ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವಾದರೂ ಎಲ್ಲರ ಹಾರೈಕೆಗಳು ಇನ್ನಷ್ಟು ಸ್ಪೂರ್ತಿಯಿಂದ ಮತ್ತು ಗಟ್ಟಿಯಾಗಿ ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ  ಮಾಡಿರುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. 

ಕರ್ನಾಟಕದ ಸಾಮಾನ್ಯ ಜನರಿಂದ ಹಿಡಿದು ಪಕ್ಷದ ಹಿರಿಯರು ಪದಾಧಿಕಾರಿಗಳು, ರಾಷ್ಟ್ರಪತಿಗಳು, ಪ್ರಧಾನಿ ನರೇಂದ್ರ ಮೋದಿಯವರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ. ಕ್ಷೇತ್ರದ ಜನ ಶುಭಾಶಯಗಳನ್ನು ಕೋರಿದ್ದಾರೆ. ಅಮಿತ್ ಷಾ ಅವರು ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಅವರೆಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದೇನೆ. ಎಲ್ಲರ ಶುಭಾಶಯಗಳು ರಾಜ್ಯವನ್ನು  ಸುಭಿಕ್ಷತೆಯತ್ತ ತೆಗೆದುಕೊಂಡು ಹೋಗಲು, ರಾಜ್ಯದ ಸಮಗ್ರ ಅಭಿವೃದ್ಧಿ ಮಾಡಲು ವಿಶೇಷವಾಗಿ ರಾಜ್ಯ ದಲ್ಲಿ ಬಡವರು, ರೈತರು ಮತ್ತು ಹಿಂದುಳಿದವರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರು ಮತ್ತು ಯುವಕರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಲು ದೊಡ್ಡ ಶಕ್ತಿ ಮತ್ತು ಪ್ರೇರಣೆಯನ್ನು ನೀಡಿದೆ ಎಂದರು.

ರಾಜ್ಯದ ಅಭಿವೃದ್ಧಿಯ ಚಿತ್ರಣ ನೀಡುವ ಕಿರುಹೊತ್ತಿಗೆ: ಸರ್ಕಾರ ಇಂದು 6 ತಿಂಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕಿರು ಹೊತ್ತಿಗೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಲಾಗುವುದು .  ಕಳೆದ 6 ತಿಂಗಳಲ್ಲಿ ಕೋವಿಡ್ ಮತ್ತು  ಪ್ರವಾಹ ನಿರ್ವಹಣೆ,  ರೈತರಿಗೆ, ಮಹಿಳೆಯರಿಗೆ ತೆಗೆದುಕೊಂಡಿರುವ ತೀರ್ಮಾನ ಹಾಗೂ ಅದರ ಪರಿಣಾಮಗಳ ಬಗ್ಗೆ ಪುಸ್ತಕದಲ್ಲಿ ವಿವರಿಸಲಾಗಿದೆ ಎಂದರು. 

ಚುನಾವಣಾ ವರ್ಷದ ಬಜೆಟ್: ಮುಂಬರುವ ದಿನಗಳಲ್ಲಿ ಬಜೆಟ್ ಮಂಡನೆಯಾಗಲಿದೆ. ಚುನಾವಣೆ ವರ್ಷದ ಬಜೆಟ್ ಕೂಡಾ ಆಗಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಸಧೃಢ ಮಾಡುವುದು ಒಂದು ಕಡೆಯಾದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಎಲ್ಲ ವರ್ಗದ ಜನರಿಗೆ ಅಭಿವೃದ್ಧಿ ಮೂಲಕ ನ್ಯಾಯ ಒದಗಿಸುವ ಯೋಜನೆಗಳನ್ನು ರೂಪಿಸುವ ಉದ್ದೇಶವಿದೆ.  ಎಲ್ಲಾ ಆಯಾಮಗಳು ನಮ್ಮ ಮುಂದಿದ್ದು, ಅವುಗಳಿಗೆ ದಿಕ್ಸೂಚಿಯನ್ನು, ವೇಗವನ್ನು ಹಾಗೂ ಗುರಿ ತಲುಪುವ ಗತಿಯನ್ನು ನೀಡಲು ಸಂಕಲ್ಪ ಮಾಡಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]