ಗುಲ್ಬರ್ಗಾ ಮತ್ತು ವಿಜಯಪುರದಲ್ಲಿ ಜವಳಿ ಪಾರ್ಕ್ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪುರ: ರಾಜ್ಯದ ಎರಡು ಜವಳಿ ಪಾರ್ಕ್ ಗಳನ್ನು ಗುಲ್ಬರ್ಗಾ ಮತ್ತು ವಿಜಯಪುರದಲ್ಲಿ ಸ್ಥಾಪಿಸಲು ಅನುದಾನ ನೀಡಿ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಒಂದು ಸಾವಿರ ಎಕರೆಯಲ್ಲಿ ನಿರ್ಮಾಣವಾಗಲಿರುವ ಈ ಜವಳಿ ಪಾರ್ಕ್ ನಿಂದ ಸುಮಾರು 25 ಸಾವಿರ ಯುವಕರಿಗ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.

ಅವರು ಶುಕ್ರವಾರ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್, ವಿಜಯಪುರ ಇವರ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಜೆ.ಎಸ್.ಎಸ್ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿರುವ  *“ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ”ಗೊಳಿಸಿ ಮಾತನಾಡಿದರು.

ದ್ರಾಕ್ಷಿ ಬೆಳೆಯ ಅಭಿವೃದ್ಧಿ ಹಾಗೂ ಸಂಗ್ರಹಣೆಗಾಗಿ 35 ಕೋಟಿ ರೂ.ಅನುದಾನ: 400 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಇಂದು ಚಾಲನೆ ನೀಡಲಾಗಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಮೀಸಲಿರಿಸಲಾಗಿದೆ. ಕೃಷ್ಣಾ ಮೇಲ್ದಂಡೆ ಹಂತ 3 ರ ಯೋಜನೆಯನ್ನು ಕಾರ್ಯಗತಗೊಳಿಸಲು ಅನುವಾಗುವಂತೆ ನ್ಯಾಯಾಲಯದಿಂದ ಆದೇಶ ಬರಲಿದೆ ಎಂಬ ವಿಶ್ವಾಸವಿದೆ. ಅಧಿಸೂಚನೆ ನಂತರ ಕೃಷ್ಣಾ ಮೇಲ್ದಂಡೆ ಹಂತ 3 ರ ಯೋಜನೆಯಿಂದ ಮುಳುಗಡೆಯಾಗಲಿರುವ ಗ್ರಾಮಗಳ ಜನರಿಗೆ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳನ್ನು  ಮಾರ್ಚ್ ತಿಂಗಳೊಳಗೆ 10,000 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ತೀರ್ಮಾನಿಸಲಾಗಿದೆ. ದ್ರಾಕ್ಷಿ ಬೆಳೆಯ ಅಭಿವೃದ್ಧಿ ಹಾಗೂ ಸಂಸ್ಕರಣೆಗಾಗಿ ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿ  35 ಕೋಟಿ ರೂ.ಗಳನ್ನು ನೀಡಲಾಗಿದೆ. ದ್ರಾಕ್ಷಿ ಬೆಳೆಗಾರರಿಗೆ ಅನುಕೂಲವಾಗುವಂತೆ ಶೀತಲ ಸಂಗ್ರಹಾಗಾರದ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಉತ್ತರ ಕರ್ನಾಟಕ ಟೂರಿಸಂ ಸರ್ಕೀಟ್ ನಿಂದ ಯುವಕರಿಗೆ ಉದ್ಯೋಗಾವಕಾಶ: ರಾಜ್ಯದಲ್ಲಿ ಉತ್ತರ ಮತ್ತು ದಕ್ಷಿಣ ಟೂರಿಸಂ ಸರ್ಕೀಟ್ ಗಳನ್ನು ಮಾಡಲಾಗಿದೆ. ಉತ್ತರ ಸರ್ಕೀಟ್ ನಲ್ಲಿ ಹಂಪಿ, ಬಾದಾಮಿ, ಪಟ್ಟದಕಲ್ಲು  ಮತ್ತು ವಿಜಯಪುರ ಜಿಲ್ಲೆಗಳಿವೆ. ಇದಕ್ಕೆ ಪೂರಕವಾದ ಸಕಲ ವ್ಯವಸ್ಥೆಗಳನ್ನು ಕಲ್ಪಿಸಿ ದೇಶ ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸಲಾಗುತ್ತದೆ. ಪ್ರವಾಸೋದ್ಯಮ ಅಭಿವೃದ್ಧಿಯಿಂದ ವಿಜಯನಗರ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶವನ್ನೂ ಕಲ್ಪಿಸಿದಂತಾಗುತ್ತದೆ. ಈ ಐದು ಕೊಡುಗೆಗಳನ್ನು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ನೀಡಲಾಗುವುದು. ರೇವಣಸಿದ್ಧೇಶ್ವರ  ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ಫೆಬ್ರವರಿಯೊಳಗೆ ವಿಜಯಪುರದ ವಿಮಾನ ನಿಲ್ದಾಣ ಉದ್ಘಾಟನೆ: ಮುಂದಿನ ಮೂರು ತಿಂಗಳಲ್ಲಿ ವಿಜಯಪುರದ ವಿಮಾನ ನಿಲ್ದಾಣದ ಅಭಿವೃದ್ಧಿಗೆ 125 ಕೋಟಿ ರೂ. ಅನುದಾನಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿ, ಮುಂದಿನ ಫೆಬ್ರವರಿಯೊಳಗೆ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿಯವರಿಂದ ಉದ್ಘಾಟಿಸಲಾಗುವುದು. ವಿಮಾಣನಿಲ್ದಾಣಕ್ಕೆ ಬಸವೇಶ್ವರರ ಹೆಸರನ್ನು ನೀಡಲು ಕೇಂದ್ರದಿಂದ ಅನುಮತಿ ಪಡೆಯಲಾಗುವುದು .ಸಾರ್ವಜನಿಕ ಆಸ್ಪತ್ರೆ ಆಗುವ ಬೇಡಿಕೆಯಿದ್ದು, ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಪಿಪಿಪಿ ಮಾದರಿಯಲ್ಲಿ ಸರ್ಕಾರಿ ವೈದ್ಯಕೀಯ ಆಸ್ಪತ್ರೆ ಮಂಜೂರು ಮಾಡಲಾಗುವುದು ಎಂದರು.

