ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಆರ್.ಲತಾ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯ ಪುರಸಭೆ, ನಗರಸಭೆಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ, ಸಾರ್ವಜನಿಕರಲ್ಲಿ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಬೇಕು. ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಗರಾಭಿವೃದ್ಧಿ ಕೋಶ ವತಿಯಿಂದ ನಡೆದ ರಾಷ್ಟ್ರೀಯ ಹಸಿರು ನ್ಯಾಯ ಪೀಠವು ನೀಡಿರುವ ಆದೇಶದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಣೆಯ ನಿಯಮಾವಳಿಗಳು-2016ರಲ್ಲಿ ತಿಳಿಸಿರುವಂತೆ ಘನತ್ಯಾಜ್ಯ ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೆಲವು ಘನತ್ಯಾಜ್ಯ ವಿಲೇವಾರಿ ಘಟಕಗಳು ಹೊರತುಪಡಿಸಿದರೆ ಉಳಿದ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ವಹಣೆ ತೃಪ್ತಿದಾಯಕವಾಗಿಲ್ಲ. ಎಲ್ಲಾ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಅವುಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು, ಸಂಗ್ರಹಿಸಿದ ತ್ಯಾಜ್ಯವನ್ನು ಬೇರ್ಪಡಿಸಿ ವಿಲೇವಾರಿ ಮಾಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಪ್ರತಿನಿತ್ಯದ ಕಾರ್ಯನಿರ್ವಹಣೆಗೆ ಅಗತ್ಯವಾಗಿರುವ ಪರಿಕರಗಳನ್ನು ಖರೀದಿಸಿ ಬಳಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳ ಯುಎಲ್‍ಬಿಗಳಲ್ಲಿ ಸಮರ್ಪಕ ಘನತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು ಕೊಡಬೇಕು. ಸಾರ್ವಜನಿಕರು ಮನೆಯಲ್ಲಿ ಹಸಿ ಕಸ, ಒಣ ಕಸ ವಿಂಗಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ನಗರ ಸ್ಥಳೀಯ ಸಂಸ್ಥೆಗಳ ಕಸದ ವಾಹನಗಳಲ್ಲಿಯೇ ಹಾಕಬೇಕು. ಸ್ವಚ್ಛತಾ ಕ್ರಮಗಳ ಪಾಲನೆ ಕುರಿತು ಕರಪತ್ರಗಳು, ಭಿತ್ತಿಪತ್ರಗಳ ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ಹೆಚ್ಚಿನ ಅರಿವು ಮೂಡಿಸುವ ಕೆಲಸವನ್ನು ನಗರ ಸ್ಥಳೀಯ ಸಂಸ್ಥೆಗಳು ಮಾಡಬೇಕು. ನಿಯಮ ಉಲ್ಲಂಘಿಸಿದ್ದಲ್ಲಿ ಘನತ್ಯಾಜ್ಯ ನಿರ್ವಹಣಾ ನಿಯಮಗಳ ಅನ್ವಯ ಸಾರ್ವಜನಿಕರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿದರು.

ಪರಿಸರ ರಕ್ಷಣೆಗಾಗಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್‌ ಕೆಲವು ನಿಯಮಾವಳಿಗಳನ್ನು ನೀಡಿದೆ. ಅದರಂತೆ ತ್ಯಾಜ್ಯ ನಿರ್ವಹಣೆ ಮಾಡಬೇಕು . ಪ್ಲಾಸ್ಟಿಕ್‌ ಮಾರಾಟ ನಿಯಂತ್ರಿಸಬೇಕು. ಪ್ಲಾಸ್ಟಿಕ್‌ ಉತ್ಪಾದಕರು ಹಾಗೂ ಮಾರಾಟಗಾರರಿಗೆ ತಿಳಿವಳಿಕೆ ನೀಡಬೇಕು. ತಹಸೀಲ್ದಾರ್, ನಗರಸಭೆ, ಪುರಸಭೆ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು,  ಜಂಟಿಯಾಗಿ ಪ್ಲಾಸ್ಟಿಕ್ ಮಾರಾಟಗಾರರ ಮಳಿಗೆಗಳ ಮೇಲೆ ವಾರದಲ್ಲಿ ಎರಡು ಬಾರಿ ದಾಳಿ ನಡೆಸಿ, ಪ್ರಕರಣ ದಾಖಲಿಸಬೇಕು. ದಾಳಿ ವೇಳೆ ವಿಡಿಯೋ ಹಾಗೂ ಫೋಟೋಗ್ರಾಪಿ ಕಡ್ಡಾಯವಾಗಿ ಮಾಡಬೇಕು. ಪ್ರಕರಣ ದಾಖಲಿಸಲು ಸಾಕ್ಷಿಗಳನ್ನು ಕಲೆಹಾಕಬೇಕು‌. ಸ್ವಚ್ಚತೆ ಕಾಪಾಡದ ಮಳಿಗೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಪ್ಲಾಸ್ಟಿಕ್‌ ಮಾರಾಟದ ವಿರುದ್ಧ ಕಾರ್ಯಾಚರಣೆ ನಡೆಸದೇ ನೆಪ ಹೇಳುವ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು.

