ಅಗ್ನಿಪಥ್ ಯೋಜನೆ ವಾಪಸ್ ಇಲ್ಲ: ಗಲಭೆಕೋರರಿಗೆ ಸೇನೆ ಸೇರಲು ಅವಕಾಶವಿಲ್ಲ – ಲೆಫ್ಟಿನೆಂಟ್ ಜನರಲ್ ಅನಿಲ್‌ಪುರಿ..!!

ನವದೆಹಲಿ: ದೇಶ ಸೇವೆಯ ವೇಳೆ ತಮ್ಮ ಜೀವ ಬಲಿದಾನ ಮಾಡಿದರೆ ಅಗ್ನಿವೀರರಿಗೆ 1 ಕೋಟಿ ರೂ. ಪರಿಹಾರ ಸಿಗಲಿದೆ. ಅಲ್ಲದೆ ಭವಿಷ್ಯದಲ್ಲಿ ಇದರ ಸಂಖ್ಯೆಯೂ ರೂ.1.25 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ರಕ್ಷಣಾ ಸಚಿವಾಲಯದ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ತಿಳಿಸಿದ್ದಾರೆ.

ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೆಫ್ಟಿನೆಂಟ್ ಜನರಲ್ ಬನ್ಸಿ ಪೊನ್ನಪ್ಪ, ಜುಲೈ 24 ರಂದು ಪರೀಕ್ಷೆ ನಡೆಯಲಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಅಗ್ನಿವೀರರ ಮೊದಲ ಬ್ಯಾಚ್ ನೇಮಕವಾಗಲಿದೆ. ಇದರಲ್ಲಿ 25,000 ಯುವಕರನ್ನು ಅಯ್ಕೆ ಮಾಡಲಾಗುವುದು. 2023ರ ಫೆಬ್ರವರಿಯಲ್ಲಿ 2ನೇ ಬ್ಯಾಚ್ ನೇಮಕವಾಗಲಿದ್ದು ಇದರಲ್ಲಿ 40,000 ಜನರನ್ನು ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ಅಗ್ನಿವೀರರಿಗೆ ಘೋಷಣೆ ಮಾಡುತ್ತಿರುವ ಮೀಸಲಾತಿಗಳನ್ನು ಈ ಮೊದಲೇ ಯೋಜಿಸಲಾಗಿತ್ತು, ಅಗ್ನಿಪಥ್ ಆಕಾಂಕ್ಷಿಗಳು ತಾವು ಹಿಂಸಾಚಾರದಲ್ಲಿ ಭಾಗವಹಿಸಿಲ್ಲ ಎಂದು ಲಿಖಿತ ಪ್ರತಿಜ್ಞೆ ನೀಡಬೇಕು ಎಂದು ಹೇಳಿದ್ದಾರೆ. 

ಇಂದು ಅತಿಹೆಚ್ಚು ಸೈನಿಕರು 30ರ ವಯೋಮಾನದಲ್ಲಿದ್ದಾರೆ. ಆದರೆ ಸೇನೆಯ ಮೂರೂ ವಿಭಾಗಗಳಿಂದ ಪ್ರತಿ ವರ್ಷವೂ ಸುಮಾರು 17,600 ಮಂದಿ ಅವಧಿಗೆ ಮುನ್ನವೇ ನಿವೃತ್ತಿ ಪಡೆಯುತ್ತಿದ್ದಾರೆ. ನಿವೃತ್ತಿ ಬಳಿಕ ಏನು ಮಾಡುತ್ತೀರಿ? ಎಂದು ಯಾರೂ ಕೂಡ ಅವರನ್ನು ಕೇಳಲು ಹೋಗಿಲ್ಲ. ಅಗ್ನಿವೀರರು ಕೂಡ ಹಾಲಿ ಸೇವೆಯಲ್ಲಿರುವ ಸಾಮಾನ್ಯ ಸೈನಿಕರಂತೆಯೇ ಸಿಯಾಚಿನ್ ಹಾಗೂ ಇತರೆ ಕೆಲವು ಪ್ರದೇಶಗಳಲ್ಲಿ ಅದೇ ಭತ್ಯೆ ಪಡೆಯಲಿದ್ದಾರೆ. ಸೇವಾ ಪರಿಸ್ಥಿತಿಗಳಲ್ಲಿ ಅವರ ನಡುವೆ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ನೇಮಕಾತಿ ಪ್ರಮಾಣದಲ್ಲಿ ಹೆಚ್ಚಳ: 4-5 ವರ್ಷಗಳಲ್ಲಿ ತಮ್ಮ ಸೈನಿಕರ ನೇಮಕಾತಿ 50 – 60,000 ಆಗಲಿದೆ. ಕ್ರಮೇಣ 90,000 ದಿಂದ 1 ಲಕ್ಷಕ್ಕೆ ಏರಿಕೆಯಾಗಲಿದೆ. ಯೋಜನೆಯನ್ನು ವಿಶ್ಲೇಷಣೆಗೆ ಒಳಪಡಿಸಲು ಸಣ್ಣ ಪ್ರಮಾಣದಲ್ಲಿ ಆರಂಭ ಮಾಡುತ್ತಿದೆ ಎಂದು ವಿವರಿಸಿದ್ದಾರೆ.

ಅಗ್ನಿಪಥ್ ಯೋಜನೆ ವಿರುದ್ಧ ಸೇನಾ ಆಕಾಂಕ್ಷಿಗಳು ನಡೆಸುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಮಧ್ಯೆ, ಯೋಜನೆ ಕುರಿತು ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರ ಪ್ರಯತ್ನಿಸಿದೆ. ಕೆಲವು ವಿನಾಯಿತಿ ಮತ್ತು ಸವಲತ್ತುಗಳನ್ನು ಘೋಷಿಸಿದ್ದ ಗೃಹ ಸಚಿವಾಲಯ, ಪ್ರತಿಭಟನಾಕಾರರ ಆಕ್ರೋಶವನ್ನು ತಣ್ಣಗಾಗಿಸಲು ಪ್ರಯತ್ನಿಸಿದೆ. ಆದರೆ ಪ್ರತಿಭಟನೆಯ ಕಿಚ್ಚು ಕಡಿಮೆಯಾಗಿಲ್ಲ ಈ ಹಿನ್ನೆಲೆಯಲ್ಲಿ ಯೋಜನೆಯಲ್ಲಿರುವ ವಿವಿಧ ಸೌಲಭ್ಯ ಹಾಗೂ ಮೀಸಲಾತಿ ಬಗೆಗೆ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]