ನವದೆಹಲಿ: ರೈತರು ದೀರ್ಘ ಹೋರಾಟಕ್ಕೆ ಸಿದ್ಧರಾಗಿ, ರೈತ ಸಮುದಾಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಕೇಂದ್ರವು ನಮಗೆ ದ್ರೋಹ ಮಾಡಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ರೈತರ ಪ್ರತಿಭಟನೆ ವೇಳೆ ಹುತಾತ್ಮರಾದವರಿಗೆ ಕೇಂದ್ರ ಪರಿಹಾರ ನೀಡಿಲ್ಲ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ನೀಡುವ ಬಗ್ಗೆ ಪರಿಶೀಲಿಸಲು ಸಮಿತಿಯನ್ನು ಏಕೆ ನೀಡಿಲ್ಲ ಎಂಬುದನ್ನು ಕೇಂದ್ರ ವಿವರಿಸಬೇಕೆಂದು ಒತ್ತಾಯಿಸಿದ್ದಾರೆ.
ದೇಶದ ರೈತರಿಗೆ ಸರ್ಕಾರ ದ್ರೋಹ ಮಾಡುವ ಮೂಲಕ ಅವರ ಗಾಯಕ್ಕೆ ಉಪ್ಪು ಸವರಿದೆ. ಈ ದ್ರೋಹದಿಂದ ದೇಶದ ರೈತರು ಸುದೀರ್ಘ ಹೋರಾಟಕ್ಕೆ ಸಿದ್ಧರಾಗಬೇಕೆಂಬುವುದು ಸ್ಪಷ್ಟವಾಗಿದೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….