ಕೆ.ಎಸ್.ನಿಸಾರ್ ಅಹಮದ್ ಟ್ರಸ್ಟ್ ಯುವಕವಿಗಳಿಗೆ ಉತ್ತಮ ವೇದಿಕೆ: ಸಚಿವ ಆರ್.ಅಶೋಕ್

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪದ್ಮಶ್ರೀ ಪುರಸ್ಕೃತ ಹಾಗೂ ನಾಡೋಜ  ಕೆ.ಎಸ್.ನಿಸಾರ್ ಅಹ್ಮದ್ ಅವರ ಸವಿ ನೆನಪಿನಲ್ಲಿ ನಿಸಾರ್ ಇನ್ಸಿಟ್ಯೂಟ್ ಆಫ್ ಎಜುಕೇಶನ್ ಟ್ರಸ್ಟ್ ಹಾಗೂ  ಸ್ಮಾರಕ  ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ  ಕಲಿಕಾರ್ಥಿ ಹಾಗೂ ವಿದ್ಯಾರ್ಥಿಗಳಿಗೂ ಸಾಹಿತ್ಯ, ಸಂಗೀತ, ನೃತ್ಯ  ಕಲಿಯಲು ಈ ವಿದ್ಯಾ ಕೇಂದ್ರ  ಉತ್ತಮ ವೇದಿಕೆಯಾಗಲಿದೆ ಎಂದು ಕಂದಾಯ ಇಲಾಖೆ ಸಚಿವರಾದ ಆರ್.ಅಶೋಕ್ ಅವರು ತಿಳಿಸಿದರು. 

ಅವರು ತಾಲ್ಲೂಕಿನ  ನಂದಿ  ಹೋಬಳಿಯ ಮೊಟ್ಲೂರು ಗ್ರಾಮದಲ್ಲಿ ಸೋಮವಾರ ಪದ್ಮಶ್ರೀ, ನಾಡೋಜ ಕೆ.ಎಸ್.ನಿಸಾರ್ ಅಹ್ಮದ್ ಅವರ ಪುತ್ಥಳಿಯ ಅನಾವರಣಗೊಳಿಸಿ ಹಾಗೂ ನಿಸಾರ್ ಇನ್ಸಿಟ್ಯೂಟ್ ಆಫ್ ಎಜುಕೇಶನ್ ಟ್ರಸ್ಟ್ ಗೆ ಚಾಲನೆ ನೀಡಿ ಮಾತನಾಡಿದರು. 

ಚಿಕ್ಕಬಳ್ಳಾಪುರ ಜಿಲ್ಲೆಯ ಪರಿಸರ ಹಾಗೂ ವಾತಾವರಣ ಮಲೆನಾಡಿನ ಸೊಬಗನ್ನು ಮೀರಿಸುವಂತಿದೆ. ಇಂತಹ ಪರಿಸರದಲ್ಲಿ ನಿಸಾರ್ ಅವರ ಟ್ರಸ್ಟ್ ಮತ್ತು ಸ್ಮಾರಕ ನಿರ್ಮಿಸಿರುವುದು ಸಂತಸವಾಗಿದೆ. ರಾಜ್ಯ ಸರ್ಕಾರದಿಂದ ನಿಸಾರ್ ಅವರ ಸ್ಮಾರಕ ನಿರ್ಮಾಣಕ್ಕೆ ಜಿಲ್ಲೆಯಲ್ಲಿ ಸುಮಾರು 2.5 ಎಕರೆ ಜಮೀನು ಒದಗಿಸಿದ್ದೇವೆ. ಈ ಸ್ಮಾರಕದ  ಮೂಲಕ ಸಂಗೀತಗಾರರಿಗೆ ಉತ್ತಮ ತರಬೇತಿ ಕೇಂದ್ರವಾಗಿ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡುವ ಕಲಿಕಾ ಶಾಲೆಯಾಗಿ ಹಾಗೂ  ಸಾಹಿತ್ಯ  ಆಸಕ್ತರಿಗೆ  ಉತ್ತಮ  ಕಮ್ಮಟವಾಗಿ ಹೊರಹೊಮ್ಮಲಿದೆ ಎಂದರು. 

