ಎಫ್ ಎಂ ರೇನ್ ಬೋ ಕನ್ನಡ ಕಾಮನಬಿಲ್ಲು ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರಕಾರ ಹೊರಟಿರುವುದು ಅಕ್ಷಮ್ಯ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವಿಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ ʼ101.3 ಎಫ್ ಎಂ ರೇನ್ ಬೋ ಕನ್ನಡ ಕಾಮನಬಿಲ್ಲುʼ ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರಕಾರ ಹೊರಟಿರುವುದು ಅಕ್ಷಮ್ಯ. ಕನ್ನಡಕ್ಕೆ ಕೊಡಲಿ ಪೆಟ್ಟು.

ರೇನ್ ಬೋ ಕನ್ನಡ ಕಾಮನಬಿಲ್ಲುʼ ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯಬಡಿತ, ಕನ್ನಡದ ಅಸ್ಮಿತೆ ಕೂಡ. ಆದರೆ, ಕೇಂದ್ರ ಸರಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ.

ಈ ಹಿಂದೆ ಕನ್ನಡಿಗರ ಮನೆಮನದಲ್ಲಿ ತುಂಬಿದ್ದ ʼಅಮೃತವರ್ಷಿಣಿʼಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ ಕೇಂದ್ರ ಸರಕಾರ, ಕನ್ನಡದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ.

ಆಯಕಟ್ಟಿನಲ್ಲಿ ಕೂತಿರುವ ಹಿರಿಯ ಅಧಿಕಾರಿಗಳು ಕಸಾಯಿಗಳಂತೆ ಸಾವಿರಾರು ವರ್ಷಗಳ ಅಭಿಜಾತ ಭಾಷೆ ಕನ್ನಡದ ಮೇಲೆ ದಾಳಿ ನಡೆಸಿ ಕ್ರೂರವಾಗಿ ವಧೆ ಮಾಡುತ್ತಿದ್ದಾರೆ. ಕನ್ನಡನಾಡನ್ನು ಉದ್ಧಾರ ಮಾಡುತ್ತೇವೆಂದು ಗೆದ್ದುಹೋದ ಸಂಸದ ಮಹಾಶಯರು ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ.

ಕನ್ನಡಿಗರು ಸಹಿಷ್ಣುಗಳು, ಸೌಮ್ಯರು ಹೌದು. ಹಾಗೆಂದು, ತಾಯಿಭಾಷೆಗೆ ಕೊಳ್ಳಿ ಇಡುತ್ತಿರುವ ʼಭಾಷಾಂತಕʼರನ್ನು ನೋಡುತ್ತಾ ಸುಮ್ಮನೆ ಕೂರಲಾರರು, ನೆನಪಿರಲಿ.

ಸಂಸದರೆಲ್ಲರೂ ದನಿಯೆತ್ತಿ ಈ ರೇಡಿಯೋ ವಾಹಿನಿಯನ್ನು ಉಳಿಸಬೇಕು. ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ.

ಎಫ್ ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ.

ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ. ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ. ಕನ್ನಡದ_ಹಂತಕರಿಗೆ_ಧಿಕ್ಕಾರ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!