ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನೀಡಲಾಗುವ 2022-23ನೇ ಸಾಲಿನ ರಾಜ್ಯ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಕ್ಟೋಬರ್ 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ (ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.
ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಆಗಸ್ಟ್ 28 ರೊಳಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಕೋರಿದೆ.
ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ, ನಂ.03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ, ವಿಕಲಚೇತನರ ಸಹಾಯವಾಣಿ ಸಂಖ್ಯೆ: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….