ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸಕ್ರಿಯ ಉಗ್ರಗಾಮಿ ಗುಂಪುಗಳಾದ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಕಳೆದ 12 ಗಂಟೆಗಳಲ್ಲಿ ಭದ್ರತಾ ಪಡೆಗಳಿಂದ ಹತರಾದ ಉಗ್ರರಲ್ಲಿ ಜೈಶ್-ಎ-ಮೊಹಮ್ಮದ್ ಪ್ರಮುಖ ಕಮಾಂಡರ್ ಜಾಹಿದ್ ವಾನಿ ಮತ್ತು ಪಾಕಿಸ್ತಾನಿ ಬೆಂಬಲಿತ ಭಯೋತ್ಪಾದಕರೂ ಸೇರಿದ್ದಾರೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.
ಶನಿವಾರ ಸಂಜೆ, ಪುಲ್ವಾಮಾದ ನೈರಾ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾದ ನೈರಾ ಪ್ರದೇಶದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ದಕ್ಷಿಣ ಕಾಶ್ಮೀರದ ಪುಲ್ವಾಮಾದ ನೈರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದರೆ, ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚ್ರಾರ್-ಇ-ಶರೀಫ್ ಪ್ರದೇಶದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
14 ಫೆಬ್ರವರಿ 2019 ರಂದು 40 ಕ್ಕೂ ಹೆಚ್ಚು ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ ಪುಲ್ವಾಮಾಘಟನೆಯಲ್ಲಿ ಜಾಹಿದ್ ವಾನಿ ಭಾಗಿಯಾಗಿದ್ದ.
ಪಾಕಿಸ್ತಾನಿ ಭಯೋತ್ಪಾದಕ ವಾಹಿದ್ ಅಹ್ಮದ್ ರಿಷಿ ಮತ್ತು ಇಬ್ಬರು ಸ್ಥಳೀಯ ಕಾರ್ಯಕರ್ತರು– ಕಫೀಲ್ ಅಲಿಯಾಸ್ ಛೋಟಾ ಪಾಕಿಸ್ತಾನಿ ಜೆಎಂ ಮತ್ತು ಇನಾಯತುಲ್ಲಾ ಮಿರ್ ಜೊತೆಗೆ ಜಾಹಿದ್‌ನನ್ನು ಹತ್ಯೆ ಮಾಡಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….