ದೊಡ್ಡಬಳ್ಳಾಪುರ: ಜೀಪ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ, ಬೊಲೆರೋ ಜೀಪ್ ಪಲ್ಟಿ ಹೊಡೆದಿರುವ ಘಟನೆ ನಗರದ ಕೆಸಿಪಿ ವೃತ್ತದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಅರಳು ಮಲ್ಲಿಗೆ ಗ್ರಾಮದವರೆನ್ನಲಾಗುತ್ತಿರುವ ದ್ವಿಚಕ್ರ ವಾಹನ ಸವಾರನಿಗೆ ಹಾಗೂ ತಿಪ್ಪಾಪುರ ಗ್ರಾಮದವರೆನ್ನಲಾಗುತ್ತಿರುವ ಜೀಪ್ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯರು ಆಂಬುಲೆನ್ಸ್ಗೆ ಕರೆ ಮಾಡಿ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ 112 ತುರ್ತು ಪೊಲೀಸ್ ಸೇವಾ ವಾಹನದ ಸಿಬ್ಬಂದಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….