ದೊಡ್ಡಬಳ್ಳಾಪುರ: ಸೆಪ್ಟೆಂಬರ್ 8 ರಂದು ಬಿಜೆಪಿ ಜನೋತ್ಸವ ಸಮಾವೇಶ ಹಿನ್ನೆಲೆ ಇಂದು ಸಮಾವೇಶದ ಸಿದ್ಧತಾ ಸಭೆ ನಡೆಯಲಿದೆ.
ನಗರದ ಹೊರವಲಯದಲ್ಲಿರುವ ರಘುನಾಥಪುರದಲ್ಲಿ ಸಿದ್ಧತಾ ಸಭೆ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಭಾಗದ ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಹಾಗೂ ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ, ದೊಡ್ಡಬಳ್ಳಾಪುರದಲ್ಲಿ ಮತ್ತೆ ಬಿಜೆಪಿ ಜನೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 08 ಗುರುವಾರ 11 ಗಂಟೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ರಾಜ್ಯ ಪ್ರಮುಖ ಮಂತ್ರಿಗಳು, ಶಾಸಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಯ ಮೂರ್, ನಾಲ್ಕು ತಾಲೂಕುಗಳನ್ನು ಸೇರಿಸಿ ಜನೋತ್ಸವ ಮಾಡಲಾಗುತ್ತಿದೆ.
ಇದಕ್ಕೂ ಮುನ್ನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಜುಲೈ 28 ರಂದು ಹಾಗು ಆಗಸ್ಟ್ 28 ರಂದು ನಡೆಯಬೇಕಿದ್ದ ಕಾರ್ಯಕ್ರಮ ಗಣೇಶ ಹಬ್ಬದ ಕಾರಣ ಎರಡು ಬಾರಿ ಕಾರ್ಯಕ್ರಮ ರದ್ದು ಮಾಡಲಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….