ದೊಡ್ಡಬಳ್ಳಾಪುರ: ಕರೊನಾ ನಂತರ ಮೊದಲ ಬಾರಿಗೆ ಗಣೇಶ ಹಬ್ಬವನ್ನು ಆಚರಿಸಲು ಜನ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದೊಡ್ಡಬಳ್ಳಾಪುರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಕೆ.ಜಿ.ಶಿವಶಂಕರ್ ಆದೇಶ ಹೊರಡಿಸಿದೆ.
ಈ ಬಗ್ಗೆ ನಗರಸಭೆ ಪೌರಾಯುಕ್ತ ಮರು ಆದೇಶ ಹೊರಡಿಸಿದ್ದು, 2022ರ ಆಗಸ್ಟ್ 31ರ ಬುಧವಾರದಂದು ‘ಗಣೇಶ ಚತುರ್ಥಿ’ ದಿನದ ಪ್ರಯುಕ್ತ ನಗರಸಭೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಆದೇಶ ನಗರಸಭೆ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ. ತಪ್ಪಿದಲ್ಲಿ ಪುರಸಭೆ ಕಾಯ್ದೆ ಅನ್ವಯ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….