ಭ್ರಷ್ಟಾಚಾರ ವಿವಾದ: ಮಾಧ್ಯಮ ಪ್ರಕಟಣೆ ನೀಡಿದ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣವರ್

ಬೆಂಗಳೂರು: ಭ್ರಷ್ಟಾಚಾರ ವಿವಾದದಲ್ಲಿ ಸಿಲುಕಿರುವ ಐಪಿಎಸ್ ರವಿ ಡಿ.ಚನ್ನಣ್ಣವರ್​ ಮಾಧ್ಯಮ ಪ್ರಕಟಣೆ ನೀಡಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರಕಟಣೆಯಲ್ಲಿ ಉಲ್ಲೇಖವಾಗಿರುವ ಸಂದೇಶವನ್ನು ಕೆಳಕಂಡಂತೆ ಯಥಾವತ್ತಾಗಿ ನೀಡಲಾಗಿದೆ.

ಆತ್ಮೀಯರೇ: ಇತ್ತೀಚಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ  ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿ ಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿರುತ್ತಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದು, ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಈ ಕೆಳಕಂಡಂತೆ ಕ್ರಮ ಕೈಗೊಂಡಿರುತ್ತೆನೆ.

1. ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ.

2.ನಾನು ಈ ಕುರಿತು ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ , ರೂಪಾಯಿ 3 ಕೋಟಿಗೆ ಮಾನನಷ್ಟ ಮೊಕದ್ದಮೆಯನ್ನ ದಾಖಲಿಸಲಿದ್ದೇನೆ.

3.ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ ಕ್ರಿಮಿನಲ್ DEFEMATION ಕೇಸ್ ಹೂಡಲಿದ್ದೇನೆ.

ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. 

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.

ಹಾಗೆಯೇ ನನಗೆ  ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ,  ಹೀಯಾಳಿಸುವುದನ್ನು  ಮಾಡಬಾರದು. ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನೆ ರವಿ ಚನ್ನಣ್ಣನವರ್ ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!