಗಳನ್ನು ಪಾಲಿಸುವುದಷ್ಟೇ ನಮ್ಮ ಕರ್ತವ್ಯವಾಗಿದೆ. ರಾಗಿ ಖರೀದಿ ವಿಚಾರ ಸರ್ಕಾರದ ಹಂತದಲ್ಲಿ ನಿರ್ಧಾರವಾಗಬೇಕಿದೆ. ನಮ್ಮ ಹಂತದಲ್ಲಿನ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದರು.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕಿ ಗಿರಿಜಾ ಮಾತನಾಡಿ, ರಾಗಿ ಖರೀದಿ ಮಿತಿ ಸಡಿಲಿಕೆ, ನೋಂದಣಿ ಸ್ಥಗಿತ ಇಡೀ ರಾಜ್ಯದಲ್ಲಿ ಏಕ ರೀತಿಯ ನಿಯಮವಾಗಿದೆ. ಸರ್ಕಾರ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದರು.

ಸಭೆಯಲ್ಲಿ ತಹಶೀಲ್ದಾರ್ ಮೋಹನಕುಮಾರಿ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಸಬ್ಇನ್ಸ್ಪೆಕ್ಟರ್ ಗೋವಿಂದ,  ರೈತ ಸಂಘಟನೆಗಳ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!