ದೊಡ್ಡಬಳ್ಳಾಪುರ: ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು, ಅಪಘಾತಕ್ಕೊಳಗಾಗಿ ಗಂಭಿರವಾಗಿ ಗಾಯಗೊಂಡಿರುವ ಘಟನೆ ನಾರನಹಳ್ಳಿ ಗೇಟ್ ಸಮೀಪ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅಪಘಾತದಲ್ಲಿ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾನುಪ್ರಕಾಶ್ (28ವರ್ಷ) ತೀವ್ರವಾಗಿ ಗಾಯಗೊಂಡಿರುವ ಕಾನ್ಸ್‌ಟೇಬಲ್ ಎನ್ನಲಾಗಿದೆ.
ದೊಡ್ಡಬಳ್ಳಾಪುರದಿಂದ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ, ಕ್ಯಾಂಟರ್ ನಡುವೆ ಡಿಕ್ಕಿ ಭವಿಸಿದ್ದು, ಭಾನುಪ್ರಕಾಶ್ ಕಾಲಿಗೆ ಗಂಭಿರವಾದ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಭಾನುಪ್ರಕಾಶ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….