ದೊಡ್ಡಬಳ್ಳಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2022ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ: ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕೆಂದ ಇತಿಹಾಸ ತಜ್ಞ ಡಾ.ಎಸ್.ವೆಂಕಟೇಶ್

ದೊಡ್ಡಬಳ್ಳಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2022ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆಯಿತು.

ಇತಿಹಾಸ ತಜ್ಞ ಡಾ.ಎಸ್.ವೆಂಕಟೇಶ್ ಮಾತನಾಡಿ, ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು. ಹಲವಾರು ಮಹನೀಯರು ಪತ್ರಿಕೆಗಳ ಮೂಲಕ ಸಮಾಜವನ್ನು ತಿದ್ದುವ ಮೂಲಕ ಇತಿಹಾಸದಲ್ಲಿ ದಾಖಲಾಗಿರುವುದನ್ನು ನಾವು ಕಾಣಬಹುದಾಗಿದ್ದು, ದೊಡ್ಡಬಳ್ಳಾಪುರದಲ್ಲಿ ರುಮಾಲೆ ಚೆನ್ನಬಸವಯ್ಯನವರು ತಾಯಿನಾಡು ಪತ್ರಿಕೆ ಹೊರತಂದಿದ್ದರು. ಪತ್ರಿಕೆಗಳ ಮೂಲಕ, ಸಮಾಜದ ಓರೆಕೋರೆಗಳನ್ನು ತಿದ್ದುವ, ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದ್ದು, ಸಣ್ಣ ಪತ್ರಿಕೆಗಳು ಈ ದಿಸೆಯಲ್ಲಿ ಹೆಚ್ಚಿನ ಕಾರ್ಯ ಮಾಬಹುದಾಗಿದೆ. ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಪತ್ರಿಕೆಗಳ ಪಾತ್ರ ಗಣನೀಯ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಮಂಡಿಬೆಲೆ ರಾಜಣ್ಣ ಮಾತನಾಡಿ,  90 ವಸಂತಗಳನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪೂರೈಸಿ ರಾಜ್ಯದಲ್ಲಿ ದೊಡ್ಡ ಸಂಘಟನೆಯಾಗಿ ಕಾರ್ಯನಿರ್ವಹಿಸುತ್ತಿದೆ.  ಆದರೆ ಪತ್ರಿಕೋದ್ಯಮದಲ್ಲಿರುವವರಿಗೆ ಭದ್ರತೆ ಇಲ್ಲವಾಗಿದೆ. ಆಧುನಿಕತೆಯ ದಿನದಲ್ಲಿ ಪತ್ರಕರ್ತರಿಗೆ ಸವಲತ್ತುಗಳು ದೊರಕದಾಗಿದೆ. ಪತ್ರಿಕಾಲಯಗಳು ವ್ಯಾಪಾರಿಕರಣದ ದೃಷ್ಟಿಯಿಂದ ಸೇವಾ ಪತ್ರವನ್ನು ನೀಡದೆ ವಂಚಿಸಲಾಗುತ್ತಿದೆ. ಪತ್ರಿಕೋದ್ಯಮ ಉದ್ಯಮಿಗಳ ಕೈ ಸಿಲುಕಿ ಪತ್ರಕರ್ತರು ಬಸವಳಿಯುವಂತಾಗಿದ್ದು, ಸರ್ಕಾರ ಪತ್ರಕರ್ತರ ನೆರವಿಗೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಪತ್ರಕರ್ತರು ಕಾಳಜಿಯುತ ವೃತ್ತಿ ನಡೆಸಬೇಕಿದೆ. ಅತಿ ಹೆಚ್ಚು ಪತ್ರಿಕೆಗಳನ್ನು ಮಾದ್ಯಮಪಟ್ಟಿಗೆ ಸೇರಿಸದೆ ಜಾಹಿರಾತು ವರಮಾನದ ವಂಚನೆಯಾಗುತ್ತಿದೆ. ಈ ನಿಟ್ಟಿನಲ್ಲಿ ವಾರ್ತಾ ಇಲಾಖೆ ಗಮನ ಹರಿಸಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ತಾಲೂಕು ಅಧ್ಯಕ್ಷ ಗಂಗರಾಜ ಶಿರವಾರ ಮಾತನಾಡಿ, ಪತ್ರಕರ್ತರಿಗೆ ಎಲ್ಲರ ಜೊತೆ ಸಂವಹನ ಅಗತ್ಯವಾಗಿದೆ. ಅದೇ ರೀತಿ ಪತ್ರಕರ್ತರ ಸಂಘ ಚಟುವಟಿಕೆಯಿಂದಿರಲು, ಪತ್ರಕರ್ತರ ಒಂದು ವೇದಿಕೆಗೆ ತರಲು ಈ ಕಾರ್ಯಕ್ರಮ ಪೂರಕವಾಗಿದೆ. ಪತ್ರಕರ್ತರಿಗೆ ಕಾರ್ಯಾಲಯ ಹಾಗೂ ನಿವೇಶನ ದೊರಕಿಸಿಕೊಡಲು ನಗರಸಭೆ ಕ್ರಮ ವಹಿಸುವಂತೆ ಮನವಿ ಮಾಡಿದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಪತ್ರಕರ್ತರ ಮನವಿಗೆ ಸ್ಪಂದಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಮುರಳಿ ಮೋಹನ್, ಪ್ರಧಾನ ಕಾರ್ಯದರ್ಶಿ ಎಸ್.ಬಿ.ರಫೀ ಉಲ್ಲಾ,ಕಾರ್ಯದರ್ಶಿ ಶಾಂತಮೂರ್ತಿ, ನಿಕಟ ಪೂರ್ವ ಕಾರ್ಯದರ್ಶಿ ಆರ್.ರಮೇಶ್,ವಿಶ್ವಾಮಿತ್ರ ಪೌಂಡೇಷನ್ ಅಧ್ಯಕ್ಷ ಹೊಸಕೋಟೆ ಜಿ.ಶ್ರೀನಿವಾಸ್, ತಾಲೂಕು ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್ ಅಧ್ಯಕ್ಷ ಡಿ.ಶ್ರೀಕಾಂತ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು , ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಸಂಘಟನಾ ಕಾರ್ಯದರ್ಶಿ ಪರಮೇಶ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಶೆಟ್ಟಿ, ಖಜಾಂಚಿ ಜೆ.ಮುನಿರಾಜು, ಉಪಾಧ್ಯಕ್ಷರಾದ ಕೆ.ಸಿ.ರುದ್ರೇಶ್, ಅನ್ನಪೂರ್ಣ,ಆರ್.ಶ್ರೀಧರ್, ಕಾರ್ಯದರ್ಶಿಗಳಾದ ಮುನಿಸ್ವಾಮಿ, ಪಿ.ಶಿವಶಂಕರ್ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!