ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಖಾಲಿ ಇರುವ 06 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 13 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮಹಿಳೆಯರು ವೆಬ್‌ಸೈಟ್ www.anganwadirecruit.kar.nic.in ಮೂಲಕ ಅರ್ಜಿ ಸಲ್ಲಿಸಲು 2022ರ ಮಾರ್ಚ್ 02 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನೆಲಮಂಗಲ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ವಿಜಯನಗರ ಪಾರ್ಕ್ ಮುಂಭಾಗ, ವಿಜಯನಗರ, ನೆಲಮಂಗಲ-562123 ಹಾಗೂ ದೂರವಾಣಿ ಸಂಖ್ಯೆ: 080-27722177 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನೆಲಮಂಗಲ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….