ದೊಡ್ಡಬಳ್ಳಾಪುರ: ನಗರ ಮತ್ತು ಕಸಬಾ ಹೋಬಳಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಸೋಮವಾರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ದೈಹಿಕ, ಮಾನಸಿಕ ಸದೃಢತೆಗಾಗಿ ಆಟವಾಡಬೇಕು.

ಇಂದು ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗು ಸಹ ಉದ್ಯೋಗ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಮಾನ್ಯತೆ ಹಾಗೂ ಹಣ ಸಂಪಾದನೆಗು ಸಾಕಷ್ಟು ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ ಕ್ರೀಡೆಗೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.
ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ರೇಷ್ಮೆ ಮಂಡಳಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ನಗರಸಭೆ ಅಧ್ಯಕ್ಷೆ ಎಸ್.ಸುದಾರಾಣಿ ಲಕ್ಷ್ಮಿನಾರಾಯಣ್, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮಿನಾರಾಯಣ್, ನಗರಸಭೆ ಉಪಾಧ್ಯಕ್ಷೆ ಪರ್ಹಾನತಾಜ್, ಸದಸ್ಯೆ ರೂಪಿಣಿ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ದಾಕ್ಷಾಯಣಿ, ದೈಹಿಕಶಿಕ್ಷಣಾಧಿಕಾರಿ ಸುನಿಲ್ ನಾಯಕ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ನರಸಿಂಹಮೂರ್ತಿ ಬರಗೂರು, ಉಪಾಧ್ಯಕ್ಷೆ ಶೋಭಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೈಕುಮಾರ್ ಕಾರ್ಯದರ್ಶಿ ವಸಂತಗೌಡ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….