ರೈತರ ಮಕ್ಕಳಿಗೆ ವಿದ್ಯಾನಿಧಿಯಿಂದ 14 ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ. ಮೀನುಗಾರರು, ನೇಕಾರರು, ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳು, ರೈತ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರ ರೈತಪರ, ಜನಪರ ಹಾಗೂ ಯುವಜನರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ದೇಶಕಟ್ಟಲು ಜನಸಂಖ್ಯೆಯನ್ನೇ ಶಕ್ತಿಯನ್ನಾಗಿ ಮಾಡುವ ಸಂಕಲ್ಪ ಮಾಡಿದ್ದಾರೆ.  ಜ್ಞಾನಯೋಗಿ ಶ್ರೀ ಸಿದ್ಧೇಶ್ವರರು ನಡೆದಾಡಿದ ಪುಣ್ಯಭೂಮಿ ವಿಜಯಪುರ. ಈ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ. ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಡವರಿಗೆ ಉತ್ತಮ ಆರೋಗ್ಯ ಸೌಲಭ್ಯ ನೀಡಲಿದೆ. ವಿಜಯಪುರದ ಆರೋಗ್ಯ ಕ್ಷೇತ್ರಕ್ಕೆ ಈ ಆಸ್ಪತ್ರೆ ದೊಡ್ಡ ಕೊಡುಗೆ ನೀಡಲಿದೆ ಎಂದರು.

ಸಮಾರಂಭದಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ,ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಗೋವಿಂದ ಕಾರಜೋಳ, ಶಾಸಕ ಬಸವರಾಜ ಯತ್ನಾಳ್,  ಮೊದಲಾದವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!