ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮವು ಸೆಪ್ಟೆಂಬರ್ 17 ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಆರ್.ಲತಾ ಅವರು ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಯ, ಕಾರಹಳ್ಳಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಅರ್ಹರಿಗೆ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ ಹಾಗೂ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಅದರಂತೆಯೇ ಸೆಪ್ಟೆಂಬರ್ 17 ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ತಹಶೀಲ್ದಾರ್ ಮೋಹನಕುಮಾರಿ ಅವರು ದೊಡ್ಡಬಳ್ಳಾಪುರ ತಾಲ್ಲೂಕು, ದೊಡ್ಡಬೆಳವಂಗಲ ಹೋಬಳಿಯ, ಚಿಕ್ಕಹೆಜ್ಜಾಜಿ ಗ್ರಾಮದಲ್ಲಿ.
ನೆಲಮಂಗಲ ತಾಲ್ಲೂಕಿನ ತಹಶೀಲ್ದಾರ್ ಮಂಜುನಾಥ್.ಕೆ ಅವರು ನೆಲಮಂಗಲ ತಾಲ್ಲೂಕು, ಕಸಬಾ ಹೋಬಳಿಯ, ಬೈರಸಂದ್ರ ಗ್ರಾಮದಲ್ಲಿ.
ಹೊಸಕೋಟೆ ತಾಲ್ಲೂಕಿನ ತಹಶೀಲ್ದಾರ್ ಮಹೇಶ್‌ಕುಮಾರ್.ಕೆ.ಎಂ. ಅವರು ಹೊಸಕೋಟೆ ತಾಲ್ಲೂಕು, ಜಡಿಗೇನಹಳ್ಳಿ ಹೋಬಳಿಯ, ದೊಡ್ಡನಲ್ಲಾಳ ಗ್ರಾಮದಲ್ಲಿ, ಎಲ್ಲಾ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಿ, ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….