ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಾದರಿ ಆಶ್ರಯ ಬಡಾವಣೆ ನಿರ್ಮಾಣಕ್ಕೆ ಅಧಿಕಾರಿಗಳು ಸಿದ್ಧತೆ ಆರಂಭಿಸಿದ್ದಾರೆ.
ತಾಲೂಕು ಪಂಚಾಯಿತಿ ಇಒ ಶ್ರೀನಾಥ್ ಗೌಡ ನೇತೃತ್ವದ ಬುಧವಾರ ಹೊಸಹಳ್ಳಿ ಗ್ರಾಮದಲ್ಲಿ, ಸುಮಾರು ರೂ.1ಕೋಟಿ 50 ಲಕ್ಷ ಅನುಧಾನದಲ್ಲಿ 5 ಎಕರೆ ಪ್ರದೇಶದಲ್ಲಿ, ನಿವೇಶನ ಹಂಚಿಕೆಗೆ ಮೀಸಲಿರಿಸಿದ ಸ್ಥಳದಲ್ಲಿ, ಬಡಾವಣೆ ನಕ್ಷೆ ತಯಾರಿಸುವ ಪ್ರಕ್ರಿಯೆಯನ್ನು ಏಕಾಏಕಿ ಸುರಿದ ಮಳೆಯ ನಡುವೆಯೂ ಅಧಿಕಾರಿಗಳು ನಡೆಸಿದರು.
ಈ ವೇಳೆ ಜಂಟಿ ನಿರ್ದೇಶಕ ಸುರೇಶ್, ಸಹಾಯಕ ನಿರ್ದೇಶ ಸುರೇಶ್ ನಾಯಕ್, ಹೊಸಹಳ್ಳಿ ಗ್ರಾಪಂ ಅಧ್ಯಕ್ಷ ವೆಂಕಟೇಶ್, ಪಿಡಿಓ ನಾಗರಾಜ್ ಮತ್ತು ಸಿಬ್ಬಂದಿ ಹಾಜರಿದ್ದರು.
ಹೊಸಹಳ್ಳಿಯಲ್ಲಿ ನಡೆದ ಪ್ರಥಮ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯದಲ್ಲಿ ಭರವಸೆ ನೀಡಿದ್ದ ಕಂದಾಯ ಸಚಿವ ಆರ್.ಅಶೋಕ್ ಅವರ ಆದೇಶದ ಮೇರೆಗೆ, ಬಡಾವಣೆ ನಿರ್ಮಾಣ ಕಾರ್ಯ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

