ದೊಡ್ಡಬಳ್ಳಾಪುರ: ಸರ್ವೋದಯ ದಿನದ ಪ್ರಯುಕ್ತ ಜ.30ರಂದು ನಗರಸಭೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಜ.30ರ ಭಾನುವಾರ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ, ಆದ್ದರಿಂದ ನಗರದಲ್ಲಿ ಎಲ್ಲಾ ರೀತಿಯ ಮಾಂಸದ ಅಂಗಡಿ ಹಾಗೂ ಕೋಳಿ, ಹಂದಿ ಮಾಂಸ, ಮೀನು ಮಾರಾಟದ ಅಂಗಡಿ ಹಾಗೂ ನಗರದ ಎಲ್ಲಾ ಮಾಂಸಾಹಾರಿ ಹೋಟೆಲ್‌ಗಳನ್ನು ಕಡ್ಡಾಯವಾಗಿ ಮುಚ್ಚಲು ತಿಳಿಸಲಾಗಿದೆ. ತಪ್ಪಿದಲ್ಲಿ ಪರವಾನಗಿ ರದ್ದುಗೊಳಿಸಿ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಎಂದು ಪೌರಾಯುಕ್ತರಾದ ಕೆ.ಜೆ.ಶಿವಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನವನ್ನು ʻಸರ್ವೋದಯ ದಿನʼವನ್ನಾಗಿ ಆಚರಿಸಲಾಗುವುದು. ಗಾಂಧೀಜಿಯವರು ಶಾಂತಿ ಪ್ರಿಯರು, ಅಹಿಂಸಾವಾದಿಗಳು. ಆ ದಿನ ಎಲ್ಲೆಡೆ ಗಾಂಧೀಜಿ ಸ್ಮರಣೆ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಅಂದು ಪ್ರಾಣಿ ವಧೆ, ಮಾಂಸ ಮಾರಾಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….