ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಹೋಬಳಿ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 33 ಲಕ್ಷದ ಅನುಧಾನದಲ್ಲಿ ಕೆರೆ ಊಳೆತ್ತುವ ಕಾಮಗಾರಿ ಮತ್ತು ಕೆರೆ ಸ್ವಚ್ಛಗೊಳಿಸುವ ಕಾಮಗಾರಿ ಮತ್ತು ಕಟ್ಟೆ ದುರಸ್ಥಿ ಕಾಮಗಾರಿಗೆ ಶಾಸಕ ಟಿ.ವೆಂಕಟರಮಣಯ್ಯ ಭಾನುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ವರ್ಷ ವರುಣದೇವನ ಕೃಪೆಯಿಂದ ಸಾಕಷ್ಟು ಮಳೆಯಾಗಿ, ಕೆರೆಗಳಿಗೆ ನೀರು ಬಂದಿರುವುದು ಸಂತಸ ತಂದಿದೆ ಇತ್ತೀಚೆಗೆ ಸುರಿದ ಮಳೆಯಿಂದಾಗಿ ತಾಲೂಕಿನ ಅರ್ಧಕ್ಕೂ ಹೆಚ್ಚು ಕರೆಗಳು ತುಂಬಿವೆ. ಹಿಂದಿನ ವರ್ಷಗಳಲ್ಲಿ ತಾಲೂಕಿನಲ್ಲಿ ನೀರಿನ ಸಮಸ್ಯೆ ತಲೆದೋರಿ, ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿತ್ತು.
ಬಿಜೆಪಿ ಸರ್ಕಾರ ಬಂದಾಗಿನಿಂದ 180 ಕೊಳವೆ ಬಾವಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಹಿಂದಿನ ಸರ್ಕಾರದಲ್ಲಿ ಜಾರಿಗೊಳಿಸಲಾಗಿದ್ದ ಎತ್ತಿನಹೊಳೆ ಹಾಗೂ ಎಚ್.ಎನ್ ವ್ಯಾಲಿ ಶುದ್ದೀಕರಿಸಿದ ನೀರು ಯೋಜನೆಗಳು ಕಾರ್ಯಗತವಾದರೆ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಾ ಕೆರೆಗಳು ಪೂರ್ಣವಾಗಿ ತುಂಬಲಿವೆ. ನೀರಿನ ಮೂಲಗಳನ್ನು ಸಂರಕ್ಷಿಸಿಕೊಳ್ಳಬೇಕಿರುವುದು ನಮ್ಮೆಲ್ಲರ ಹೊಣೆ ಎಂದರು.
ಈ ವೇಳೆ ಎಪಿಎಂಸಿ ಅಧ್ಯಕ್ಷ ವಿಶ್ವನಾಥರೆಡ್ಡಿ, ಗ್ರಾಮ ಪಂಚಾಯತಿ ಅಧ್ಯಕ್ಷ ವೆಂಕಟೇಶಯ್ಯ, ಸದಸ್ಯರಾದ ಆನಂದ್, ಮುಖಂಡರಾದ ಅಣ್ಣಯಪ್ಪ, ನರಸಿಂಹಮೂರ್ತಿ, ಜಯರಾಮ್, ವೆಂಕಟಾಚಲಯ್ಯ, ತಿಮ್ಮನಗೌಡ, ರಮೇಶ್, ವೀರದಿಪ್ಪಯ್ಯ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….