ದೊಡ್ಡಬಳ್ಳಾಪುರ: ತೀವ್ರವಾದ ಸಾಲದ ಆತಂಕದಿಂದ ಮನನೊಂದು ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಲಿಂಗನಹಳ್ಳಿಯಲ್ಲಿ ಸಂಭವಿಸಿದೆ.
ಮೃತ ರೈತನನ್ನು ಮುನಿರಾಜು (45ವರ್ಷ) ಎಂದು ಗುರುತಿಸಲಾಗಿದ್ದು, ಮಂಗಳವಾರ ಬೆಳಗ್ಗೆ ತೋಟಕ್ಕೆ ನೀರು ಕಟ್ಟಲು ತೆರುವುದಾಗಿ ತೆರಳಿದವರು ಮರಕ್ಕೆ ನೇಣು ಬಿಗಿದುಕೊಂಡು ಸಾವನಪ್ಪಿದ್ದಾರೆ.
ಟ್ರಾಕ್ಟರ್, ಮೀನು ಸಾಕಣೆ ಸೇರಿದಂತೆ ಕೃಷಿಗಾಗಿ ಸುಮಾರು 25 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದು, ತೀವ್ರವಾದ ಸಾಲದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….