ದೊಡ್ಡಬಳ್ಳಾಪುರ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದು ವರ್ಷ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆ, ತಾಲೂಕಿನ ತಮ್ಮಶೆಟ್ಟಿಹಳ್ಳಿ ಬಳಿ ಆಯೋಜಿಸಲಾಗಿರುವ ಜನಸ್ಪಂದನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ಈ ವೇಳೆ ಮಗ್ಗಕ್ಕೆ ಸಿಎಂ ಚಾಲನೆ ನೀಡಿದರೆ, ಇತ್ತೀಚಿಗೆ ಮೃತರಾದ ಪ್ರವೀಣ್ ನೆಟ್ಟೂರು, ಸಚಿವ ಉಮೇಶ್ ಕತ್ತಿ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಈ ಭಾಗದಲ್ಲಿ ಬಿಜೆಪಿ ಪಕ್ಷವನ್ನು ಬೆಳೆಸಲು ಡಾ.ಸುಧಾಕರ್ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿಯನ್ನು ಸೇರಿಸಿದ್ದಾರೆ.
ರಾಜ್ಯದ ಇತರೆ ಕ್ಷೇತ್ರಗಳಲ್ಲಿಯೂ ಇದೇ ರೀತಿ ಸಂಘಟನೆ ಮಾಡಿ, 150ಕ್ಕು ಹೆಚ್ಚು ಸ್ಥಾನ ಗೆದ್ದು ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ದೊಡ್ಡಬಳ್ಳಾಪುರಕ್ಕೆ ಅನೇಕ ಬಾರಿ ಬಂದಿದ್ದೇನೆ. ನೇಕಾರರ ಸಾಲ ಮನ್ನಾ ಮಾಡಿದ್ದೆ. ನಮ್ಮ ಸರ್ಕಾರ ನೀಡಿರುವ ಸೌಲಭ್ಯ ಬೇರೆ ಯಾವುದೇ ಸರ್ಕಾರ ನೀಡಿಲ್ಲ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ 6 ಸಾವಿರದ ಜೊತೆ, ರಾಜ್ಯ ಸರ್ಕಾರದ 04 ಸಾವಿರ ನೀಡಿ ರೈತರಿಗೆ ನೆರವಾಗಿದ್ದೇವೆ.
ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಬೋಟ್ ನಲ್ಲಿ ಓಡಾಡಬೇಕಾಯ್ತು ಅಂತ ವಿಷಾಧ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು ಬೋಟ್ ನಲ್ಲಿ ಓಡಾಡಬೇಕಾದರೆ ಯಾವ ಮಟ್ಟದ ಮಳೆ ಸುರಿದಿದೆ ತಿಳಿದಿಲ್ಲವೇ..? ವಿಧಾನಸಭೆಯಲ್ಲಿ ಸಿದ್ದರಾಮಯ್ಯರಿಗೆ ತಕ್ಕ ಉತ್ತರ ನೀಡಲಿದ್ದೇವೆ.
ಅಧಿಕಾರ, ಹಣಬಲ, ತೋಳ್ ಬಳದಿಂದ ಅಧಿಕಾರಕ್ಕೆ ಬರಬಹುದೆಂದು ನಂಬಿದ್ದ ಕಾಂಗ್ರೆಸ್ ಪಕ್ಷ. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಭ್ರಮ ನಿರಸವಾಗಿದೆ. ಪ್ರಧಾನಿ ಮೋದಿ ಅಧಿಕಾರದಲ್ಲಿರುವವರೆಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಹಿಂದೆ ಹೇಳಿದ್ದೆ. ಅದೇ ರೀತಿ ಇಂದು ಸಿದ್ದರಾಮಯ್ಯ ಅವರಿಗೆ ಹೇಳುತ್ತೇನೆ. ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸುವಂತೆ ನಾನು, ತಾನು ಎಂದು ಕಿತ್ತಾಡುತ್ತಾರೆ. ಮುಂದಿನ ಚುನಾವಣೆಯಲ್ಲಿ 150ಕ್ಕು ಹೆಚ್ಚು ಕ್ಷೇತ್ರದಲ್ಲಿ ಗೆದ್ದು ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರುತ್ತೇವೆ.
ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಭ್ರಮೆಯಲ್ಲಿ ಇರಬೇಡಿ. ರಾಜ್ಯ ಬಿಜೆಪಿ ಸರ್ಕಾರದ ಪರವಾಗಿದೆ ಎಂಬುದಕ್ಕೆ ದೊಡ್ಡಬಳ್ಳಾಪುರದಲ್ಲಿ ಸೇರಿರುವ ಜನಸ್ತೋಮ ಸಾಕ್ಷಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತೊರೆದ ಎಂ.ಡಿ.ಲಕ್ಷ್ಮೀನಾರಾಯಣ್, ಜನತಾದಳವನ್ನು ತೊರೆದ ಅನಿಲ್ ಕುಮಾರ್ ಅವರು ಬಿಜೆಪಿ ಸೇರಿದರು.
