ದೊಡ್ಡಬಳ್ಳಾಪುರ: ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ ಹಿಂತಿರುಗುತ್ತಿದ್ದ ವಿದ್ಯಾರ್ಥಿಯ ದ್ವಿಚಕ್ರ ವಾಹನ ಹಾಗೂ ಆರ್.ಟಿ.ನಗರ ಪಬ್ಲಿಕ್ ಶಾಲೆಯ ಬಸ್ ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ತಾಲೂಕಿನ ಲಿಂಗನಹಳ್ಳಿ ಸಮೀಪ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಾಶೆಟ್ಟಿಹಳ್ಳಿ ನಿವಾಸಿ ಅರುಣ್ ನಾಯಕ (17ವರ್ಷ) ಮೃತ ವಿದ್ಯಾರ್ಥಿ ಎಂದು ಪೊಲೀಸರು ಗುರುತಿಸಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿದ್ಯಾರ್ಥಿಗಳನ್ನು ಮನೆಗೆ ಬಿಡಲು ಕರೆದೊಯ್ಯುತ್ತಿದ್ದ ಶಾಲೆಯ ಬಸ್ ಹಾಗೂ ಚಿಕ್ಕಬಳ್ಳಾಪುರದ ಕಾಲೇಜು ಮುಗಿಸಿ ಹಿಂತಿರುಗಿ ಬರುತ್ತಿದ್ದ ವಿದ್ಯಾರ್ಥಿ ಅರುಣ್ ನಾಯಕ ಅವರ ದ್ವಿಚಕ್ರ ವಾಹನದ ನಡುವೆ ಅಪಘಾತ ಉಂಟಾಗಿ ದುರ್ಘಟನೆ ಸಂಭವಿಸಿದೆ.
ಘಟನೆ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….