ದೊಡ್ಡಬಳ್ಳಾಪುರ: ರೈಲು ಹಳಿ ದಾಟುವಾಗ ವೇಗವಾಗಿ ಬಂದ ಎಕ್ಸ್‌ಪ್ರೆಸ್ ರೈಲೊಂದು ಡಿಕ್ಕಿ ಒಡೆದ ಕಾರಣ ವೃದ್ಧೆಯೋರ್ವರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ನಗರದ ಹೊರವಲಯದಲ್ಲಿನ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ಸುಮಾರು 70 ವರ್ಷದ ಮೃತ ವೃದ್ಧೆಯನ್ನು ಹಿಂದೂಪುರ ಮೂಲದವರೆಂದು ಗುರುತಿಸಲಾಗಿದ್ದು, ಹಿಂದುಪುರಕ್ಕೆ ತೆರಳಲು ರೈಲ್ವೆ ಸ್ಟೇಷನ್ ಗೆ ಬಂದ ವೇಳೆ, ಮೇಲ್ಸೇತುವೆ ಬಳಸದೆ ಹಳಿ ದಾಟುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ.
ವಾರಸುದಾರರು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್, ಮೊಬೈಲ್ ಸಂಖ್ಯೆ 9845014463, 9480802143 ಸಂಪಕಿಸಲು ಕೋರಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….