ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯನ್ನು ಮಾರ್ಚ್ ಅಥವಾ ಏಪ್ರಿಲ್ ಒಳಗಾಇ ಮುಗಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿರುವ ಅವರು, ಈ ಹಿಂದೆಯೇ ಚುನಾವಣೆ ನಡೆಸಲು ತೀರ್ಮಾನಿಸಿದ್ದೆವು ಆದರೆ ಮೀಸಲಾತಿ ಸರಿಯಿಲ್ಲ ಹಾಗೂ ಕ್ಷೇತ್ರ ಪುನರ್ವಿಂಡಗಣೆ ಸರಿಯಿಲ್ಲ ಎಂದು ಸುಮಾರು 780 ತಕರಾರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಆ ಕಾರಣ ಲಕ್ಷ್ಮೀನಾರಾಯಣ ಅವರ ನೇತೃತ್ವದಲ್ಲಿ ಕ್ಷೇತ್ರಪುನರ್ ವಿಗಂಡಣಾ ಸಮಿತಿ ರಚನೆ ಮಾಡಲಾಗಿತ್ತು. ಇನ್ನೇನು ಲಕ್ಷ್ಮೀನಾರಾಯಣ್ ಅವರು ವರದಿ ನೀಡಲಿದ್ದು ವರದಿ ಬಂದಾಕ್ಷಣ ಚುನಾವಣೆ ನಡೆಸುತ್ತೇವೆ.
ಈ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾರ್ಚ್ ಅಂತ್ಯ ಅಥವಾ ಏಪ್ರಿಲ್ ನಲ್ಲಿ ಚುನಾವಣೆ ಮಾಡಿ ಮುಗಿಸಲಿದ್ದೇವೆ ಎಂದರು.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ಬಳಿಕ ರಾಜ್ಯದಲ್ಲಿ ಹೆಚ್ಚಿನ ಕೆಲಸಗಳು ಆಗಿವೆ. ಜಲಾಮೃತ ಯೋಜನೆ ಅನುಷ್ಟಾನದಲ್ಲಿ ದೇಶದಲ್ಲೇ ಕರ್ನಾಟಕ ನಂಬರ್ ಓನ್ ಸ್ಥಾನದಲ್ಲಿದೆ. ಮನೆಮನೆಗೆ ಗಂಗೆ ಯೋಜನೆಯಡಿ ಸಾಕಷ್ಟು ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ನೀಡಿದ್ದೇವೆ.
ಈ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲಿ 14 ನೇ ಸ್ಥಾನದಲ್ಲಿದೆ.ಪಿಎಂಜಿಎಸ್ ವೈ ಯೋಜನೆಯಡಿ ಕರ್ನಾಟಕಕ್ಕೆ ಐದು ಸಾವಿರ ಕಿಲೋಮೀಟರ್ ರಸ್ತೆ ಮಂಜೂರಾಗಿತ್ತು.ಈ ಯೋಜನೆಯಡಿ ರಾಜ್ಯದ ಗ್ರಾಮೀಣ ಭಾಗದ ಸಾಕಷ್ಟು ಯೋಜನೆಗಳನ್ನು ಅಭಿವೃದ್ಧಿಪಡಿಸಿದ್ದೇವೆ ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….