ಗಾಂಧೀಜಿಯವರು ಹುತಾತ್ಮರಾದರೂ ಅವರ ವಿಚಾರಧಾರೆಗಳು ಇಂದಿಗೂ ನಮ್ಮೊಂದಿಗಿವೆ: ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಹುತಾತ್ಮರಾದರೂ ಅವರ ವಿಚಾರಧಾರೆಗಳು ಇಂದಿಗೂ ನಮ್ಮೊಂದಿಗಿವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಹುತಾತ್ಮರ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು  ಹೋರಾಟವನ್ನು ಮುನ್ನಡೆಸಿದ ಮಹಾತ್ಮಗಾಂಧಿ ಅವರು ಸ್ವಾತಂತ್ರ್ಯ ಸಿಕ್ಕ ಐದಾರು ತಿಂಗಗಳುಗಳಲ್ಲೇ ತಾವೇ ದೊರಕಿಸಿಕೊಟ್ಟ ಸ್ವಾತಂತ್ರ್ಯದ ಮಣ್ಣಿನಲ್ಲೇ ಕೊಲೆ ಆಗಿ ಹುತಾತ್ಮರಾದರು.

ಹುತಾತ್ಮ ಮಹಾತ್ಮ ಅವರು ಇಂದು ನಮ್ಮ ಜತೆಗೆ ಇಲ್ಲದಿರಬಹುದು. ಆದರೆ  ಅವರ ವಿಚಾರಗಳು ಮತ್ತು ಅವರ ಬದುಕಿನ ಸಂದೇಶಗಳು ನಮ್ಮ ಜತೆಗೆ ಇವೆ. ಅವರು ಗಾಂಧಿಯನ್ನು ಕೊಂದರೇ ಹೊರತು ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಾಗಿಲ್ಲ. ಇಡೀ ವಿಶ್ವ ಗೌರವಿಸುವ ವ್ಯಕ್ತಿ ಮತ್ತು ವ್ಯಕ್ತಿತ್ವ ಮಹಾತ್ಮಗಾಂಧಿ ಅವರದ್ದು. 

ದೇಶ ವಿಭಜನೆಯ ಸಂದರ್ಭದಲ್ಲಿ ಗಾಂಧಿ ಅವರು ನಿರ್ವಹಿಸಿದ ಪಾತ್ರವನ್ನು ಬೇರೆ ಯಾರಿಂದಲೂ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ.  ವಿಭಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆಗಳು, ಹಿಂಸೆ ಮತ್ತು ಕ್ರೌರ್ಯದ ಘಟನೆಗಳನ್ನು ನಾನು ಓದಿದ್ದೇನೆ. 

ಆ ಘಟನೆಗಳನ್ನು ನೆನಪಿಸಿಕೊಂಡರೆ ಈಗಲೂ ಮೈನಡುಗುತ್ತದೆ. ಲಾಹೋರ್, ದೆಹಲಿ, ಪಶ್ಚಿಮಬಂಗಾಳ ಮುಂತಾದ ಕಡೆಗಳಲ್ಲಿ ನಡೆಯುತ್ತಿದ್ದ ಭೀಕರ ಕೋಮುಗಲಭೆಗಳ ಸಂದರ್ಭದಲ್ಲಿ ಜನರ ಬಳಿಗೆ ಹೋಗಿ ಅವರಿಗೆ ಸಾಂತ್ವನ ಹೇಳಿ, ಸಮಾಧಾನಪಡಿಸಿ ಕೋಮುಗಲಭೆಗಳನ್ನು ನಿಲ್ಲಿಸಿದರು. 

ಈ ಕೆಲಸ ಮಾಡಲು ಸಾಧ್ಯ ಇದ್ದದ್ದು ಮಹಾತ್ಮಗಾಂಧಿಯವರಿಗೆ ಮಾತ್ರ. ಹೀಗಾಗಿ ಗಾಂಧಿ ಅವರಿಗೆ ಗಾಂಧಿಯೇ ಸಾಟಿ. ವಿಶ್ವದಲ್ಲಿ ಮಹಾತ್ಮ ಎಂದು ಕರೆಸಿಕೊಳ್ಳುವ ನಿಜವಾದ ಅರ್ಹತೆ ಹೊಂದಿದ್ದವರು ಗಾಂಧಿ ಮಾತ್ರ ಎಂದು ಅವರ ಹೋರಾಟ ಮತ್ತು ವೈಚಾರಿಕತೆಯನ್ನು ಸ್ಮರಿಸಿದರು.

