ದೊಡ್ಡಬಳ್ಳಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ 2022ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಜ.31ರಂದು ಆಯೋಜಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಂಘದ ತಾಲೂಕು ಅಧ್ಯಕ್ಷ ಗಂಗರಾಜ ಶಿರವಾರ, ದೊಡ್ಡಬಳ್ಳಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಕನ್ನಡ ಜಾಗೃತ ಪರಿಷತ್ ಸಭಾಂಗಣದಲ್ಲಿ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಬೆಳಗ್ಗೆ 10ಗಂಟೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ತಹಶೀಲ್ದಾರ್ ಮೋಹನಕುಮಾರಿ ಉದ್ಘಾಟಿಸಲಿದ್ದಾರೆ. ಮೊಲ್ಟಾಸ್ ಪ್ರೈ.ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಟಿ. ಆನಂದ್ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಮಂಡುಬೆಲೆ ರಾಜಣ್ಣ, ಇತಿಹಾಸ ತಜ್ಞ ಡಾ.ಎಸ್.ವೆಂಕಟೇಶ್, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಸತೀಶ್, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸೇರಿದಂತೆ ನಗರಸಭೆ ಸದಸ್ಯರು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಮುಖಂಡರು ಭಾಗವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….