ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆ ಆರಂಭ: ನೈಟ್ ಕರ್ಫ್ಯೂ ರದ್ದು

ಬೆಂಗಳೂರು: ಸೋಮವಾರದಿಂದ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ನಡೆದ ಕೋವಿಡ್ ಮೀಟಿಂಗ್ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸೋಮವಾರದಿಂದ 1 ರಿಂದ 9 ತರಗತಿ ಓಪನ್ ಆಗುತ್ತವೆ. ಸೋಮವಾರದಿಂದ ಎಲ್ಲ ತರಗತಿಗಳು ಓಪನ್ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಬೇರೆ ಬೇರೆ ಶಾಲೆಗೆ ನೀಡಿರುವ ಕೋವಿಡ್ ನಿಯಮಗಳ ಪಾಲನೆಯಲ್ಲಿ ಶಾಲೆಗಳು ಆರಂಭವಾಗುತ್ತವೆ. ತರಗತಿಯಲ್ಲಿ ಸೋಂಕು ಕಂಡು ಬಂದಲ್ಲಿ ಆ ತರಗತಿ ಮಾತ್ರ ಬಂದ್ ಮಾಡಬೇಕು. ತರಗತಿ ಬಂದ್ ಮಾಡಿ ಶಾಲೆ ನಡೆಸಬೇಕು. ಯಾವುದಾದರೂ ಶಾಲೆಯಲ್ಲಿ ಪಾಸಿಟಿವ್ ಬಂದರೆ ತರಗತಿ ಮಾತ್ರ ಕ್ಲೋಸ್ ಮಾಡಬೇಕು. ಶಾಲೆಯಲ್ಲಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಜಿಲ್ಲಾಧಿಕಾರಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

ನೈಟ್ ಕರ್ಫ್ಯೂ ರದ್ದು: ಕರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೇರಿದ್ದ ನೈಟ್ ಕರ್ಫ್ಯೂವನ್ನು ರದ್ದುಗೊಳಿಸಿದೆ ಎಂದು  ಸಚಿವ ಆರ್.ಅಶೋಕ್ ತಿಳಿಸಿದರು, ರಾಜ್ಯದಲ್ಲಿ ಜಾರಿಯಾಗಿದ್ದ ನೈಟ್ ಕರ್ಫ್ಯೂ ರದ್ದುಗೊಳಿಸಲಾಗಿದೆ. ಜನವರಿ 31ರಿಂದ ನೈಟ್ ಕರ್ಫ್ಯೂ ಇರುವುದಿಲ್ಲ. ರಾಜ್ಯದಲ್ಲಿ ಒಟ್ಟು 4,28,570 ಕೇಸ್ ಇದೆ. 146 ಜನ ಮಕ್ಕಳು ಕರೊನಾದಿಂದ ಮೃತಪಟ್ಟಿದ್ದಾರೆ. ಕರ್ನಾಟಕದ ಕೋವಿಡ್ ಪಾಸಿಟಿವಿಟಿ ರೇಟ್ 18.8 ದಾಖಲಾಗಿದೆ. ಈ ಹಿಂದೆ ಶೇ.33 ಏರಿಕೆ ಕಂಡಿತ್ತು. ಈಗ ಶೇ.21.2ಕ್ಕೆ ಬಂದು ನಿಂತಿದೆ ಹಾಗಾಗಿ ಕೋವಿಡ್ ನಿಯಮಗಳಲ್ಲಿ ಕೆಲ ಸಡಿಲಿಕೆಗಳನ್ನು ರಾಜ್ಯದಲ್ಲಿ ಮಾಡುತ್ತಿದ್ದೇವೆ ಎಂದರು.

ಪಬ್, ಬಾರ್, ರೆಸ್ಟೋರೆಂಟ್ ಹೋಟೆಲ್‍ನಲ್ಲಿ 100% ಅವಕಾಶ ಕಲ್ಪಿಸಿ ಕೊಡುತ್ತಿದ್ದೇವೆ. ಆದರೆ ಸಿನಿಮಾ ಮಂದಿರಕ್ಕೆ ಶೇ.50 ರಷ್ಟು ನಿರ್ಬಂಧ ಮುಂದುವರಿಕೆ ಮಾಡುತ್ತಿದ್ದೇವೆ. ಉಳಿದಂತೆ ಮದುವೆ ಹೊರಾಂಗಣದಲ್ಲಿ 300 ಮತ್ತು ಒಳಾಂಗಣದಲ್ಲಿ 200 ಜನರಿಗೆ ಅವಕಾಶ ಕಲ್ಪಿಸಿಕೊಡುತ್ತಿದ್ದೇವೆ. ಕಚೇರಿಗಳಲ್ಲಿ ಶೇ.100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ಕೋಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆಗಳು ಮತ್ತೆ ಆರಂಭವಾಗುತ್ತಿದ್ದು, ಎಲ್ಲಾ ರೀತಿ ಸೇವೆಗಳಿಗೆ ಅವಕಾಶ ಕೊಡಲಾಗಿದೆ. ಆದರೆ ದೇವಾಲಯಗಳಲ್ಲಿ ಒಮ್ಮೆಲೆ 50 ಜನ ಮಾತ್ರ ಪ್ರವೇಶ ನಿಯಮ ಮುಂದುವರಿಸುತ್ತಿದ್ದೇವೆ ಎಂದು ಮಾಹಿತಿ ಹಂಚಿಕೊಂಡರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕೋವಿಡ್ ತಾಂತ್ರಿಕ  ಸಲಹಾ ಸಮಿತಿಯ ಅಧ್ಯಕ್ಷ ಡಾ.ಸುದರ್ಶನ್ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!