ನಿಸಾರ್ ರವರು ತಮ್ಮ ಜೀವನವನ್ನೇ ಮುಡುಪಾಗಿಟ್ಟು ಕನ್ನಡ ಸಾಹಿತ್ಯಕ್ಕೆ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲದೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡಕ್ಕೆ ಮತ್ತಷ್ಟು ಮೆರುಗು ತಂದ ಮಾಹನ್ ಕವಿ.ಅವರು ರಚಿಸಿರುವ “ಜೋಗದ ಸಿರಿ ಬೆಳಕಿನಲ್ಲಿ” ಹಾಡು ಎಂದಿಗೂ ಮರೆಯಲಾರೆವು. ಜಗತ್ತು ಇರುವವರೆಗೂ ಈ ಹಾಡು ಜನಪ್ರಿಯ ಆಗಿರುತ್ತದೆ. ನಿತ್ಯೋತ್ಸವ ಕವಿಯಾಗಿ ಕನ್ನಡದ ಹಾಡುಗಳನ್ನು ಬರೆದವರು ಎಂದು ತಿಳಿಸಿ ಇತ್ತೀಚಿನ ದಿನಗಳಲ್ಲಿ  ರಚನೆ ಆಗುವ ಕೆಲವು ಸಿನಿಮಾ ಹಾಡುಗಳ ನೆನಪು  ಬೇಗನೆ  ಮಾಸಿಹೋಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ತಮ್ಮ ಜೀವನವನ್ನು ಕನ್ನಡ ಸಾಹಿತ್ಯ ಕೃಷಿಗೆ ಮುಡುಪಾಗಿಟ್ಟು, ಚಿರಸ್ಥಾಯಿಯಾಗಿ ಉಳಿಯುವಂತಹ ಕನ್ನಡದ ಕೆಲಸಗಳನ್ನು ಅವರು ಮಾಡಿದ್ದಾರೆ ಜೋಗದ ಸಿರಿ ಬೆಳಕಿನಲ್ಲಿ ಗೀತೆಗೆ ಅಂತ್ಯವಿಲ್ಲ. ಜೋಗದ  ಜಲಪಾತ ಇರುವವರೆಗೂ ಹಾಡು ಜನಮಾನಸದಲ್ಲಿ ಇರುತ್ತದೆ ಈ ನಿಟ್ಟಿನಲ್ಲಿ ನಿಸಾರ್ ನೆನಪಿನ ಸ್ಮಾರಕ ಸಂಗೀತ-ನೃತ್ಯ ಹಾಗೂ  ಕನ್ನಡ  ಸಾಹಿತ್ಯ ಕಲಿಯುವಂತಹ ವಿದ್ಯಾ ಕೇಂದ್ರವಾಗಬೇಕು ಈ ಉದ್ದೇಶಕ್ಕೆ ಇಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸುತ್ತಿದ್ದು ಅದು ಕವಿಗಳ ತಾಣವಾಗಬೇಕು ಎಂದು ಹೇಳಿದರು. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮಾತನಾಡುತ್ತಾ, ಪ್ರಕೃತಿ ಸೊಬಗಿನಲ್ಲಿ ನಿಸಾರ್ ಅಮಹದ್ ಅವರ ಹೆಸರಲ್ಲಿ  ಸಂಸ್ಥೆ ಸ್ಥಾಪನೆಯಾಗುತ್ತಿರುವುದು ನಮ್ಮ  ಭಾಗದ  ಭಾಗ್ಯ. ಕವಿಗೆ ಹಾಗೂ ಕವನಗಳಿಗೆ ಎಂದಿಗೂ ಸಾವಿಲ್ಲ. ಈ ನಿಟ್ಟಿನಲ್ಲಿ ಅವರು ರಚಿಸಿರುವ ಗೀತೆಗಳು, ಕವನಗಳ ಮೂಲಕ ನಿಸಾರ್ ಚಿರಾಯುವಾಗಿ ಅಮರರಾಗಿ  ಜನಮಾನಸದಲ್ಲಿ ಇದ್ದಾರೆ ಎಂದರು.

