ದೊಡ್ಡಬಳ್ಳಾಪುರ: ಶಾಲಾ ಅವಧಿಯಲ್ಲಿ ಮೊಬೈಲ್ ಫೋನ್ ಬಳಸುವುದು ಕಡ್ಡಾಯವಾಗಿ ನಿಷೇಧಿಸಿ ಆದೇಶವಿದ್ದರು, ನಿಯಮ ಉಲ್ಲಂಘಿಸಿ ಮೊಬೈಲ್ ಬಳಸುತ್ತಿರುವ ಶಿಕ್ಷಕರಿಗೆ ಬಿಇಒ ಆರ್.ರಂಗಪ್ಪ ಬಿಸಿ ಮುಟ್ಟಿಸಿದ್ದಾರೆ.
ಈ ಕುರಿತಂತೆ ಶಾಲೆಗಳಿಗೆ ಸುತ್ತೋಲೆ ಹೊರಡಿಸಿರುವ ಅವರು, ಸರ್ಕಾರಿ ಆದೇಶ ಹಾಗೂ ಸುತ್ತೋಲೆಗಳಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ನೌಕರರ ವರ್ಗದವರು ಅದರಂತೆ ಶಾಲೆಗಳಲ್ಲಿ ಮೊಬೈಲ್‌ಗಳನ್ನು ಬಳಸಿವುದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಕಾರಣ ಶಾಲೆಗಳಲ್ಲಿ ಉತ್ತಮ ವಾತಾವರಣವನ್ನು ಕಲ್ಪಿಸುವ ಸಲುವಾಗಿ ಮೊಬೈಲ್ ಬಳಕೆಯನ್ನು ನಿಷೇಧಿಸಲು ಈಗಾಗಲೇ ಹಲವಾರು ಬಾರಿ ಸೂಚನೆಗಳನ್ನು ನೀಡಿ ಎಚ್ಚರಿಕೆ ನೀಡಲಾಗಿದೆ.
ಆದರೂ ಅನೇಕ ಕಡೆಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ಗಳನ್ನು ಬಳಸುತ್ತಿರುವುದನ್ನು ಗಮನಿಸಿ ಸಾರ್ವಜನಿಕ ದೂರುಗಳು ದಾಖಲಾಗಿರುತ್ತದೆ. ಆದ್ದರಿಂದ ಶಾಲೆಗಳಲ್ಲಿ ಮೊಬೈಲ್‌ಗಳನ್ನು ಬಳಕೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು. ಶಾಲೆಗಳಲ್ಲಿ ಬೋಧನಾ ಅವಧಿಯಲ್ಲಿ ಯಾವುದೇ ಶಿಕ್ಷಕರು ಮೊಬೈಲ್‌ಗಳನ್ನು ಉಪಯೋಗಿಸುವುದು ಕಂಡಲ್ಲಿ ಅಕ್ಷಮ್ಯ ಅಪರಾಧವೆಂದು ಭಾವಿಸಿ, ಅವರುಗಳ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂಬ ಅಂತಿಮ ಎಚ್ಚರಿಕೆಯನ್ನು ನೀಡಿದ್ದಾರೆ.
ಶಾಲಾ ಮುಖ್ಯಶಿಕ್ಷಕರಿಗೆ ವಿನಾಯಿತಿ ನೀಡಲಾಗಿದ್ದರೂ ಸಹ, ತಮ್ಮ ಮೊಬೈಲ್‌ಗಳನ್ನು ಸೈಲೆಂಟ್ ಮೋಡ್‌ನಲ್ಲಿಟ್ಟುಕೊಂಡಿರಲು ಸೂಚಿಸಿದೆ. ಹಾಗೂ ಅವರು ತಮ್ಮ ಬೋಧನಾ ಕಾರ್ಯದ ಅವಧಿಯಲ್ಲಿ ಮೊಬೈಲ್‌ಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಉಳಿದ ಶಿಕ್ಷಕರು, ನೌಕರರು ಶಾಲಾ ಅವಧಿಯಲ್ಲಿ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡುವಂತೆ ಮುಖ್ಯಶಿಕ್ಷಕರು ಕ್ರಮವಹಿಸುವುದು. ಒಂದು ವೇಳೆ ಪುನರಾವರ್ತಿತವಾದಲ್ಲಿ ಮುಖ್ಯ ಶಿಕ್ಷರನ್ನೇ ನೇರ ಹೊಣೆಗಾರರಾನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸುತ್ತೊಲೆಯಲ್ಲಿ ಉಲ್ಲೇಖಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….