ಬೆಂಗಳೂರು: ಭ್ರಷ್ಟಾಚಾರ ವಿವಾದದಲ್ಲಿ ಸಿಲುಕಿರುವ ಐಪಿಎಸ್ ರವಿ ಡಿ.ಚನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸರ್ಕಾರ ದಿಢೀರ್ ತಡೆ ನೀಡಿದೆ.
ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿರುವ ರಾಜ್ಯ ಸರ್ಕಾರ ಏಕಾಏಕಿ ರವಿ ಡಿ.ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಯಿಡಿಯಲಾಗಿದೆ ಎಂದು ಸುತ್ತೋಲೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರವಿ ಡಿ.ಚನ್ನಣ್ಣನವರ್ ವರ್ಗಾವಣೆಗೆ ಸರ್ಕಾರ ತಡೆ ಹಾಕಿದೆ.
ಪೊಲೀಸ್ ಇಲಾಖೆಯಿಂದ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮಕ್ಕೆ ವರ್ಗಾವಣೆ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಒಂದು ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆದಿವೆ.
ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಸದ್ಯ ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ತಮ್ಮ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ಕೂಡ ತಂದಿದ್ದಾರೆ. ಇದನ್ನೆಲ್ಲ ಗಮನಿಸಿದ ಬಿಜೆಪಿ ಸರ್ಕಾರ ಶಿಕ್ಷೆ ರೂಪದಲ್ಲಿ ಇವರನ್ನು ವಾಲ್ಕೀಕಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿದೆ ಎನ್ನುವ ಮಾತುಗಳು ಕೇಳಿಬಂದಿತ್ತು.
ರವಿ ಡಿ.ಚನ್ನಣ್ಣನವರ್ ವಿರುದ್ಧ ಗಂಭೀರ ಆರೋಪ: ಕೆಲವು ದಿನಗಳಿಂದ ರವಿ ಡಿ.ಚೆನ್ನಣ್ಣವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿರುದ್ಧ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.
ರವಿ ಡಿ. ಚನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು. ಈ ದೂರಿನ ಪ್ರತಿ ಹೊರ ಬಿದ್ದಿದ್ದೇ ದೊಡ್ಡ ವಿವಾದ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ರವಿ ಡಿ.ಚನ್ನಣ್ಣನವರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….