ಗೌರಿಬಿದನೂರು: ತಾಲ್ಲೂಕಿನ ತೊಂಡೆಬಾವಿ ಹೋಬಳಿಯ ಬಂದಾರ್ಲಹಳ್ಳಿ ಬಳಿ ರಾಜ್ಯ ಹೆದ್ದಾರಿ 09 ರಲ್ಲಿ ಗುರುವಾರ ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ.
ಈ ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರರು (ದೊಡ್ಡಬಳ್ಳಾಪುರ ಮೂಲದ)ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಗುರುತು ಮತ್ತು ವಿಳಾಸ ಪತ್ತೆಯಾಗಿಲ್ಲ.
ಸ್ಥಳಕ್ಕೆ ಗೌರಿಬಿದನೂರು ಸರ್ಕಲ್ ಇನ್ಸ್ಪೆಕ್ಟರ್ ಸತ್ಯನಾರಾಯಣ ಹಾಗೂ ಮಂಚೇನಹಳ್ಳಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹರೀಶ್ ಭೇಟಿ ಪರಿಶೀಲನೆ ನಡೆಸಿದರು
ಘಟನೆ ಕುರಿತಂತೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….