ಗುತ್ತಿಗೆದಾರರ ಸಂಘದವರು ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡಲು ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ತಾವು ಭ್ರಷ್ಟಾಚಾರವನ್ನೇ ಮಾಡಿಲ್ಲ, ತಮ್ಮಂತಹ ಪ್ರಾಮಾಣಿಕರು, ಸತ್ಯವಂತರು ಯಾರಿಲ್ಲ ಎನ್ನುತ್ತಿದ್ದಾರೆ. ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಒಂದು ವೇಳೆ ನಮ್ಮಿಂದ ಸಾಬೀತು ಮಾಡಲು ಆಗಿಲ್ಲ ಎಂದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ, ನಾವದನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದಾರೆ. ತಪ್ಪು ಮಾಡಿಲ್ಲ ಎಂದಾದರೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಇರುವ ಸಮಸ್ಯೆಯೇನು? ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೂ ಈ ಸವಾಲನ್ನು ಸ್ವೀಕರಿಸಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲೆಸಿದಿದ್ದಾರೆ.

ನಾನು ವಿರೋಧ ಪಕ್ಷದ ನಾಯಕನಾದ ನಂತರ ಮೊದಲ ಬಾರಿಗೆ ಇಂದು ಕೆಂಪಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಅವರು ಪ್ರಧಾನಿಗಳಿಗೆ ಬರೆದ ಪತ್ರವನ್ನು ನೋಡಿದ್ದೆ, ಒಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ 20-25 ಜನ ಪದಾಧಿಕಾರಿಗಳು ಬಂದು ನನ್ನನ್ನು ಭೇಟಿಯಾಗಿ ಮನವಿ ಪತ್ರ ನೀಡಿದ್ದರು. ಅದಾದ ನಂತರ ಅರಣ್ಯ ಗುತ್ತಿಗೆದಾರರ ಸಂಘದವರು ಬಂದು ಮನವಿ ಪತ್ರ ನೀಡಿದ್ದರು. 

ಸರ್ಕಾರ ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಮ್ಮನ್ನು ಮಾತುಕತೆಗೆ ಕರೆದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದು ಬಿಟ್ಟರೆ ಯಾವ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯ ಮಾಡಬೇಕು ಎಂದು ನನಗೆ ಮನವಿ ಮಾಡಿದ್ದರು. 

ಟೆಂಡರ್‌ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷ ಆದರೂ ಅವರೂ ಯಾವ ಕ್ರಮ ಕೈಗೊಂಡಿಲ್ಲ. ನಾವು ನ್ಯಾಯಾಂಗ ತನಿಖೆ ನಡೆಸುವುದಾದರೆ ದಾಖಲಾತಿ ಕೊಡಲು ತಯಾರಾಗಿದ್ದೇವೆ, ಒಂದು ವೇಳೆ ನಮ್ಮಿಂದ ಇದನ್ನು ಸಾಬೀತು ಮಾಡಲು ಆಗದೆ ಹೋದರೆ ಯಾವುದೇ ರೀತಿಯ ಕಾನೂನು ಕ್ರಮ ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳಿದ್ದಾರೆ. ನಾನು ಕೂಡ ಹೈಕೋರ್ಟ್‌ ನ ಹಾಲಿ ನ್ಯಾಯಾಧೀಶ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೆ. 

ಭ್ರಷ್ಟಾಚಾರ ಎಲ್ಲಾ ಕಾಲದಲ್ಲೂ ಆಮೆ ವೇಗದಲ್ಲಿ ಇತ್ತು, ಈಗ ಶರವೇಗದಲ್ಲಿ ಸಾಗುತ್ತಿದೆ ಎಂದು ಗುತ್ತಿಗೆದಾರರು ಈ ಸರ್ಕಾರದ ಭ್ರಷ್ಟಾಚಾರವನ್ನು ತೆರೆದಿಟ್ಟಿದ್ದಾರೆ. ಗುತ್ತಿಗೆದಾರರಿಗೆ ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಬಿಬಿಎಂಪಿ ಇಂದ ಸುಮಾರು 22,000 ಕೋಟಿಗೂ ಅಧಿಕ ಬಿಲ್ ಹಣ ಬಿಡುಗಡೆಯಾಗಬೇಕಿದೆಯಂತೆ. 

ಈ ಬೃಹತ್‌ ಬಾಕಿ ಮೊತ್ತವನ್ನು ಆದ್ಯತೆ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಇದರ ಜೊತೆಗೆ ಅನುದಾನ ಮೀಸಲಿಡದೆ ಟೆಂಡರ್‌ ಕರೆಯುತ್ತಾರೆ, ಇದರಿಂದ ಕಾಮಗಾರಿ ಹಣ ಬಿಡುಗಡೆ ಆಗುವುದು ಹೇಗೆ? ಎಂಬುದು ಅವರ ಪ್ರಶ್ನೆಯಾಗಿದೆ.

ಒಟ್ಟಾರೆ ಗುತ್ತಿಗೆದಾರರು ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಬೇಸರಗೊಂಡಿದ್ದಾರೆ. ಇಂಥಾ ಭ್ರಷ್ಟ ಸರ್ಕಾರ ಯಾವ ಕಾಲದಲ್ಲೂ ಇರಲಿಲ್ಲ ಎಂಬುದು ಅವರ ಅಳಲು. ನ್ಯಾಯಾಂಗ ತನಿಖೆಗೆ ನಡೆಸಿದರೆ ತನಿಖೆ ವೇಳೆ ಸೂಕ್ತ ದಾಖಲೆ ನೀಡುವುದಾಗಿ ಹೇಳಿದ್ದಾರೆ. ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆ ಏನಿರಬಹುದು ಎಂದು ಕಾದು ನೋಡಬೇಕು.

ನಾವು ಸರ್ಕಾರದ ಮೇಲೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಆಗ್ರಹಕ್ಕೆ ಬೆಲೆ ಕೊಡದೆ ಹೋದರೆ ಈ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ.

ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ತಮ್ಮ ಸ್ಥಾನಕ್ಕಿರುವ ಘನತೆ, ಗೌರವ ಮರೆತು ‘ಸಿದ್ದರಾಮಯ್ಯ ಅವರ ಸರ್ಕಾರ 10% ಕಮಿಷನ್‌ ಸರ್ಕಾರ’ ಎಂದು ಆಧಾರ ರಹಿತ ಆರೋಪ ಮಾಡಿದಾಗ ಎಲ್ಲರೂ ಅದಕ್ಕೆ ಪ್ರಚಾರ ನೀಡಿದರು, ಯಾರು ಅವರ ಬಳಿ ದಾಖಲೆ ಕೇಳಿಲ್ಲ. ಈಗ ಗುತ್ತಿಗೆದಾರರ ಸಂಘದವರು ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡಲು ಸಿದ್ಧರಿದ್ದಾರೆ. ಹೀಗಿದ್ದಾಗ ನ್ಯಾಯಯುತ ತನಿಖೆ ಆಗಬೇಕೋ ಬೇಡವೋ? ಎಂದು ಪ್ರಶ್ನಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!