ದೊಡ್ಡಬಳ್ಳಾಪುರ: ಮಳೆಯಿಂದಾಗಿ ಸೋರುತ್ತಿದ್ದ ನಗರದ ತೇರಿನಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯದ ಮೇಲ್ಚಾವಣಿ ದುರಸ್ತಿಗೆ ರೂ.3 ಲಕ್ಷ 93 ಸಾವಿರ ಬಿಡುಗಡೆಯಾಗಿದ್ದು, ಕಾಮಗಾರಿ ನಡೆಸಲು ನಿರ್ಮಿತಿ ಕೇಂದ್ರಕ್ಕೆ ಒಪ್ಪಿಸಲಾಗಿದೆ.
ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಒಳಪಡುವ, ಬಿ ಗ್ರೇಡ್ ದೇವಾಲಯವಾದ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯ. ಪ್ರತಿ ವರ್ಷ ಲಕ್ಷಾಂತರ ರೂ ಆದಾಯ ತರುತ್ತಿದ್ದರು, ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂಬ ಆರೋಪ ಭಕ್ತರದ್ದಾಗಿತ್ತು.
ಈ ಹಿನ್ನೆಲೆಯಲ್ಲಿ ಸೋಮವಾರ ಶಾಸಕ ಟಿ.ವೆಂಕಟರಮಣಯ್ಯ ಅಧಿಕಾರಿಗಳೊಂದಿಗೆ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, ದೇವಾಲಯದ ದುರಸ್ತಿ ಕಾಮಗಾರಿಗೆ ಬಿಡುಗಡೆಯಾಗಿರುವ ರೂ.3 ಲಕ್ಷ 93 ಸಾವಿರ ಅನುದಾನದಲ್ಲಿ ಚುರುಕಿ ಕಾಮಗಾರಿ, ನಾಮ ಫಲಕ ಕಾಮಗಾರಿ ನಡೆಸಲಾಗುತ್ತಿದೆ.
ಮೊದಲ ಕಂತಿನಲ್ಲಿ ರೂ.1ಲಕ್ಷ 93 ಸಾವಿರ ಅನುದಾನ ಬಿಡುಗಡೆಯಾಗಿದ್ದು, ಗುಣಮಟ್ಟದ ಕಾಮಗಾರಿಯನ್ನು ತ್ವರಿತವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನಕುಮಾರಿ, ಮುಜರಾಯಿ ತಹಶೀಲ್ದಾರ್ ಹೇಮಾವತಿ, ಎಇಇ ಯೋಗೀಶ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹಮೂರ್ತಿ, ಕಾಂಗ್ರೆಸ್ ಓಬಿಸಿ ಅಧ್ಯಕ್ಷ ಪು.ಮಹೇಶ್, ಮುಖಂಡರಾದ ಶ್ರೀನಿವಾಸ್ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….