ಅವರು ರಚಿಸಿರುವ ನಿತ್ಯೋತ್ಸವದ ಹಾಡಿನಿಂದ  ಕನ್ನಡಾಂಬೆಗೆ ಹಾಗೂ ಭುವನೇಶ್ವರಿಗೆ ದಿನನಿತ್ಯದ ಉತ್ಸವ ಆಗುತ್ತಿದೆ. ಈ ಗೀತೆ ಕನ್ನಡನಾಡಿನ ನೈಸರ್ಗಿಕ ಸೌಂದರ್ಯವನ್ನು ಭೌಗೋಳಿಕ ಮಹತ್ವವನ್ನು ಕಣ್ಣಿಗೆ ಕಟ್ಟುವಂತೆ ತಿಳಿಸಿಕೊಟ್ಟಿದೆ.ಅವರು ಖ್ಯಾತ  ಕವಿ ಶೇಕ್ಸ್ ಪೀಯರ್ ಹಾಗೂ ಕುವೆಂಪು ಕವಿತೆಗಳನ್ನು ಇಷ್ಟಪಡುತ್ತಿದ್ದರೂ ಸಹ ಯಾವುದೇ ರೀತಿಯ ಅನುಕರಣೆ ಮಾಡದೆ ತಮ್ಮದೇ ಆದ ಶೈಲಿಯಲ್ಲಿ ಸಾಹಿತ್ಯವನ್ನು ರಚಿಸಿದ್ದಾರೆ  ಇಂತಹ ಶ್ರೇಷ್ಠ ಕವಿಯ ಜೀವನಚರಿತ್ರೆಯನ್ನು ತಿಳಿದುಕೊಂಡು  ಅಳವಡಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ  ಈ ನಿಟ್ಟಿನಲ್ಲಿ  ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಿಸಲು ಜಮೀನು ನೀಡಿರುವಂತೆಯೇ ಈ ಶಿಕ್ಷಣ ಸಂಸ್ಥೆಯ ಕಟ್ಟಡ, ಮ್ಯೂಸಿಯಂ ನಿರ್ಮಾಣ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು  ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತದೆ ಎಂದರು.

ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಎನ್.ನಾಗರಾಜು ಮಾತನಾಡಿದ ಅವರು, ತಮ್ಮ ಸರಳ ಮತ್ತು ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ನಿಸಾರ್ ಅಹ್ಮದ್ ಅವರು ಅಲ್ಪಸಂಖ್ಯಾತರ ವರ್ಗದಲ್ಲಿ ಜನಿಸಿ ಜಾತ್ಯಾತೀತವಾದ ತತ್ವಸಿದ್ಧಾಂತಗಳನ್ನು ಅಳವಡಿಸಿಕೊಂಡು ತಮ್ಮ ಸಾಹಿತ್ಯ ದಲ್ಲಿ  ಅದನ್ನು ರಚಿಸಿ ತನ್ನದೇ ಆದ ಮಹಾನ್ ಕೊಡುಗೆಯನ್ನು  ಕನ್ನಡ  ಸಾಹಿತ್ಯಕ್ಕೆ ನೀಡಿದ್ದಾರೆ.ಅಂತಹ ನಿತ್ಯೋತ್ಸವ  ಕವಿಯಿಂದ ಸ್ಫೂರ್ತಿ ಪಡೆದ ನಾವುಗಳು ಸಂಪತ್ತು ಬಂದಾಗ ದಾನ ಮಾಡಬೇಕು, ಬಡತನ ಬಂದಾಗ ಧ್ಯಾನ ಮಾಡಬೇಕು, ಅಧಿಕಾರ ಬಂದಾಗ ಸೇವೆ ಮಾಡಬೇಕು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ  ಶಾಸಕ ಯು.ಟಿ.ಖಾದರ್, ಖ್ಯಾತ ಕವಿ ಬಿ.ಆರ್.ಲಕ್ಷ್ಮಣರಾವ್, ಕಸುಸಂಪ ಅಧ್ಯಕ್ಷರಾದ ವೈ.ಕೆ.ಮುದ್ದುಕೃಷ್ಣ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್, ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ತಾಲ್ಲೂಕು ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಕೆ ಎಸ್ ನಿಸಾರ್ ಅಹಮದ್ ಅವರ ಕುಟುಂಬ ಪರಿವಾರದ  ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೆ.ಎಸ್.ನಿಸಾರ್ ಅಹ್ಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಡಿನ ಗೀತಗಾಯನ ಗಮನಸೆಳೆಯಿತು. ಗಣ್ಯರೆಲ್ಲರೂ ನಿಸಾರ್ ಅಹ್ಮದ್ ಅವರ ಪುತ್ತಳಿಗೆ ಮಾಲಾರ್ಪಣೆ  ಮಾಡಿ  ಗೌರವ ಸಮರ್ಪಣೆ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]