ದೊಡ್ಡಬಳ್ಳಾಪುರ ಜಿಲ್ಲೆ: ಕಾರ್ಯಕ್ರವನ್ನು ಉದ್ದೇಶಿಸಿ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು ದೊಡ್ಡಬಳ್ಳಾಪುರ ಜಿಲ್ಲೆ ಎನ್ನುವ ಮೂಲಕ ಕಾರ್ಯಕ್ರಮದಲ್ಲಿ ಅಚ್ಚರಿಗೆ ಕಾರಣರಾದರು.
ಮಂಗಳೂರಿಗೆ ಪ್ರಧಾನಿ ಮೋದಿ ಬಂದಾಗ ಹರಿದು ಬಂದ ಜನಸಾಗರದಂತೆ ದೊಡ್ಡಬಳ್ಳಾಪುರ ಜಿಲ್ಲೆಯಲ್ಲಿ ಆಯೋಜಿಸಿರುವ ಜನಸ್ಪಂದನ ಕಾರ್ಯಕ್ರಮಕ್ಕೆ ಸಮರೋಪಾಧಿಯಲ್ಲಿ ಜನ ಬಂದಿದ್ದಾರೆ. ಕಾಂಗ್ರೆಸ್ ಪಕ್ಷದವರು ಇಂಡಿಯೋ ಜೋಡೋ ಕಾರ್ಯಕ್ರಮ ಮಾಡುತ್ತಿದ್ದಾರೆ. ಅದರೆ ನಮ್ಮ ದೇಶವನ್ನು ಒಡೆಯುವ ಕೆಲಸ ಮಾಡಿದೆ. ಕಾಂಗ್ರೆಸ್ ನಾಯಕರು ಪಕ್ಷವನ್ನು ಬಿಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಅವರಿಗೆ ಸವಾಲೆಸೆಯುತ್ತೇನೆ 2023ರ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ.
ಪ್ರಧಾನಿ ಮೋದಿ ಅವರು ಭಾರತವನ್ನು ಕಟ್ಟುವ ಕಾರ್ಯ ಮಾಡುತ್ತಿದ್ದಾರೆ ಅದ ಮೆಚ್ಚಿ ಜನ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ನಾ ಸಾರಿಗೆ ಮಂತ್ರಿ ಆದ ನಂತರ ಡಿಎಲ್, ವಾಹನದ ದಾಖಲೆ ಸೇರಿದಂತೆ ಆರ್.ಟಿ.ಒ ಇಲಾಖೆಯ 30 ಯೋಜನೆ ಆನ್ಲೈನ್ ಮಾಡಲಾಗಿದೆ.
ಚಾಲಕರ ಮಕ್ಕಳಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಉಚಿತವಾಗಿ ವಿದ್ಯಾಸಿರಿ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಎಂದರು.
ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, 2022ರ ಚುನಾವಣೆಗೆ ಬಿಜೆಪಿ ಊದಿದ ರಣಕಹಳೆಯಾಗಿದೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದಾಗ ಕೆರೆ ತುಂಬಿ ಕೋಡಿ: ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಉತ್ತಮ ಮಳೆಯಾಗಿ ಕೆರೆ ಕುಂಟೆಗಳು ತುಂಬಿ ಗಂಗಮ್ಮನಿಗೆ ಪೂಜೆ ಸಲ್ಲಿಸುತ್ತೇವೆ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಗಬಾರದ ಆಗುತ್ತದೆ. ಅವರ ಲೆಗ್ ಜಗ್ಗೇಶ್ ಚಿತ್ರದ ಡೈಲಾಗ್ ನಂತೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ.ಲೇವಡಿ ಮಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ರಾಷ್ಟ್ರೀಯ ಉಪಾಧ್ಯಕ್ಷೆ ಡಿ.ಕೆ.ಅರುಣ, ಸಂಸದರಾದ ಶೋಭ ಕರಂದ್ಲಾಜೆ, ಭಗವಂತ್ ಕೂಬಾ, ರೇಷ್ಮೆ ಮಂಡಳಿ ಸಚಿವ ಬಿ.ಸಿ.ನಾರಾಯಣಸ್ವಾಮಿ, ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ, ಬಿ.ಸಿ.ಮೋಹನ್, ಸಂಸದ ಮುನಿಸ್ವಾಮಿ, ಡಿ.ವಿ.ಸದಾನಂದ ಗೌಡ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಂದಾಯ ಸಚಿವ ಆರ್.ಅಶೋಕ್, ಸಚಿವರಾದ ಗೋಂವಿದ ಕಾರಜೋಳ, ಅರಘ ಜ್ನಾನೇಂದ್ರ, ಸಿ.ಸಿ.ಪಾಟೀಲ್, ಎಸ್.ಅಂಗಾರ, ಗೋಪಾಲಯ್ಯ, ಬಿ.ಸಿ.ನಾಗೇಶ್, ಲಕ್ಷ್ಮಣ್ ಸೌದಿ, ಡಾ.ಕೆ.ಸುಧಾಕರ್, ಎಂಟಿಬಿ ನಾಗರಾಜ್, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಸೇರಿದಂತೆ ಜನಪ್ರತಿನಿದಿಗಳು, ವಿವಿಧ ಘಟಕದ ಪದಾಧಿಕಾರಿಗಳಿದ್ದರು. (ಮುಂದುವರೆಯುವುದು)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….
