ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ ಯಡಿ 1964 ರ ಕಾಲಂ 94ಎ (4) ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57ರಲ್ಲಿ ಕಾಲಾವಕಾಶವನ್ನು ವಿಸ್ತರಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡಿಕೊಂಡಿರುವ ರೈತರು ಮತ್ತು ಸಣ್ಣ ರೈತರ ಹಿತದೃಷ್ಟಿಯಿಂದ ಜಮೀನುಗಳನ್ನು ಸಕ್ರಮಗೊಸಿಸುವ ಉದ್ದೇಶದಿಂದ ಬಹಳಷ್ಟು ಅನಧಿಕೃತ ಸಾಗುವಳಿದಾರರು ತಿಳುವಳಿಕೆಯ ಕೊರತೆಯಿಂದ ಅರ್ಜಿಗಳನ್ನು ಸಲ್ಲಿಸದೆ ಉಳಿದಿದ್ದಾರೆ.
ಈ ನಿಟ್ಟಿನಲ್ಲಿ ರೈತರಿಗೆ ಮತ್ತೊಂದು ಅವಕಾಶ ನೀಡುವ ದೃಷ್ಟಿಯಿಂದ ನಮೂನೆ-57 ರ ಅಡಿಯಲ್ಲಿ ದಿ. 30.05.22 ರಿಂದ ಒಂದು ವರ್ಷದ ಅವಧಿಯವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಇಲಾಖೆಯ (ಭೂ ಮಂಜೂರಾತಿ-1) ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಸಿ.ಬಲರಾಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….