ದೊಡ್ಡಬಳ್ಳಾಪುರ: ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಿದ್ದ, ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ಎಜಾಕ್ಸ್ ಕಂಪನಿಯ ಸಿಎಸ್ಆರ್ ಅಧಿಕಾರಿ ಮಂಜುನಾಥ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಣ ಇಲಾಖೆಯ ಇ.ಸಿ.ಓ ಮೂರ್ತಿ, ಕೋವಿಡ್ 19 ಸೋಂಕಿನ ಕಾರಣ ಕಳೆದ ಎರಡು ವರ್ಷಗಳಿಂದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಇಲಾಖೆ ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈ ವರ್ಷ ಪ್ರತಿಭಾ ಕಾರಂಜಿಯ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಗಿದ್ದು, ಇದು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಸ್ಆರ್ ಅಧಿಕಾರಿಯ ಮಂಜುನಾಥ್, ಪ್ರತಿಭಾ ಕಾರಂಜಿಯ ಕಾರ್ಯಕ್ರಮ ಅತ್ಯುತ್ತಮವಾದ ಕಾರ್ಯಕ್ರಮವಾಗಿದ್ದು, ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಅತ್ಯುತ್ತಮವಾದ ವೇದಿಕೆಯಾಗಿದೆ. ಇದರ ಅವಕಾಶವನ್ನು ಉಪಯೋಗಿಸಿಕೊಂಡು, ಮಕ್ಕಳು ಉತ್ತಮ ಕಲಾವಿದರು ಹಾಗೂ ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಲಿ ಎಂದು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮುನಿಯಪ್ಪ, ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ, ಕೃಷ್ಣಮೂರ್ತಿ, ಶಾಲೆಯ ಮುಖ್ಯ ಶಿಕ್ಷಕಿ ರಾಜೇಶ್ವರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ಮುಖ್ಯಶಿಕ್ಷಕರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….