ಬೆಂಗಳೂರು: ಸೋಮವಾರದಿಂದ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ನಡೆದ ಕೋವಿಡ್ ಮೀಟಿಂಗ್ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸೋಮವಾರದಿಂದ 1 ರಿಂದ 9 ತರಗತಿ ಓಪನ್ ಆಗುತ್ತವೆ. ಸೋಮವಾರದಿಂದ ಎಲ್ಲ ತರಗತಿಗಳು ಓಪನ್ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದ ಬೇರೆ ಬೇರೆ ಶಾಲೆಗೆ ನೀಡಿರುವ ಕೋವಿಡ್ ನಿಯಮಗಳ ಪಾಲನೆಯಲ್ಲಿ ಶಾಲೆಗಳು ಆರಂಭವಾಗುತ್ತವೆ. ತರಗತಿಯಲ್ಲಿ ಸೋಂಕು ಕಂಡು ಬಂದಲ್ಲಿ ಆ ತರಗತಿ ಮಾತ್ರ ಬಂದ್ ಮಾಡಬೇಕು. ತರಗತಿ ಬಂದ್ ಮಾಡಿ ಶಾಲೆ ನಡೆಸಬೇಕು. ಯಾವುದಾದರೂ ಶಾಲೆಯಲ್ಲಿ ಪಾಸಿಟಿವ್ ಬಂದರೆ ತರಗತಿ ಮಾತ್ರ ಕ್ಲೋಸ್ ಮಾಡಬೇಕು. ಶಾಲೆಯಲ್ಲಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಜಿಲ್ಲಾಧಿಕಾರಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.
ನೈಟ್ ಕರ್ಫ್ಯೂ ರದ್ದು: ಕರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೇರಿದ್ದ ನೈಟ್ ಕರ್ಫ್ಯೂವನ್ನು ರದ್ದುಗೊಳಿಸಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು, ರಾಜ್ಯದಲ್ಲಿ ಜಾರಿಯಾಗಿದ್ದ ನೈಟ್ ಕರ್ಫ್ಯೂ ರದ್ದುಗೊಳಿಸಲಾಗಿದೆ. ಜನವರಿ 31ರಿಂದ ನೈಟ್ ಕರ್ಫ್ಯೂ ಇರುವುದಿಲ್ಲ. ರಾಜ್ಯದಲ್ಲಿ ಒಟ್ಟು 4,28,570 ಕೇಸ್ ಇದೆ. 146 ಜನ ಮಕ್ಕಳು ಕರೊನಾದಿಂದ ಮೃತಪಟ್ಟಿದ್ದಾರೆ. ಕರ್ನಾಟಕದ ಕೋವಿಡ್ ಪಾಸಿಟಿವಿಟಿ ರೇಟ್ 18.8 ದಾಖಲಾಗಿದೆ. ಈ ಹಿಂದೆ ಶೇ.33 ಏರಿಕೆ ಕಂಡಿತ್ತು. ಈಗ ಶೇ.21.2ಕ್ಕೆ ಬಂದು ನಿಂತಿದೆ ಹಾಗಾಗಿ ಕೋವಿಡ್ ನಿಯಮಗಳಲ್ಲಿ ಕೆಲ ಸಡಿಲಿಕೆಗಳನ್ನು ರಾಜ್ಯದಲ್ಲಿ ಮಾಡುತ್ತಿದ್ದೇವೆ ಎಂದರು.
ಪಬ್, ಬಾರ್, ರೆಸ್ಟೋರೆಂಟ್ ಹೋಟೆಲ್‍ನಲ್ಲಿ 100% ಅವಕಾಶ ಕಲ್ಪಿಸಿ ಕೊಡುತ್ತಿದ್ದೇವೆ. ಆದರೆ ಸಿನಿಮಾ ಮಂದಿರಕ್ಕೆ ಶೇ.50 ರಷ್ಟು ನಿರ್ಬಂಧ ಮುಂದುವರಿಕೆ ಮಾಡುತ್ತಿದ್ದೇವೆ. ಉಳಿದಂತೆ ಮದುವೆ ಹೊರಾಂಗಣದಲ್ಲಿ 300 ಮತ್ತು ಒಳಾಂಗಣದಲ್ಲಿ 200 ಜನರಿಗೆ ಅವಕಾಶ ಕಲ್ಪಿಸಿಕೊಡುತ್ತಿದ್ದೇವೆ. ಕಚೇರಿಗಳಲ್ಲಿ ಶೇ.100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ಕೋಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆಗಳು ಮತ್ತೆ ಆರಂಭವಾಗುತ್ತಿದ್ದು, ಎಲ್ಲಾ ರೀತಿ ಸೇವೆಗಳಿಗೆ ಅವಕಾಶ ಕೊಡಲಾಗಿದೆ. ಆದರೆ ದೇವಾಲಯಗಳಲ್ಲಿ ಒಮ್ಮೆಲೆ 50 ಜನ ಮಾತ್ರ ಪ್ರವೇಶ ನಿಯಮ ಮುಂದುವರಿಸುತ್ತಿದ್ದೇವೆ ಎಂದು ಮಾಹಿತಿ ಹಂಚಿಕೊಂಡರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಸುದರ್ಶನ್ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….