ಪೌರ ಕಾರ್ಮಿಕರು ವಾಹನದ ಮೂಲಕ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿಬೇಕು. ಈ ವೇಳೆ ತ್ಯಾಜ್ಯ ಬೇರ್ಪಡಿಸಿಬೇಕು. ಬೀದಿ ಬದಿ ಹಾಗೂ ಸಂತೆಯ ವ್ಯಾಪಾರಿಗಳು ಸಂಜೆ ವೇಳೆ ಕಸವನ್ನು ರಸ್ತೆ ಬದಿಗೆ ಎಸೆದು ಹೋಗುತ್ತಾರೆ, ಇದನ್ನು ನಿಯಂತ್ರಿಸಲು ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ ಸ್ವಚ್ಚತೆಯ ಕುರಿತು ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯ ನೆಲಭರ್ತಿ ಜಾಗ ಹೊಂದಿರದ ನಗರ ಸ್ಥಳೀಯ ಸಂಸ್ಥೆಗಳಿಗೆ ಜಾಗದ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಘನತ್ಯಾಜ್ಯದಿಂದ ಬರುವ ಹೊರಹೊಮ್ಮುವ ಲಿಯಾಸಿಯೇಟ್ ದ್ರವವು ಜಲಮೂಲಗಳಾದ ನದಿ, ಕೆರೆ, ನೀರಿನ ಹೊಂಡಗಳಿಗೆ ಸೇರಿ ಕಲುಷಿತಗೊಳ್ಳದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ  ಘನತ್ಯಾಜ್ಯ ಸಮಗ್ರ ನಿರ್ವಹಣೆಯ ಬಗ್ಗೆ ಹೆಚ್ಚಾಗಿ ಐ.ಇ.ಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಹಸಿರು ನ್ಯಾಯಪೀಠದ ಆದೇಶದಲ್ಲಿ ಸೂಚಿಸಿರುವಂತೆ ಸಣ್ಣ ಮತ್ತು ದೊಡ್ಡ ಕಾಲುವೆಗಳಿಗೆ/ ನದಿ ನೀರಿನ ಮೂಲಗಳಿಗೆ ಘನತ್ಯಾಜ್ಯ ವಸ್ತುಗಳ ಕಲುಷಿತಗೊಳ್ಳದಂತೆ ನೆಟ್‌ಗಳನ್ನು ಅಳವಡಿಸಬೇಕು. ಕಸವನ್ನು ಬೀದಿಗಳಲ್ಲಿ ಎಸೆಯುವಂತೆ ಅಥವಾ ಸುಡದಂತೆ ಕ್ರಮ ವಹಿಸಬೇಕು, Bilk Waste Generators ಗಳ ಮೂಲಕ ಆಯಾ ವ್ಯಾಪ್ತಿಯ ಘನ ತ್ಯಾಜ್ಯ ನಿರ್ವಹಣಾ ಘಟಕದ ಆವರಣದಲ್ಲಿಯೇ ಕಸವನ್ನು ನಿರ್ವಹಣೆ ಮಾಡಿ ಕಾಂಪೋಸ್ಟಿಂಗ್ ಮಾಡಿಸಬೇಕು.

ಚಿಂದಿ ಆಯುವವರನ್ನು, ಸ್ವ-ಸಹಾಯ ಗುಂಪುಗಳನ್ನು ಘನತ್ಯಾಜ್ಯ ನಿರ್ವಹಣೆಯಲ್ಲಿ ಪಾಲುದಾರರಾಗಿ ಮಾಡಿಕೊಂಡು, ಹಸಿರು ನ್ಯಾಯ ಪೀಠದ ಆದೇಶದಂತೆ ಮೇಟೀರಿಯಲ್ ರಿಕೋವಲ್ ಫೆಸಿಲಿಟಿ ಅಥವಾ ಸೆಕೆಂಡ್ ಸ್ಟೋರೇಜ್ ಸ್ಥಾಪಿಸಿರುವ ಕುರಿತು, ವಿಕೇಂದ್ರಿಕೃತ ಸಂಸ್ಕರಣಾ ಘಟಕಗಳನ್ನು ಅಳವಡಿಸಬೇಕು, ಎಲ್ಲಾ ನಗರಸಭೆ/ಪುರಸಭೆಗಳಲ್ಲಿ ಪಾರ್ಕ್‌ ಉದ್ಯಾನವನಗಳಲ್ಲಿ ರಾಸಾಯನಿಕ ಗೊಬ್ಬರ ಬಳಸದಂತೆ ಕ್ರಮವಹಿಸಬೇಕು ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣೆಯಲ್ಲಿ ನಿಯಮ 2016ರಂತೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸ್ಥಳೀಯ ಸಂಸ್ಥೆಗಳಿಗೆ Environment compensation ದಂಡ ವಿಧಿಸಬೇಕು ಎಂದರು.

ಘನ ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳಿಗೆ ಈಗಾಗಲೇ ನೋಟೀಸ್ ಜಾರಿಮಾಡಲಾಗಿದೆ ಎಂದ ಜಿಲ್ಲಾಧಿಯವರು, ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರಲ್ಲದೆ ಘನತ್ಯಾಜ್ಯ ನಿರ್ವಹಣೆ ವಿಫಲವಾದಲ್ಲಿ ನಿಯಮಾನುಸಾರ ಅಂತಹ ಅಧಿಕಾರಿಗಳನ್ನು ದಂಡನೆಗೆ ಗುರಿಪಡಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ,  ದೇವನಹಳ್ಳಿ ಮತ್ತು ಹೊಸಕೋಟೆಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಅನಿಲ್‌ಕುಮಾರ್, ದೊಡ್ಡಬಳ್ಳಾಪುರದ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ರಮೇಶ್.ಕೆ.ಎಂ, ನೆಲಮಂಗಲದ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಮರಿಮಾದಯ್ಯ ಸೇರಿದಂತೆ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಪರಿಸರ ಅಭಿಯಂತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!