ಬದುಕಿರುವವರೆಗೂ, ತಮ್ಮ ದೇಹದಲ್ಲಿ ರಕ್ತದ ಕೊನೆ ಹನಿ ಇರುವವರೆಗೂ ಮನುಕುಲದ ಒಳಿತಿಗಾಗಿ ಶ್ರಮಿಸಬೇಕು ಎಂದು ಬದುಕಿದ್ದವರು. ಮನುಕುಲದ ಶಾಂತಿ-ನೆಮ್ಮದಿಗಾಗಿ ದುಡಿಯುತ್ತಿದ್ದವರು. ಇವರು ಇನ್ನಷ್ಟು ವರ್ಷಗಳ ಕಾಲ ಬದುಕಿದ್ದಿದ್ದರೆ ಭಾರತದ ಚಿತ್ರಣವೇ ಇನ್ನೂ ಭಿನ್ನವಾಗಿರುತ್ತಿತ್ತು.

ಆದರೆ, ಮತಾಂಧತೆಯ ವಿರುದ್ಧ ಮನುಕುಲದ ಒಳಿತಿಗಾಗಿ ಶ್ರಮಿಸುತ್ತಿದ್ದ ಗಾಂಧಿ ಅವರನ್ನು ಮತಾಂಧನೊಬ್ಬ ಕೊಂದು ಹಾಕಿದ. ಆಗಿನ ಬ್ರಿಟಿಷ್ ಅಧಿಕಾರಿಯೇ ಗಾಂಧಿ ಅವರನ್ನು, “ಆರ್ಮಿ ಆಫ್ ಪೀಸ್’ ಎಂದು ಕರೆದಿದ್ದರು.

ಆತ್ಮಬಲ ಮಹಾತ್ಮಗಾಂಧಿ ಅವರಿಗೆ ಹೆಚ್ಚಾಗಿತ್ತು. ಗಾಂಧಿ ಅವರ ವಿಚಾರಗಳಿಂದ ಪ್ರಭಾವಿತರಾದ ಯುವಕರು ನೀವು ನೂರು ವರ್ಷ ಬದುಕಬೇಕು ಎಂದು ಹಾರೈಸಿದರೆ, ಇಲ್ಲ ನಾನು ನೂರಾ ಇಪ್ಪತ್ತು ವರ್ಷ ಬದುಕುತ್ತೇನೆ, ನೀವು ನನ್ನ ಆಯಸ್ಸನ್ನು ಕಡಿಮೆ ಮಾಡಿದ್ದೀರಿ ಎಂದು ಯುವಕರಿಗೆ ಹೇಳುತ್ತಿದ್ದರು.

ಆ ಮಟ್ಟದ ಆತ್ಮಬಲ ಗಾಂಧಿ ಅವರಲ್ಲಿತ್ತು. ಅವರು ಕೊಲೆ ಆಗುವ ವೇಳೆಯಲ್ಲೂ ಆರೋಗ್ಯ ತುಂಬಾ ಚೆನ್ನಾಗಿತ್ತು. ಅವರು ಇಚ್ಚಿಸಿದಷ್ಟು ವರ್ಷ ಬದುಕುವ ಚೈತನ್ಯ ಮತ್ತು ಆತ್ಮಬಲದ ಜತೆಗೆ ಆರೋಗ್ಯವನ್ನೂ ಹೊಂದಿದ್ದರು.

ಹುತಾತ್ಮ ಮಹಾತ್ಮ ಗಾಂಧಿ ಅವರ ವಿಚಾರಧಾರೆಗಳು ಹಿಂದೆಂದಿಗಿಂತ ಇಂದು ಹೆಚ್ಚು ಅಗತ್ಯವಾಗಿದೆ. ಗಾಂಧಿ ಅವರ ಬದುಕಿನ ಹೋರಾಟ ಮತ್ತು ಬದುಕಿನ ಸಂದೇಶವೇ ನಮಗೆಲ್ಲರಿಗೂ ಸ್ಫೂರ್ತಿ ಆಗಬೇಕು. 

ಅದರಲ್ಲೂ ಇವತ್ತಿನ ವಿದ್ಯಾರ್ಥಿ ಯುವಜನರು ಗಾಂಧಿ ಮಹಾತ್ಮ ಏಕಾದರು ಎನ್ನುವುದನ್ನು ಅರಿತುಕೊಳ್ಳಬೇಕು. ಈ ವಿಶ್ವಕ್ಕೆ, ಈ ದೇಶಕ್ಕೆ ನೆಮ್ಮದಿ-ಶಾಂತಿಯ ಬದುಕು ಬೇಕೆಂದರೆ ಅದು ಗಾಂಧಿ ಅವರ ಬದುಕಿನ ಸಂದೇಶಗಳಿಂದ, ಬದುಕಿನ ಮಾರ್ಗದಿಂದ ಮಾತ್ರ ಸಾಧ್ಯ.

ಹೀಗಾಗಿ ಮಹಾತ್ಮರ ಪುಣ್ಯತಿಥಿಯಂದು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿ ಮಡಿದ, ಮನುಕುಲದ ಶಾಂತಿಗಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನೂ ಸ್ಮರಿಸುತ್ತಾ ಅವರೆಲ್ಲರಿಗೂ ಈ ಸಂದರ್ಭದಲ್ಲಿ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!